ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳ ಪ್ರೋತ್ಸಾಹ ಧನ 1ರಿಂದ 2 ಲಕ್ಷಕ್ಕೆ ಹೆಚ್ಚಳ: ಸಚಿವ ಡಾ ಹೆಚ್ ಸಿ ಮಹದೇವಪ್ಪ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳ ಪ್ರೋತ್ಸಾಹ ಧನ 1ರಿಂದ 2 ಲಕ್ಷಕ್ಕೆ ಹೆಚ್ಚಳ: ಸಚಿವ ಡಾ ಹೆಚ್ ಸಿ ಮಹದೇವಪ್ಪ

ಧಾರವಾಡ, ನವೆಂಬರ 07: ಐಐಟಿ, ಐಐಎಂ, ಐಐಎಸ್‍ಸಿ, ಎನ್‍ಐಟಿ (IIT/IIM/IISC /NIT) ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಎಸ್‍ಸಿ ಮತ್ತು ಎಸ್‍ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪನವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಪಿಯುಸಿ ಪರೀಕ್ಷೆಯಲ್ಲಿ 95 ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್ ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್ ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂಪಾಯಿಗಳ ಶುಲ್ಕ ಧನವನ್ನು ಒದಗಿಸಲು ಸರ್ಕಾರ ತೀರ್ಮಾನಿಸಿದೆ.

ಎಂಬಿಬಿಎಸ್ ಪದವಿಯನ್ನು ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ 60% ಗೂ ಹೆಚ್ಚಿನ ಅಂಕಗಗಳನ್ನು ಪಡೆದು ಉತ್ತೀರ್ಣ ರಾದರೆ ಅವರಿಗೆ ಅವರಿಗೆ ಮತ್ತೆ 25 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ನೀಡಲಾಗುವುದು.

ಶಿಕ್ಷಣವೇ ಸಮಾಜವನ್ನು ಬದಲಿಸುವ ಕೀಲಿಕೈ ಎಂಬ ಅಂಶವನ್ನು ಮನಗಂಡು ಈ ಒಂದು ಮಹತ್ವದ ಘೋಷಣೆಯನ್ನು ಸರ್ಕಾರವು ಮಾಡಿದ್ದು, ಇದರಿಂದ ಉನ್ನತ ಶಿಕ್ಷಣ ಮಾಡಬೇಕೆಂಬ ವಿದ್ಯಾರ್ಥಿಗಳ ಕನಸ್ಸು ನನಸಾಗಲಿದೆ.


ಐಐಟಿ ಐಐಎಂ ನಂತಹ ಶಿಕ್ಷಣ ಸಂಸ್ಥೆಗಳಲ್ಲಿ ಓದುವಂತಹ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳು ದೇಶ ನಿರ್ಮಾಣದಲ್ಲಿ ಸಕ್ರಿಯವಾಗಿ ತೊಡಗಬೇಕು, ಆ ಮೂಲಕ ಸಮೃದ್ಧ ಮತ್ತು ಸಶಕ್ತ ರಾಷ್ಟ್ರದ ನಿರ್ಮಾಣವಾಗಬೇಕು ಎಂದು ಮಾನ್ಯ ಸಚಿವರು ತಿಳಿಸಿದರು.

ಇನ್ನು ಬಡತನದ ಬೇಗೆಗೆ ಸಿಲುಕಿ ಎಂಬಿಬಿಎಸ್ ಓದುವ ಬಯಕೆ ಇರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರಿ ಕೋಟಾದಡಿ ಸೀಟು ಸಿಗದೇ ಅವರು ಖಾಸಗೀ ಸಂಸ್ಥೆಗಳಲ್ಲಿ ಓದುತ್ತಿದ್ದರೆ, ಅಂತಹ ಪ್ರತಿಭಾವಂತ ಮಕ್ಕಳ ಶುಲ್ಕವನ್ನು ಸರ್ಕಾರ ಭರಿಸಲಿದ್ದು, ಇದಕ್ಕಾಗಿ ಆರಂಭಿಕವಾಗಿ 25 ಲಕ್ಷ ರೂಪಾಯಿಗಳನ್ನು ನೀಡುವ ನಿರ್ಧಾರವನ್ನು ತೆಗೆದುಕೊಂಡಿದೆ.

ಈಗಾಗಲೇ ಪ್ರಬುದ್ಧ ಯೋಜನೆಯಡಿ ವಿದೇಶಿ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿರುವ ನಮ್ಮ ಸರ್ಕಾರವು ಇದೀಗ ಮಕ್ಕಳ ಉತ್ತಮ ಶಿಕ್ಷಣವನ್ನು ಗಮನದಲ್ಲಿಟುಕೊಂಡು ಮುಖ್ಯ ಘೋಷಣೆಯನ್ನು ಮಾಡಿರುತ್ತದೆ.

ಹೀಗಾಗಿ ಬಾಬಾ ಸಾಹೇಬರ ಆಶಯದಂತೆ ನಮ್ಮೆಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಹೆಚ್ಚು ಆಸಕ್ತಿ ಹೊಂದಿ, ಶ್ರಮ ಹಾಕಿ ಓದಬೇಕೆಂದು ಮಾನ್ಯ ಸಚಿವರು ಆಶಯವನ್ನು ವ್ಯಕ್ತಪಡಿಸಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು