ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಒಂದೆರಡು ತಿಂಗಳು ರಾಜಕೀಯವಾಗಿ ತೊಂದರೆ ಕೊಡಬಹುದು – ಆದ್ರೆ ಇದಕ್ಕೆಲ್ಲಾ ಹೆದರೋನು ನಾನಲ್ಲ: ಸಿ.ಎಂ.ಸಿದ್ದರಾಮಯ್ಯ ಘರ್ಜನೆ

P

Peepal Media • ರಾಜ್ಯ

• 1 ನಿಮಿಷದ ಓದು

ಒಂದೆರಡು ತಿಂಗಳು ರಾಜಕೀಯವಾಗಿ ತೊಂದರೆ ಕೊಡಬಹುದು – ಆದ್ರೆ ಇದಕ್ಕೆಲ್ಲಾ ಹೆದರೋನು ನಾನಲ್ಲ: ಸಿ.ಎಂ.ಸಿದ್ದರಾಮಯ್ಯ ಘರ್ಜನೆ

ಮೈಸೂರು ಸೆ 29: ನಂಜನಗೂಡು ರಸಬಾಳೆ, ಮೈಸೂರು ಮಲ್ಲಿಗೆ, ಮೈಸೂರು ವೀಳ್ಯದೆಲೆ, ಈರನಗೆರೆ ಬದನೆಕಾಯಿ ಮೈಸೂರಿನ ಹೆಮ್ಮೆಯ ಸಾಂಪ್ರದಾಯಿಕ ಬೆಳೆಗಳಾಗಿದ್ದು ಈ ಬೆಳೆಗಳ ರಕ್ಷಣೆ, ವಿಸ್ತರಣೆಗೆ ಸರ್ಕಾರದಿಂದ ಕಾರ್ಯಕ್ರಮ ಘೋಷಣೆ ಮಾಡ್ತೇನೆ ಎಂದು ಸಿ.ಎಂ.ಸಿದ್ದರಾಮಯ್ಯ ಭರವಸೆ ನೀಡಿದರು.

ಮೈಸೂರು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಅಶೋಕಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ 245 ವೀಳ್ಯದೆಲೆ ಬೆಳೆಗಾರರಿಗೆ ತಲಾ 0.5 ಗುಂಟೆ ಜಾಗ ನೀಡುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಾಗೂ ದೊಡ್ಡಗರಡಿ, ಚಿಕ್ಕಗರಡಿ ಆವರಣಗಳಲ್ಲಿ ವ್ಯಾಯಾಮ ಶಾಲೆ, ಸಭಾಭವನ, ವಾಣಿಜ್ಯ ಸಂಕೀರ್ಣ ನಿರ್ಮಾಣ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ದುರಸ್ಥಿ ಕಾರ್ಯಗಳನ್ನು ಉದ್ಘಾಟಿಸಿ ಮಾತನಾಡಿದರು.

ಅಶೋಕಪುರಂನ‌ ಅಭಿವೃದ್ಧಿಗಾಗಿ ಅಗತ್ಯ ಇರುವ ಎಲ್ಲಾ ಕಾರ್ಯಕ್ರಮಗಳ ಪಟ್ಟಿ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಅವರಿಗೆ ಸೂಚಿಸಿದ್ದೇನೆ. ಅಗತ್ಯ ಅನುದನ ಕೊಡಲು ಸರ್ಕಾರ ಬದ್ದವಾಗಿದೆ ಎಂದು ಭರವಸೆ ನೀಡಿದರು.

ನಾವೆಲ್ಲಾ ಅಂಬೇಡ್ಕರ್ ವಾದಿಗಳು. ಅವಕಾಶಗಳಿಂದ ವಂಚಿತರಾದವರೆಲ್ಲರಿಗೂ ಸಮಾನ ಅವಕಾಶ ಸಿಗಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ ಎಂದರು.

ಸಂವಿಧಾನ ಜಾರಿ ಸಭೆಯಲ್ಲಿ ಅಂಬೇಡ್ಕರ್ ಅವರು ಮಾಡಿದ 10 ಸಂಪುಟಗಳ ಭಾಷಣವನ್ನು ನಾನು ಕನ್ನಡಕ್ಕೆ ಮಾಡಿಸಿದ್ದೇನೆ. ಈ ಎಲ್ಲವನ್ನೂ ಪ್ರತಿಯೊಬ್ಬರೂ ಓದಬೇಕು ಎಂದು ಕರೆ ನೀಡಿದರು.

ನಾನು ಮುಖ್ಯಮಂತ್ರಿ ಆಗಿದ್ದೇ ಅಂಬೇಡ್ಕರ್ ಅವರ ಸಂವಿಧಾನದಿಂದ ಎಂದು ಸಂವಿಧಾನಕ್ಕೆ ಧನ್ಯತೆ ಅರ್ಪಿಸಿದರು.

ದೇಶದ ಬಜೆಟ್ ಗಾತ್ರ 48 ಲಕ್ಷ ಕೋಟಿ. ಇದರಲ್ಲಿ ಅಭಿವೃದ್ಧಿಗೆ 28 ಕೋಟಿ ಖರ್ಚಾಗುತ್ತದೆ. ಇದರಲ್ಲಿ ಶೇ24 ರಷ್ಟು ಹಣವನ್ನು ದಲಿತರ ಅಭಿವೃದ್ಧಿಗೆ ಕೊಡಬೇಕಿತ್ತು. ಆದರೆ ಕೊಡುತ್ತಿರುವುದು ಕೇವಲ 60 ಸಾವಿರ ಕೋಟಿ ಎಂದರು. ಆದರೆ ನಮ್ಮ ರಾಜ್ಯದ ಅಭಿವೃದ್ಧಿ ಬಜೆಟ್ ನಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಹಣ ಮೀಸಲಿಟ್ಟಿದ್ದೀವಿ. ಸಮಾಜದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ಒದಗಿಸಿಕೊಡುವ ಭಾಗವಾಗಿ ಈ ಹಣ ಮೀಸಲು ಎಂದರು.

ಬಜೆಟ್ ನಲ್ಲಿ 59000 ಕೋಡಿ ಹಣವನ್ನು ಗ್ಯಾರಂಟಿಗಳ ಜಾರಿಗಾಗಿ ಮೀಸಲಿಟ್ಟಿದ್ದೇನೆ. ಇಷ್ಟೂ ಹಣ ಎಲ್ಲಾ ಜಾತಿ, ಎಲ್ಲಾ ಧರ್ಮ ಮತ್ತು ಎಲ್ಲಾ ವರ್ಗದವರಿಗೂ ತಲುಪುತ್ತಿದೆ. ವಿರೋಧ ಪಕ್ಷಗಳು ಎಷ್ಟೇ ಸುಳ್ಳು, ಅಪಪ್ರಚಾರ ಮಾಡಿದರೂ ಈ ಗ್ಯಾರಂಟಿಗಳು ನಿಲ್ಲುವುದಿಲ್ಲ ಎಂದು ಪುನರುಚ್ಚಸಿದರು.

ರಾಜಕೀಯವಾಗಿ ನನಗೆ ತೊಂದರೆ ಕೊಡಬಹುದು-ಆದರೆ ನನ್ನನ್ನು ಅಲ್ಲಾಡಿಸಲು ಸಾಧ್ಯವಿಲ್ಲ: ಸಿಎಂ ಗುಡುಗು

ನನ್ನ ಆತ್ಮಸಾಕ್ಷಿ ಸರಿಯಾಗಿದೆ. ಆತ್ಮಸಾಕ್ಷಿಯಾಗಿ ನಾನು ಸರಿಯಾಗಿದ್ದೀನಿ. ಹೀಗಾಗಿ ನಾನು ಹೆದರುವ, ಜಗ್ಗುವ-ಬಗ್ಗುವ ಪ್ರಶ್ನೆಯೇ ಇಲ್ಲ ಎಂದು BJP-JDS ಗೆ ನೇರ ತೊಡೆತಟ್ಟಿ ಹೇಳಿದರು.

ಜನರ ಆಶೀರ್ವಾದ, ನಿಮ್ಮೆಲ್ಲರ ಬೆಂಬಲ ಇರುವವರೆಗೂ ನಾನು ಅಲ್ಲಾಡುವುದಿಲ್ಲ ಎಂದರು.

ಬಹಳ ಜನ ಬಂದು ಬಂದು ನನಗೆ, “ಧೈರ್ಯವಾಗಿರಿ, ರಾಜೀನಾಮೆ ಕೊಡಬೇಡಿ” ಅಂತಾರೆ. ನಾನು ಇದಕ್ಕೆಲ್ಲಾ ಹೆದರುವವನೇ ಅಲ್ಲ. ರಾಜಕೀಯವಾಗಿ ನನಗೆ ಒಂದೆರಡು ತಿಂಗಳು ತೊಂದರೆ ಕೊಡಬಹುದು. ಆದರೆ ಕಾನೂನಾತ್ಮಕವಾಗಿ ನಾನು ಗೆದ್ದೇ ಗೆಲ್ತೇನೆ. ರಾಜಕೀಯವಾಗಿ ಇದನ್ನೆಲ್ಲಾ ಎದುರಿಸಿ ನಿಲ್ಲೋದು ನನಗೆ ಗೊತ್ತಿದೆ ಎಂದು ಘೋಷಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಶಾಸಕರಾದ ಶ್ರೀವತ್ಸ, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಜ್ಞಾನ ಪ್ರಕಾಶ್ ಸ್ವಾಮೀಜಿ, ವಿಧಾನ‌ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version