ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಕುರುಬರನ್ನು ST ಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು: ಸಿ.ಎಂ ಸಿದ್ದರಾಮಯ್ಯ ಸ್ಪಷ್ಟ ನುಡಿ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಕುರುಬರನ್ನು ST ಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು: ಸಿ.ಎಂ ಸಿದ್ದರಾಮಯ್ಯ ಸ್ಪಷ್ಟ ನುಡಿ

ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು.

ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.

SC/ST ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ಇದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. SC/ST ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದು ಕರೆ ನೀಡಿದರು.

ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ST ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ ಆಗ ಸೇರಿಸಲು ಆಗಲಿಲ್ಲ. ಆದರೆ, ಉಗ್ರಪ್ಪ ಅವರು ಸುಮ್ಮನೆ ಕೂರಲಿಲ್ಲ. ಉಗ್ರಪ್ಪ ಮತ್ತು ದೇವೇಗೌಡರ ನಡುವಿನ‌ ಒಡನಾಟ ಆಗಲೂ ಚೆನ್ನಾಗಿತ್ತು. ಈಗಲೂ ಚನ್ನಾಗಿದೆ. ದೇವೇಗೌಡರು ಮತ್ತು ಚಂದ್ರಶೇಖರ್ ಅವರ ಒಡನಾಡ ಚನ್ನಾಗಿತ್ತು. ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದಾಗ ಅವರನ್ನು ದೇವೇಗೌಡರ ಮೂಲಕ ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ST ಗೆ ಸೇರಿಸಿದರು.
ವಾಲ್ಮೀಕಿ, ಬೇಡ ಮತ್ತು ನಾಯಕ‌ ಸಮುದಾಯಕ್ಕೆ ಮೀಸಲಾತಿ ದೊರಕಲು ಉಗ್ರಪ್ಪನವರೇ ಕಾರಣ ಎನ್ನುವುದನ್ನು ಮರೆಯಬಾರದು ಎಂದರು.

ಈಗ ಕುರುಬರನ್ನು ST ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ ಎಂದು ಸ್ಪಷ್ಟಪಡಿಸಿದರು.

ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು: ಸಿಎಂ

ಕುರುಬರನ್ನು ST ಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ ಎಂದು ಸ್ಪಷ್ಟಪಡಿಸಿದರು.

ಜೆ.ಹೆಚ್.ಪಟೇಲರು ಸಿಎಂ ಆಗಿದ್ದಾಗ ಬೆಸ್ತರು ಸೇರಿ ಹಲವು ಸಮುದಾಯಗಳನ್ನು ST ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಹೋಗಿದೆ. ಇವತ್ತಿನವರೆಗೂ ಇದು ಸಾಧ್ಯವಾಗಿಲ್ಲ ಎಂದರು.‌

ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ವಾಲ್ಮೀಕಿ ಸಮುದಾಯದ ವಾಲ್ಮೀಕಿ ಅವರು ವಿಶ್ವ ಮಾನವರಾಗಿ ಶ್ರೇಷ್ಠವಾದ ರಾಮಾಯಣ ಮಹಾ ಕಾವ್ಯವನ್ನು ರಚಿಸಿದರು. ಹೀಗಾಗಿ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣವನ್ನು ಆದ್ಯತೆಯಾಗಿ ಪರಿಗಣಿಸಬೇಕು ಎಂದರು.

ಸಮುದಾಯಕ್ಕೆ ಬೇಕಾದ ಹಕ್ಕು, ಅವಕಾಶಗಳನ್ನು ಸಂಘಟನೆ, ಹೋರಾಟದ ಮೂಲಕ ಪಡೆದುಕೊಳ್ಳುವುದು ತಪ್ಪಲ್ಲ. ಹೋರಾಟ ಮಾಡಲೇಬೇಕು.‌ ಇದನ್ನೇ ಅಂಬೇಡ್ಕರ್, ಬುದ್ದ, ಬಸವಣ್ಣ ಕೂಡ ಹೇಳಿದ್ದಾರೆ ಎಂದರು.

ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆಯೂ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು