ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿಮಾನ ದುರಂತದ ಮಾಹಿತಿ ಈ ಬ್ಲಾಕ್‌ ಇದು ಹೇಗೆ ಕಾರ್ಯನಿರ್ವಹಿಸುತ್ತೆ?

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ವಿಮಾನ ದುರಂತದ ಮಾಹಿತಿ ಈ ಬ್ಲಾಕ್‌ ಇದು ಹೇಗೆ ಕಾರ್ಯನಿರ್ವಹಿಸುತ್ತೆ?

ನವದೆಹಲಿ : ಅಹಮದಾಬಾದ್‌ನಲ್ಲಿ ಪತನಗೊಂಡ ವಿಮಾನದ ಒಂದು ಬ್ಲಾಕ್‌ ಬಾಕ್ಸ್‌ ಮತ್ತು ಡಿವಿಆರ್​ ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಬ್ಲ್ಯಾಕ್‌ ಬಾಕ್ಸ್‌ನಲ್ಲಿನ ದತ್ತಾಂಶಗಳ ಸಹಾಯದಿಂದ ವಿಮಾನ ಅಪಘಾತಕ್ಕೆ ನಿಖರ ಕಾರಣ ಏನು ಎಂಬುದನ್ನು ಪತ್ತೆಹಚ್ಚಬಹುದು.

ಅಹಮದಾಬಾದ್‌ನಿಂದ ಲಂಡನ್‌ನತ್ತ ಹೊರಟಿದ್ದ ಏರ್‌ ಇಂಡಿಯಾ ವಿಮಾನ AI171 ನಿನ್ನೆ ಮಧ್ಯಾಹ್ನ 1.39ಕ್ಕೆ ಟೇಕ್‌ ಆಫ್‌ ಆಗಿತ್ತು. ಆದರೆ, 25 ಸೆಕೆಂಡ್‌ಗಳಲ್ಲೇ ವೈದ್ಯಕೀಯ ಕಾಲೇಜು ಹಾಸ್ಟೆಲ್‌ ಕಟ್ಟಡದ ಮೇಲೆ ಬಿದ್ದಿತ್ತು. ವಿಮಾನದಲ್ಲಿದ್ದ 242 ಪ್ರಯಾಣಿಕರ ಪೈಕಿ 241 ಮಂದಿ ಹಾಗೂ ಕಟ್ಟಡದಲ್ಲಿದ್ದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಬ್ಲಾಕ್‌​ ಬಾಕ್ಸ್ ಎಂದರೇನು? ಅದರ ಕೆಲಸವೇನು?
ಬ್ಲಾಕ್‌ ಬಾಕ್ಸ್ ವಿಮಾನದಲ್ಲಿ ಬಳಸಲಾಗುವ ಒಂದು ಎಲೆಕ್ಟ್ರಾನಿಕ್ ಸಾಧನ. ಇದನ್ನು ಫ್ಲೈಟ್ ಡೇಟಾ ರೆಕಾರ್ಡರ್ (FDR) ಮತ್ತು ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ (CVR) ಅಂತಕೂ ಕರೆಯಲಾಗುತ್ತೆ. ಇದರಲ್ಲಿ ವಿಮಾನದ ಕಾರ್ಯಾಚರಣೆಯ ಮಾಹಿತಿ ಮತ್ತು ಕಾಕ್‌ಪಿಟ್ ಸಂಭಾಷಣೆಗಳನ್ನು ದಾಖಲಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಏನೆಂದರೆ, ವಿಮಾನ ಅಪಘಾತವಾದರೆ ಅದಕ್ಕೇನು ಕಾರಣ ಅನ್ನೋದನ್ನು ತನಿಖೆ ಮಾಡಲು ಸಹಕಾರಿಯಾಗಿರುತ್ತದೆ.

ಬ್ಲಾಕ್‌ ಬಾಕ್ಸ್ ವಿಮಾನದ ಎಂಜಿನ್ ವೇಗ, ಎತ್ತರ, ದಿಕ್ಕು, ಇಂಧನ ಮಟ್ಟ, ಮತ್ತು ಇತರ ತಾಂತ್ರಿಕ ಮಾಹಿತಿಯನ್ನು ದಾಖಲಿಸುತ್ತದೆ. ಈ ಡೇಟಾವನ್ನು ಸಂಗ್ರಹಿಸಿ, ಕ್ರ್ಯಾಶ್-ನಿರೋಧಕ ಮೆಮೊರಿಯಲ್ಲಿ ಸಂಗ್ರಹಿಸಲಾಗುತ್ತದೆ. ಇದು ಸಾಮಾನ್ಯವಾಗಿ 25 ಗಂಟೆಗಳವರೆಗಿನ ಡೇಟಾವನ್ನು ದಾಖಲಿಸುತ್ತದೆ. ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ಪೈಲಟ್‌ಗಳ ಸಂಭಾಷಣೆ, ರೇಡಿಯೋ ಸಂವಹನ, ಮತ್ತು ಕಾಕ್‌ ಪಿಟ್‌ನಲ್ಲಿನ ಶಬ್ದಗಳನ್ನು, ಎಂಜಿನ್ ಶಬ್ದ, ಎಚ್ಚರಿಕೆ ಸಿಗ್ನಲ್‌ಗಳನ್ನು ರೆಕಾರ್ಡ್ ಮಾಡುತ್ತದೆ. ಇದು ಕೊನೆಯ 2 ಗಂಟೆಗಳ ಸಂಭಾಷಣೆಯನ್ನು ಸಂಗ್ರಹಿಸುತ್ತದೆ.

ಬ್ಲಾಕ್‌ ಬಾಕ್ಸ್ ಹೇಗೆ ಕಾರ್ಯನಿರ್ವಹಿಸುತ್ತದೆ?
ಬ್ಲಾಕ್‌ ಬಾಕ್ಸ್ ಮತ್ತು ಇತರ ರೆಕಾರ್ಡರ್​​ಗಳನ್ನು ಪ್ರಯೋಗಾಲಯಕ್ಕೆ ತಂದ ಬಳಿಕ, ತಜ್ಞರು ಅವುಗಳ ಸ್ಥಿತಿ ಪರಿಶೀಲಿಸುತ್ತಾರೆ. ಡೇಟಾವನ್ನು ಸುಲಭವಾಗಿ ರಿಟ್ರೀವ್ ಮಾಡಬಹುದಾ ಎಂದು ಪರಿಶೀಲಿಸುತ್ತಾರೆ. ಸಮರ್ಪಕ ಸ್ಥಿತಿಯಲ್ಲಿದ್ದರೆ ಡೇಟಾವನ್ನು ಡೌನ್​​ಲೋಡ್ ಮಾಡಿಕೊಳ್ಳಬಹುದು. ಆದರೆ, ಹಾನಿಗೊಳಗಾಗಿದ್ದರೆ ಡೇಟಾ ರಿಟ್ರೀವ್ ಮಾಡಲು ಹೆಚ್ಚಿನ ಶ್ರಮ ಬೇಕಾಗುತ್ತದೆ.

ಬ್ಲಾಕ್‌ ಬಾಕ್ಸ್ ಹೇಗೆ ವಿನ್ಯಾಸ ಮಾಡಿರ್ತಾರೆ?
ದುರ್ಘಟನೆ ನಡೆದಾಗ ಗುರುತಿಸಲು ಸುಲಭವಾಗಲಿ ಎಂದು ಬ್ಲಾಕ್​ ಬಾಕ್ಸ್​ಗಳನ್ನು ಕಿತ್ತಳೆ ಬಣ್ಣದಿಂದ ನಿರ್ಮಿಸಲಾಗಿತ್ತದೆ. ಇದ್ದನ್ನ ಟೈಟಾನಿಯಂನಿಂದ ತಯಾರಿಸಲಾಗಿರುತ್ತೆ. ಈ ಬಾಕ್ಸ್​ಗೆ 1,100 ಸೆಕ್ಶಿಯಸ್ ತಾಪಮಾನ, 6,000 ಮೀಟರ್ ಆಳದ ಸಮುದ್ರದ ಒತ್ತಡ ತಡೆಯೋ ಶಕ್ತಿ ಹೊಂದಿದೆ. ನೀರಿನಲ್ಲಿ ಕಳೆದುಹೋದರೆ, ಅಲ್ಟ್ರಾಸಾನಿಕ್ ಬೀಕನ್ 30 ದಿನಗಳವರೆಗೆ ಸಿಗ್ನಲ್ ಕಳುಹಿಸುತ್ತದೆ. ಇದರಿಂದ ಹುಡುಕಾಟಕ್ಕೆ ಸಹಾಯವಾಗುತ್ತದೆ.

ಬ್ಲಾಕ್‌ ಬಾಕ್ಸ್ ಎಲ್ಲಿ ಇಡಲಾಗುತ್ತದೆ?
ಬ್ಲಾಕ್‌ ಬಾಕ್ಸ್‌ಗಳನ್ನು ಸಾಮಾನ್ಯವಾಗಿ ವಿಮಾನದ ಹಿಂಭಾಗದಲ್ಲಿ ಇಡಲಾಗುತ್ತದೆ. ಏಕೆಂದರೆ ಅಪಘಾತದ ಸಂದರ್ಭದಲ್ಲಿ ಬ್ಲಾಕ್​ಬಾಕ್ಸ್ ಹೆಚ್ಚು ಸುರಕ್ಷಿತವಾಗಿ ಇರಬೇಕು ಅಂತ ವಿಮಾನದ ಹಿಂಭಾಗದಲ್ಲಿ ಇರಿಸಲಾಗಿರುತ್ತದೆ.

ವಿಷಯಗಳು: #india #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು