ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಪಘಾತಗಳನ್ನು ತಡೆಯಲು ಹೇಗೆ ಸಾದ್ಯ ಶಾ – ಕೈ ನಾಯಕರ ತೀವ್ರ ಆಕ್ರೋಶ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಅಪಘಾತಗಳನ್ನು ತಡೆಯಲು ಹೇಗೆ ಸಾದ್ಯ ಶಾ – ಕೈ ನಾಯಕರ ತೀವ್ರ ಆಕ್ರೋಶ

ನವದೆಹಲಿ : ಅಹಮದಾಬಾದ್‌ನಲ್ಲಿ (Ahmedabad) ನಡೆದ ಏರ್ ಇಂಡಿಯಾ (Air India) ವಿಮಾನ ಅಪಘಾತ ಎಲ್ಲರ ನೋವಿಗೂ ಕಾರಣವಾಗಿದ್ದರೆ ಇದೀಗ ರಾಜಕೀಯ ವಾದ-ವಿವಾದಗಳಿಗೂ ವೇದಿಕೆಯಾಗಿದೆ. ಈ ಅಪಘಾತದ ಬಗ್ಗೆ ಗೃಹ ಸಚಿವ ಅಮಿತ್‌ ಶಾ (Amit Shah) ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ (Jai Ram Ramesh) ಅಸಂವೇದನಾಶೀಲ ಹೇಳಿಕೆ ಎಂದು ಟೀಕಿಸಿದ್ದಾರೆ.

ಅಮಿತ್‌ ಶಾ ವಿರುದ್ಧ ಆಕ್ರೋಶ

ಗುರುವಾರ ಅಹಮದಾಬಾದ್‌ನಲ್ಲಿ ನಡೆದ ವಿಮಾನ ಅಪಾಘತದ ಬಗ್ಗೆ ಮಾತನಾಡಿದ ಗೃಹ ಸಚಿವ ಅಮಿತ್ ಶಾ ಇದು ಒಂದು ಅಪಘಾತ, ಮತ್ತು ಯಾರೂ ಅಪಘಾತಗಳನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಈಗ ವಿರೋಧ ವ್ಯಕ್ತವಾಗಿದ್ದು, ಕೇಂದ್ರ ಗೃಹ ಸಚಿವರು ಈಗ ಮಾತನಾಡಬೇಕಿದ್ದ ಮಾತು ಇದಾ? ಇದು ನಿಜಕ್ಕೂ ಅಸಂವೇದನಾಶೀಲ ಎಂದು ಜೈರಾಮ್‌ ರಮೇಶ್ ಅಮಿತ್‌ ಶಾ ವಿರುದ್ಧ ಕಿಡಿಕಾರಿದ್ದಾರೆ.

ಇನ್ನು ಕಾಂಗ್ರೆಸ್ ನಾಯಕ ಪವನ್ ಖೇರಾ ಕೂಡ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ವಿಮಾನ ಅಪಘಾತಕ್ಕೀಡಾಗಿ ಜನರು ಸತ್ತಾಗ, ಗೃಹ ಸಚಿವರು ಈ ರೀತಿ ಹೇಳಿಕೆ ನೀಡುವುದನ್ನ ಬಿಟ್ಟು ಭರವಸೆ ನೀಡಬೇಕು, ಉಪನ್ಯಾಸ ನೀಡುವುದು ಸರಿಯಲ್ಲ. ಯಾವುದನ್ನೂ ತಡೆಯಲು ಸಾಧ್ಯವಾಗದಿದ್ದರೆ, ನಮಗೆ ಸಚಿವಾಲಯಗಳು ಏಕೆ ಬೇಕು? ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೇ, ವಿಮಾನ ಅಪಘಾತಗಳು ದೇವರು ಮಾಡುವುದಲ್ಲ, ಅದನ್ನ ತಡೆಯಬಹುದು, ಅದಕ್ಕಾಗಿಯೇ ನಮ್ಮಲ್ಲಿ ವಾಯುಯಾನ ನಿಯಂತ್ರಕಗಳು, ಸುರಕ್ಷತಾ ಪ್ರೋಟೋಕಾಲ್‌ಗಳ ವ್ಯವಸ್ಥೆ ಇದೆ. ಆದರೆ ಗೃಹ ಸಚಿವರ ಹೇಳಿಕೆ ನೋಡಿದರೆ ನಾವು ಸುರಕ್ಷತಾ ಮೂಲಸೌಕರ್ಯಗಳಿಗೆ ಹೂಡಿಕೆ ಮಾಡಬಾರದು ಅನಿಸುತ್ತದೆ ಎಂದು ಅವರು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಸುಟ್ಟುಹೋದ 125,000 ಲೀಟರ್ ಇಂಧನ
ಲಂಡನ್‌ನ ಗ್ಯಾಟ್ವಿಕ್‌ಗೆ ತೆರಳುತ್ತಿದ್ದ AI-171 ಬೋಯಿಂಗ್ ಡ್ರೀಮ್‌ಲೈನರ್ 787-8 ವಿಮಾನ ಗುರುವಾರ ಅಹಮದಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಸ್ವಲ್ಪ ಸಮಯದಲ್ಲಿ ಪತನಗೊಂಡಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರು ಮಾತ್ರವಲ್ಲದೇ ವಿಮಾನ ಪತನಗೊಂಡ ವೈದ್ಯಕೀಯ ಕಾಲೇಜ್‌ ಹಾಸ್ಟೆಲ್‌ ವಿದ್ಯಾರ್ಥಿಗಳು ಅಸುನೀಗಿದ್ದಾರೆ. ಮಾಹಿತಿ ಪ್ರಕಾರ ವಿಮಾನದಲ್ಲಿ ಸುಮಾರು 125,000 ಲೀಟರ್ ಇಂಧನ ಇತ್ತು, ಅದು ಸುಟ್ಟುಹೋದ ಕಾರಣ ಹೆಚ್ಚಿನ ತಾಪಮಾನ ಉಂಟಾಗಿ ಪ್ರಯಾಣಿಕರ ಜೀವ ಉಳಿಸಲು ಸಾಧ್ಯವಾಗಿಲ್ಲ ಎಂದು ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ. ಅಪಘಾತಕ್ಕೀಡಾದ ವಿಮಾನದಲ್ಲಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, ಏಳು ಪೋರ್ಚುಗೀಸ್ ಪ್ರಜೆಗಳು ಮತ್ತು ಒಬ್ಬ ಕೆನಡಾದ ಪ್ರಜೆ ಇದ್ದರು.

ವಿಷಯಗಳು: #india #news #peepal #politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು