ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕನ್ನಡ ಕಲಿಯುವ ವಾತಾವರಣ ನಿರ್ಮಿಸಿದಾಗ ಭಾಷೆ ಬೆಳೆಯಲು ಸಾಧ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಕನ್ನಡ ಕಲಿಯುವ ವಾತಾವರಣ ನಿರ್ಮಿಸಿದಾಗ ಭಾಷೆ ಬೆಳೆಯಲು ಸಾಧ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ನವೆಂಬರ್ -01 : ಕನ್ನಡೇತರರು ಕನ್ನಡವನ್ನು ಕಲಿಯುವ ವಾತಾವರಣವನ್ನು ನಾವು ನಿರ್ಮಿಸಿದಾಗ ಮಾತ್ರ , ನಮ್ಮ ಭಾಷೆ ಎತ್ತರಕ್ಕೆ ಬೆಳೆಯಲು ಸಾಧ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕರ್ನಾಟಕ ರಾಜ್ಯೋತ್ಸವ ಸಮಿತಿ ನೃಪತುಂಗ ಮಂಟಪ ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

100 ಕನ್ನಡ ಸಾಧಕರಿಗೆ ಪ್ರಶಸ್ತಿ

1956ರ ನವೆಂಬರ್ 1 ರಂದು ರಾಜ್ಯ ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು. ಮಾಜಿ ಮುಖ್ಯಮಂತ್ರಿ, ದಿ.ದೇವರಾಜ ಅರಸು ಅವರ ಅವಧಿಯಲ್ಲಿ 1973ರ ನವೆಂಬರ್ 1 ರಂದು ಮೈಸೂರು ರಾಜ್ಯ , ಇಡೀ ರಾಜ್ಯವನ್ನು ಪ್ರತಿನಿಧಿಸುವ ಹೆಸರಾದ ಕರ್ನಾಟಕ ವೆಂದು ಮರುನಾಮಕರಣಗೊಂಡಿತು.. ಈ ಸುವರ್ಣ ಸಂಭ್ರಮವನ್ನು 2023ರ ನವೆಂಬರ್ 1 ರಂದು 51 ನೇ ವರ್ಷ ಎಂದು ಕರ್ನಾಟಕ ನಾಮಕರಣಗೊಂಡ ದಿನವೆಂದು ವರ್ಷಪೂರ್ತಿ ಆಚರಿಸಬೇಕೆಂದು ನಿರ್ಧರಿಸಲಾಯಿತು. ಇಡೀ ರಾಜ್ಯದಲ್ಲಿ ಕನ್ನಡ ನಾಡು, ನುಡಿ, ನೆಲ, ಜಲದ ಮಹತ್ವ ಪ್ರಚುರಪಡಿಸಲು ‘ಹೆಸರಾಯಿತು ಕರ್ನಾಟಕ , ಉಸಿರಾಯಿತು ಕನ್ನಡ’ ಎಂಬ ಘೋಷವಾಕ್ಯದಡಿ ಇಡೀ ವರ್ಷ ಕನ್ನಡವನ್ನು ಸಂಭ್ರಮಿಸಲಾಯಿತು ಎಂದರು. ಕನ್ನಡ ನಾಡಿನ ಏಕೀಕರಣಕ್ಕೆ, ಏಳಿಗೆಗೆ 100 ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತಿದೆ ಎಂದರು.

ಕನ್ನಡ ಭಾಷೆಯ ಬಗ್ಗೆ ಅಭಿಮಾನವಿರಲಿ
ನಾನು ಅಧಿಕಾರದಲ್ಲಿರುವಾಗ ಕನ್ನಡಕ್ಕೆ ಚ್ಯುತಿಯಾಗಲು ಬಿಡುವುದಿಲ್ಲ. 1983ರ ಕನ್ನಡ ಕಾವಲು ಸಮಿತಿಯ ಅಧ್ಯಕ್ಷನಾಗಿದ್ದೆ. ಕನ್ನಡವನ್ನು ಕಾಯಲು ಸಮಿತಿ ಬೇಕೆನ್ನುವ ಪರಿಸ್ಥಿತಿ ಕರ್ನಾಟಕದಲ್ಲಿ ಉಂಟಾಗಿದೆ. ಇಂದಿಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಎಂದು ಈ ಸಮಿತಿ ಕಾರ್ಯನಿರ್ವಹಿಸುತ್ತಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸುವ ವಿಷಯದಲ್ಲಿ ಉದಾರತನವಿರಬೇಕೇ ಹೊರತು ಭಾಷೆ ಸಂಸ್ಕೃತಿಯ ಬಗ್ಗೆ ಅಭಿಮಾನವಿರಬೇಕು. ಬೇರೆ ಭಾಷೆ ಕಲಿತರೂ, ಕನ್ನಡ ತಾಯಿಭಾಷೆಯನ್ನು ಮರೆಯಬಾರದು. ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷೆ ಎಂಬ ಸ್ಥಾನಮಾನ ದೊರೆತಿದೆ. ಕನ್ನಡಕ್ಕೆ ಸೂಕ್ತ ಗೌರವ ಸಿಗುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ. ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ತಾಯಿಯ ಪ್ರತಿಮೆಯನ್ನು ಸಧ್ಯದಲ್ಲಿಯೇ ಸ್ಥಾಪಿಸಲಾಗುವುದು ಎಂದರು.

ವಾಟಾಳ್ ನಾಗರಾಜ್ ರವರು ಎಂದಿಗೂ ಅಧಿಕಾರಕ್ಕೆ ಹಪಹಪಿಸಿದವರಲ್ಲ

ಪ್ರತಿ ವರ್ಷದ ನವೆಂಬರ್ 1 ಕನ್ನಡ ಹಬ್ಬದ ದಿನ. ಶ್ರೀ ವಾಟಾಳ್ ನಾಗರಾಜ್ ಅವರು ಇದೇ ರೀತಿ 100 ರಾಜ್ಯೋತ್ಸವಗಳನ್ನು ಆಚರಿಸುವಂತಾಗಲಿ ಎಂದು ಶುಭ ಕೋರಿದರು. ಕನ್ನಡಪರ ಹೋರಾಟಗಾರರಾದ ಇವರು ದೀರ್ಘ ಕಾಲದಿಂದ ಕನ್ನಡ ನಾಡು, ನುಡಿ, ನೆಲ,ಜಲಗಳ ಸಂರಕ್ಷಣೆಗೆ ಶ್ರಮಿಸಿದ್ದಾರೆ. ರಾಜಕೀಯವಾಗಿ ಬೇರೆ ಪಕ್ಷಗಳಿಂದ ಆಹ್ವಾನ ಬಂದಿದ್ದರೂ, ಕನ್ನಡ ಚಳವಳಿ ಪಕ್ಷ ಬಿಟ್ಟು ಬೇರೆಡೆಗೆ ಅವರು ಮುಖ ಮಾಡಲಿಲ್ಲ. ನನ್ನನ್ನೂ ಸೇರಿದಂತೆ, ಕೆಂಗಲ್ ಹನುಮಂತಯ್ಯ , ವೀರೇಂದ್ರ ಪಾಟೀಲ್, ದೇವರಾಜ ಅರಸು , ಗುಂಡೂರಾಯರು ಸೇರಿದಂತೆ ಹಲವು ರಾಜಕೀಯ ಧುರೀಣರಿಗೆ ಆಪ್ತರಾಗಿದ್ದರೂ, ಎಂದಿಗೂ ಅಧಿಕಾರಕ್ಕೆ ಹಪಹಪಿಸಿದವರಲ್ಲ. ಮಾತೃಭಾಷೆ, ನೆಲ ಜಲದ ಬಗ್ಗೆ ಬದ್ಧತೆಯಿರುವ ವಾಟಾಳ್ ನಾಗರಾಜ್ ಅವರ ಬಗ್ಗೆ ಅಪಾರ ಗೌರವಾದರವಿದೆ. ನನ್ನ ವಿದ್ಯಾರ್ಥಿದೆಸೆಯಿಂದಲೂ ಅವರ ಭಾಷೆಯನ್ನು ಕೇಳುತ್ತಾ ಬಂದಿದ್ದೇನೆ ಎಂದು ಸ್ಮರಿಸಿದರು. ವಾಟಾಳ್ ನಾಗರಾಜ್ ಅವರನ್ನು ‘ನಾಯಕರು’ ಎಂದು ತಾನು ಸಂಭೋದಿಸುತ್ತಿದ್ದು, ಜನ ಅವರನ್ನು ನಾಯಕರಾಗಿ ಕಂಡಿದ್ದಾರೆ ಎಂದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು