ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜನಂತೆ ಇದ್ದ ದರ್ಶನ್‌ ಅವರನ್ನು ಈ ರೀತಿ ನೋಡಲು ಬೇಸರವೆನ್ನಿಸುತ್ತದೆ: ರಚಿತಾ ರಾಮ್‌ ಕಣ್ಣೀರು

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ರಾಜನಂತೆ ಇದ್ದ ದರ್ಶನ್‌ ಅವರನ್ನು ಈ ರೀತಿ ನೋಡಲು ಬೇಸರವೆನ್ನಿಸುತ್ತದೆ: ರಚಿತಾ ರಾಮ್‌ ಕಣ್ಣೀರು

ಬೆಂಗಳೂರು: ದರ್ಶನ್‌ ಜೈಲು ಪಾಲಾದ ದಿನದಿಂದಲೂ ದರ್ಶನ್‌ ಕೃತ್ಯದ ಕುರಿತು ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಜನಸಾಮಾನ್ಯರ ನಡುವೆಯೂ ಈ ವಿಚಾರದಲ್ಲಿ ಎರಡು ಗುಂಪುಗಳಾಗಿದ್ದು, ಕೆಲವರು ದರ್ಶನ್‌ ಸರಿಯೆಂದರೆ ಇನ್ನೂ ಕೆಲವರು ದರ್ಶನ್‌ ಮಾಡಿದ್ದು ತಪ್ಪು ಎನ್ನುತ್ತಿದ್ದಾರೆ.

ಇತ್ತ ಚಿತ್ರರಂಗ ಮಾತ್ರ ದರ್ಶನ್‌ ಅವರ ಬೆಂಬಲಕ್ಕೆ ಗಟ್ಟಿಯಾಗಿ ನಿಂತಿದೆ. ಈಗಾಗಲೇ ಹಲವು ನಟಿಯರು ದರ್ಶನ್‌ ಪರ ಹೇಳಿಕೆ ನೀಡಿದ್ದಾರೆ. ನಟಿ ಭಾವನಾ ರಾಮಣ್ಣ ಅವರಂತೂ ಬಹಳ ಭಾವುಕರಾಗಿ ದರ್ಶನ್‌ ಮಾತನಾಡಿದ್ದರು. ಅವರು ದರ್ಶನ್‌ ಅವರೊಂದಿಗೆ ಚಿಂಗಾರಿ ಸಿನೆಮಾದಲ್ಲಿ ನಟಿಸಿದ್ದರು.

ಈ ನಡುವೆ ದರ್ಶನ್‌ ಅವರೊಂದಿಗೆ ಮುಖ್ಯನಟಿಯಾಗಿ ಚಿತ್ರಗಳಲ್ಲಿ ನಟಿಸಿರುವ ರಚಿತಾ ರಾಮ್‌ ಅವರು ಇಂದು ದರ್ಶನ್‌ ಅವರನ್ನು ಜೈಲಿನಲ್ಲಿ ಭೇಟಿಯಾದರು.

ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್‌ ರೇಣುಕಾಸ್ವಾಮಿ ಎನ್ನುವ ವ್ಯಕ್ತಿಯ ಕೊಲೆ ಪ್ರಕರಣದ ಆರೋಪಿ.

ದರ್ಶನ್‌ ಅವರ ಭೇಟಿಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಚಿತಾ ರಾಮ್‌ “ರಾಜನನ್ನು ರಾಜನ ಥರ ನೋಡೋಕೆ ಇಷ್ಟ. ಜೈಲಿನಲ್ಲಿ ಈ ಸ್ಥಿತಿಯಲ್ಲಿ ಅವರನ್ನು ನೋಡಲು ಕಷ್ಟವಾಗುತ್ತೆ” ಎಂದು ಹೇಳಿದರು.

“ಜೈಲಿನಲ್ಲಿ ಅವರನ್ನು ನೋಡಿದಾಕ್ಷಣ ನಾವೆಲ್ಲರೂ ಭಾವುಕರಾದೆವು. ಅವರೇ ನಮಗೆ ಸಮಾಧಾನ ಮಾಡಿದರು. ಆರಾಮವಾಗಿ, ಆರೋಗ್ಯವಾಗಿ ಇದ್ದೇನೆ ಎಂದು ದರ್ಶನ್ ಹೇಳಿದ್ದಾರೆ. ಎಲ್ಲರೂ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ. ನಾವೆಲ್ಲರೂ ನಿಮ್ಮ ಬರುವಿಕೆಗೆ ಕಾಯುತಿದ್ದೇವೆ ಎಂದು ಹೇಳಿಬಂದಿದ್ದೇನೆ. ದರ್ಶನ್ ಸರ್ ಆದಷ್ಟು ಬೇಗ ಹೊರ ಬರುತ್ತಾರೆ. ಕಾನೂನಿನ ಮೇಲೆ ವಿಶ್ವಾಸವಿದೆ” ಎಂದು ಅವರು ಹೇಳಿದರು.

ಮುಂದುವರೆದು ಮಾತನಾಡಿದ ಅವರು, “ನಾನು ದರ್ಶನ್ ಅವರ ಬ್ಯಾನರ್ ಮೂಲಕ ಚಿತ್ರರಂಗಕ್ಕೆ ಪರಿಚಯವಾದವಳು. ನನಗೆ ಇವತ್ತು ಏನೇ ಹೆಸರು ಇದ್ದರೂ ಅದು ಅವರಿಂದ ಸಿಕ್ಕಿದೆ. ಅವರು ಅವಕಾಶ ಕೊಟ್ಟಿದ್ದಕ್ಕೆ ನಾನು ಬಿಂದ್ಯಾ ರಾಮ್ ಆಗಿದ್ದವಳು ಇಂದು ರಚಿತಾ ರಾಮ್ ಆಗಿ ಬೆಳೆದಿದ್ದೇನೆ. ನಾನು ಯಾವತ್ತೂ ಅವರ ಕುಟುಂಬಕ್ಕೆ ಆಭಾರಿ” ಎಂದು ಭಾವುಕವಾಗಿ ನುಡಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು