ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಮುಂದಾದ ಸರ್ಕಾರ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂತಸ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಮುಂದಾದ ಸರ್ಕಾರ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂತಸ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತುಮಕೂರು ಜಿಲ್ಲೆ ಬಾಲ ಭವನದಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಬಗ್ಗೆ ಪ್ರಮುಖ ಪ್ರಕಟಣೆ ಮಾಡಿದರು. ಈಗಾಗಲೇ ಅವರಿಗೆ ಗೌರವಧನದ ಹೆಚ್ಚಳ ಮಾಡುವ ಪ್ರಕ್ರಿಯೆ ನಡೆದಿದ್ದು, ಮುಂದಿನ ದಿನಗಳಲ್ಲಿ ಮತ್ತೊಂದು 1000 ರೂಪಾಯಿಯಷ್ಟು ಹೆಚ್ಚಳ ಸಾಧ್ಯತೆ ಇರುವುದಾಗಿ ತಿಳಿಸಿದರು.

ಚುನಾವಣಾ ಕೆಲಸದಿಂದ ಈ ಸಿಬ್ಬಂದಿಯನ್ನು ವಿಮುಕ್ತಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದರು. ಜಾತಿ ಸಮೀಕ್ಷೆಯಲ್ಲಿನ ಯಶಸ್ವಿ ಸಹಾಯ ಮತ್ತು ಗೃಹಲಕ್ಷ್ಮಿ ಯೋಜನೆ ಜಾತಿ ಸಮೀಕ್ಷೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರಾಮಾಣಿಕವಾಗಿ ಸಹಾಯ ಮಾಡುತ್ತಿರುವುದಕ್ಕೆ ಹೃತ್ಪೂರ್ವಕ ಧನ್ಯವಾದ ತಿಳಿಸಿದರು.

ನವೆಂಬರ್ 28ರಂದು ಬೆಂಗಳೂರಿನಲ್ಲಿ ಐಸಿಡಿಎಸ್ ಸುವರ್ಣ ಮಹೋತ್ಸವ ಹಾಗೂ ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ನಡೆಯಲಿವೆ. ಈ ಬಹುನಿರೀಕ್ಷಿತ ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಪಾಲುದಾರರು ಸಹಕರಿಸಬೇಕಾಗಿದ್ದು, ತುಮಕೂರು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸುವಂತೆ ಸಚಿವರು ಮನವಿ ಮಾಡಿದರು.

ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಇಲಾಖೆಯಲ್ಲಿ ಬದಲಾವಣೆ
“ಮಂತ್ರಿಯಾದ ಬಳಿಕ ನಮ್ಮ ಇಲಾಖೆಯಲ್ಲಿ ಶಿಸ್ತಿನಿಂದ ಕೆಲಸ ಮಾಡುತ್ತಿರುವೆವು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಗೃಹಲಕ್ಷ್ಮಿ ಯೋಜನೆ ಮೂಲಕ ಈಗ ನಮ್ಮ ಇಲಾಖೆ ಮನೆ ಮನೆಗೆ ಹೆಸರಾಗಿದ್ದು, ಮೊದಲು ಕೆಡಿಪಿ ಸಭೆಗಳಲ್ಲಿ ಕ್ರಿಯಾಶೀಲತೆ ಕಡಿಮೆಇತ್ತು; ಆದರೆ ಇದೀಗ ಮೊದಲ ಸ್ಥಾನದಲ್ಲಿದೆ.

“ತುಮಕೂರು ಜಿಲ್ಲೆಯಲ್ಲಿ ಎಫ್ ಆರ್ ಎಸ್ ಸಿಸ್ಟಮ್ ಶೇಕಡಾ 99ರಷ್ಟು ಜಾರಿಗೆ ತಂದಿರುವ ಯಶಸ್ಸಿಗೆ ಹೆಚ್ಚುವರಿ ಪ್ರಶಂಸೆ ನೀಡಿದ ಹೇಳಿದರು.

ಸಾಮಾಜಿಕ ಬದ್ಧತೆ ಮತ್ತು ಅಂತರಂಗದ ಸೇವೆ:
ಸಚಿವೆ ತಮ್ಮ ಇಲಾಖೆಯನ್ನು ಮಹಿಳೆಯರಿಗೆ ವಿಶೇಷ ಮಾನವೀಯತೆ ಮತ್ತು ಅನುಕಂಪದಿಂದ ಕಾರ್ಯನಿರ್ವಹಿಸುವ ಸ್ಥಳ ಎಂದು ಪರಿಶೀಲಿಸಿದರು. ಕೇಂದ್ರ ಸರ್ಕಾರದ ಸಹಕಾರದೊಂದಿಗೆ ರಾಜ್ಯದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಹಾಗೂ ಅನುದಾನ ವೃದ್ಧಿ ಆಗಿದ್ದು, ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಸಹಕಾರ ಸಂಘಗಳಿಗೆ ತುಮಕೂರಿನಿಂದ ನಾಲ್ಕು ಷೇರುದಾರರನ್ನು ನೋಂದಾಯಿಸಲು ಕರೆ ನೀಡಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು