ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವ್ಯಾಪಾರಸ್ಥರೇ ಹುಷಾರ್! ನಿಮ್ಮ ಅಂಗಡಿಗೆ ಕನ್ನಡ ನಾಮಫಲಕ ಹಾಕದಿದ್ರೆ ಬೀಗ ಬೀಳುತ್ತೆ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ವ್ಯಾಪಾರಸ್ಥರೇ ಹುಷಾರ್! ನಿಮ್ಮ ಅಂಗಡಿಗೆ ಕನ್ನಡ ನಾಮಫಲಕ ಹಾಕದಿದ್ರೆ ಬೀಗ ಬೀಳುತ್ತೆ

ಬೆಂಗಳೂರು: ನಗರದಲ್ಲಿರುವ ಯಾವುದೇ ಅಂಗಡಿಗಳ ನಾಮಫಲಕದಲ್ಲಿ ಕನ್ನಡ ಕಡ್ಡಾಯವಾಗಿ ಬಳಸದಿದ್ದರೆ, ಅಂತ ಅಂಗಡಿಗಳಿಗೆ ಬೀಗ ಹಾಕಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ.
ಈಗಾಗಲೇ ಮಳಿಗೆಗಳ ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಬಳಸದ 18 ಉದ್ದಿಮೆಗಳನ್ನು ತಾತ್ಕಾಲಿಕವಾಗಿ ಬಿಬಿಎಂಪಿ ವತಿಯಿಂದ ಮುಚ್ಚಿಸಲಾಗಿದೆ.
ಬ್ರಿಗೇಡ್ ರಸ್ತೆ, ಎಂ.ಜಿ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್‌ಗಳಲ್ಲಿ ಕನ್ನಡ ನಾಮಫಲಕ ಬಳಸದ ಅಂಗಡಿಗಳಿಗೆ ಬೀಗ ಹಾಕುವ ಮೂಲಕ ಬಿಬಿಎಂಪಿ ಪೂರ್ವ ವಲಯದ ಸಿಬ್ಬಂದಿ ಎಚ್ಚರಿಕೆ ನೀಡಿದರು. ಈಗಿರುವ ನಾಮಫಲಕಗಳಲ್ಲಿ ಇಂಗ್ಲಿಷ್‌ ಅಕ್ಷರಗಳನ್ನು ಮುಚ್ಚಿ, ಕನ್ನಡವನ್ನು ಚಿಕ್ಕದಾಗಿ ಕಾಣುವಂತೆ ಕೆಲವು ಮಾಡಿದ್ದಾರೆ. ಇದು ಸರಿಯಲ್ಲ. ಶೇ 60ರಷ್ಟು ಕನ್ನಡ ಇರಲೇಬೇಕು ಎಂದು ಮಳಿಗೆಯವರಿಗೆ ಅಧಿಕಾರಿಗಳು ತಾಕೀತು ಮಾಡಿದರು.
ವಲಯ ಆಯುಕ್ತೆ ಸ್ನೇಹಲ್, ವಲಯ ಜಂಟಿ ಆಯುಕ್ತೆ ಪಲ್ಲವಿ ಅವರ ನಿರ್ದೇಶನದಂತೆ ಶಾಂತಿನಗರ ಹಾಗೂ ಸಿ.ವಿ ರಾಮನ್‌ನಗರ ವ್ಯಾಪ್ತಿಯಲ್ಲಿ ವಲಯ ಆರೋಗ್ಯಾಧಿಕಾರಿ ಡಾ. ಸವಿತಾ ನೇತೃತ್ವದಲ್ಲಿ ಮಳಿಗೆಗಳ ನಾಮಫಲಕಗಳನ್ನು ಪರಿಶೀಲಿಸಿದರು.
ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ರೆಸಿಡೆನ್ಸಿ ರಸ್ತೆಯಲ್ಲಿ ಇದುವರೆಗೆ 200ಕ್ಕೂ ಹೆಚ್ಚು ವಾಣಿಜ್ಯ ಮಳಿಗಳನ್ನು ಪರಿಶೀಲಿಸಲಾಗಿದೆ. ಈ ಪೈಕಿ 170ಕ್ಕೂ ಹೆಚ್ಚು ಮಳಿಗೆಗಳಲ್ಲಿ ಈಗಾಗಲೇ ಕನ್ನಡ ನಾಮಫಲಕಗಳನ್ನು ಅಳವಡಿಸಿಕೊಂಡಿರುತ್ತಾರೆ. ಇನ್ನು ಕನ್ನಡ ನಾಮಫಲಕ ಅಳವಡಿಸದೇ ಇರುವ ಮಳಿಗೆಗಳ ಮಾಲೀಕರಿಗೆ ಅಂತಿಮ ತಿಳಿವಳಿಕೆ ಪತ್ರ ನೀಡಿ ಕೂಡಲೇ ನಾಮಫಲಕ ಬದಲಾಯಿಸಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತ್ತೀಚೆಗಷ್ಟೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕನ್ನಡ ಬಳಸದೇ ಇರುವ ನಾಮಫಲಕ ಕಿತ್ತುಹಾಕುವ ಮೂಲಕ ದೊಡ್ಡ ಮಟ್ಟದ ಪ್ರತಿಭಟನೆ ಮಾಡಿದ್ದರು. ಸರ್ಕಾರ ಕನ್ನಡ ವಿಧೇಯಕ ಕಾನೂನು ಜಾರಿಗೆ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿತ್ತು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು