ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ

ಹೊರ ರಾಜ್ಯಗಳ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕಾ ಕಾರ್ಯಕ್ರಮ: ಸಚಿವ ಡಾ.ಕೆ.ಸುಧಾಕರ್‌

PPeepal Media Desk

Peepal Media Desk ರಾಜ್ಯ

• 2 ನಿಮಿಷದ ಓದು

ಹೊರ ರಾಜ್ಯಗಳ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕಾ ಕಾರ್ಯಕ್ರಮ: ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು: ಜಿಲ್ಲಾಡಳಿತ ವತಿಯಿಂದ ನಡೆದ 67ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯದ ಎಲ್ಲಾ ವೈದ್ಯಕೀಯ, ಅರೆ ವೈದ್ಯಕೀಯ, ನರ್ಸಿಂಗ್ ಕಾಲೇಜುಗಳ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಲಿಸುವ ಕಾರ್ಯಕ್ರಮವನ್ನು ಇದೇ ವರ್ಷದಿಂದ ಜಾರಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಘೋಷಣೆ ಮಾಡಿದ್ದಾರೆ.

ಸಮಾರಂಭದಲ್ಲಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್‌, ʼಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿ ಮಾಡಿದ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ, ಮಾತೃಭಾಷಾ ಕಲಿಕೆಗೆ ಆದ್ಯತೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಕೆಲ ರಾಜ್ಯಗಳಲ್ಲಿ ಈಗಾಗಲೇ ಮಾತೃಭಾಷೆಯಲ್ಲಿ ಕಲಿಯಲು ಅವಕಾಶ ನೀಡಲಾಗಿದೆ. ಇದೇ ನವ ಭಾರತದ ಪರಿಕಲ್ಪನೆಯಾಗಿದೆ. ಅದೇ ರೀತಿ, ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬಂದ ಎಲ್ಲಾ ವೈದ್ಯಕೀಯ ವಿದ್ಯಾರ್ಥಿಗಳಿಗೆ ಇದೇ ವರ್ಷದಿಂದ ಕನ್ನಡ ಭಾಷೆಯನ್ನು ಕಲಿಸುವ ಕಾರ್ಯಕ್ರಮವನ್ನು ಜಾರಿ ಮಾಡಲಾಗುವುದು. ಕರ್ನಾಟಕದಲ್ಲಿ ನಾವು ಇರುವುದಲ್ಲ, ನಮ್ಮೊಳಗೆ ಕರ್ನಾಟಕ ಇರಬೇಕು. ಅದಕ್ಕಾಗಿ ʼಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ವಿಧೇಯಕ 2022ʼ ತರುವ ಚಿಂತನೆ ಸರ್ಕಾರಕ್ಕಿದೆʼ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಹೋದರೆ ವಿಭಿನ್ನವಾದ ಸೊಗಸಾದ ಭಾಷೆ ಕೇಳಬಹುದು. ಹಳೇ ಮೈಸೂರಿಗೆ ಹೋದರೆ ಬೇರೆ ರೀತಿಯ ಕನ್ನಡ ಕೇಳಬಹುದು. ಉತ್ತರ ಕನ್ನಡ ಜಿಲ್ಲೆಗೆ ಹೋದರೆ ಹವ್ಯಕ ಕನ್ನಡ, ದಕ್ಷಿಣ ಕನ್ನಡಕ್ಕೆ ಹೋದರೆ ಬೇರೆ ಶೈಲಿಯ ಕನ್ನಡ, ಕುಂದಾಪುರಕ್ಕೆ ಹೋದರೆ ಕುಂದ ಕನ್ನಡ ಕೇಳಬಹುದು. ಹಾಗೆಯೇ ಆಚಾರ, ವಿಚಾರ, ತಿಂಡಿಗಳು ಬದಲಾಗುತ್ತವೆ. ಯಕ್ಷಗಾನ, ಬಯಲಾಟ, ವೀರಗಾಸೆ, ದೈವಾರಾಧನೆ, ಜೋಗಪ್ಪ ಮೊದಲಾದ ಕಲೆಗಳು ನಮ್ಮಲ್ಲಿವೆ ಎಂದು ಮಾತನಾಡಿದರು.

ಕನ್ನಡಕ್ಕೆ ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವಿದ್ದು, ಜಗತ್ತಿನಲ್ಲಿ ಆರೂವರೆ ಸಾವಿರ ಭಾಷೆಗಳಲ್ಲಿ ಕನ್ನಡ 27ನೇ ಸ್ಥಾನದಲ್ಲಿದೆ ಎನ್ನಲಾಗುತ್ತದೆ. ವಿಶ್ವ ಲಿಪಿಗಳ ರಾಣಿ ಎಂದು ಕನ್ನಡದ ಲಿಪಿಯನ್ನು ಬಣ್ಣಿಸಲಾಗಿದೆ. ಭಾರತವನ್ನು ಹಲವಾರು ದಶಕ ಆಳಿದ ಬ್ರಿಟಿಷರ ದೇಶದ ಪ್ರಧಾನಿಯಾಗಿ ಕರ್ನಾಟಕದ ಅಳಿಯ ರಿಷಿ ಸುನಕ್‌ ಆಯ್ಕೆಯಾಗಿದ್ದಾರೆ ಎಂಬುದು ಹೆಮ್ಮೆಯ ವಿಚಾರ ಎಂದರು.

ನಾಡಪ್ರಭು ಕೆಂಪೇಗೌಡರು ಆಗಿನ ಕಾಲದಲ್ಲೇ ಸರ್ವಜನಾಂಗದ ಶಾಂತಿ ತೋಟ ಸ್ಥಾಪಿಸಿದ್ದರು. ಸಮಾನತೆಗೆ ಒತ್ತು ಕೊಟ್ಟಿದ್ದ ಅವರು, ಜಾತಿ ಸಮುದಾಯಗಳಿಗೆ ಪೂರಕವಾಗಿ ಪೇಟೆಗಳನ್ನು ನಿರ್ಮಾಣ ಮಾಡಿದ್ದರು. ಅಂತಹ ಪುಣ್ಯಾತ್ಮನನ್ನು ನಮ್ಮ ಸರ್ಕಾರ ಸ್ಮರಣೆ ಮಾಡುತ್ತಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 108ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್‌ 11ರಂದು ಈ ಪ್ರತಿಮೆ ಅನಾವರಣ ಮಾಡಲಿದ್ದಾರೆ. ಇದು ಬೆಂಗಳೂರು ಗ್ರಾಮಾಂತರದ ಜನರಿಗೆ ವಿಶೇಷ ಕ್ಷಣವಾಗಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದರು.

100 ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. 438 ನಮ್ಮ ಕ್ಲಿನಿಕ್‌ಗಳನ್ನು ಇದೇ ನವೆಂಬರ್‌ನಲ್ಲಿ ಆರಂಭಿಸಲಾಗುವುದು. ಬಡತನ ರೇಖೆಗಿಂತ ಕೆಳಗಿರುವವರಿಗೆ ಗುಣಮಟ್ಟದ ಶಿಕ್ಷಣ, ಆರೋಗ್ಯ ನೀಡುವ ಕೆಲಸವಾಗುತ್ತಿದೆ ಎಂದು ಮಾತನಾಡಿದರು.

ರಾಜ್ಯದ ಯುವಜನರು ಕನ್ನಡ ಭಾಷೆ, ಸಾಹಿತ್ಯವನ್ನು ಹೆಚ್ಚು ಅಧ್ಯಯನ ಮಾಡಬೇಕು. ಕನ್ನಡಿಗರು ವಿಶ್ವಮಾನವರಾಗಬೇಕು ಎಂದು ಕವಿ ಕುವೆಂಪು ಹೇಳಿದ್ದರು. ಅದರ ಜೊತೆಗೆ ಕನ್ನಡ ಭಾಷೆ ಎಲ್ಲರಲ್ಲೂ ಗಟ್ಟಿಯಾಗಿ ಬೇರೂರಬೇಕು ಎಂದರು.

ತನು ಕನ್ನಡ, ಮನ ಕನ್ನಡ ಎಂಬಂತೆ ನಮ್ಮೆಲ್ಲರ ಮನಸ್ಸು, ಹೃದಯ ಎಲ್ಲವೂ ಕನ್ನಡವಾಗಲಿ ಎಂದು ಹಾರೈಸುತ್ತೇನೆ. ರಾಷ್ಟ್ರಕವಿ ಕುವೆಂಪು ಅವರು ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎಂದು ಹೇಳಿದ್ದರು. ಅದು ನಮಗೆ ಸ್ಪೂರ್ತಿಯಾಗಬೇಕು ಎಂದು ಹೇಳಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು