ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

KPSC ಪುತ್ರಿಯರ ಅಕ್ರಮ ನೇಮಕ, ಅಧ್ಯಕ್ಷ ಶಿವಶಂಕರಪ್ಪಅಮಾನತುಗೊಳಿಸಿ – ರಾಜ್ಯಪಾಲರ ಆದೇಶ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

KPSC ಪುತ್ರಿಯರ ಅಕ್ರಮ ನೇಮಕ, ಅಧ್ಯಕ್ಷ ಶಿವಶಂಕರಪ್ಪಅಮಾನತುಗೊಳಿಸಿ – ರಾಜ್ಯಪಾಲರ ಆದೇಶ

ಬೆಂಗಳೂರು: ತನ್ನ ಇಬ್ಬರು ಪುತ್ರಿಯರು ಕೈಗಾರಿಕಾ ವಿಸ್ತರಣಾಧಿಕಾರಿಯಾಗಿ ನೇಮಕವಾಗಲು ಸಹಕರಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅವರನ್ನು ಕೂಡಲೇ ಜಾರಿಗೆ ಬರುವಂತೆ ಅಮಾನತುಗೊಳಿಸಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್ ಆದೇಶ ಹೊರಡಿಸಿದ್ದಾರೆ.

ಶಿವಶಂಕರಪ್ಪ ವಿರುದ್ಧದ ಆರೋಪಗಳ ಬಗ್ಗೆ ತನಿಖೆಗೆ ಶಿಫಾರಸು ಮಾಡಲಾಗಿದೆ ಸುಪ್ರೀಂಕೋರ್ಟಿಗೆ ಉಲ್ಲೇಖಿಸಲು ರಾಷ್ಟ್ರಪತಿಗಳಿಗೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ಮುಂದಿನ ಆದೇಶದವರೆಗೆ ಹಿರಿಯ ಸದಸ್ಯರು ಕೆಪಿಎಸ್ ಸಿ ಹಂಗಾಮಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವಂತೆ ರಾಜ್ಯಪಾಲರ ಆದೇಶದಲ್ಲಿ ತಿಳಿಸಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರಾದ ಶಿವಶಂಕರಪ್ಪ ಎಸ್. ಸಾಹುಕಾರ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿರುವ ಗಂಭೀರ ಆರೋಪ ಕೇಳಿಬಂದಿದೆ. ತಮ್ಮ ಪುತ್ರಿಗೆ ಸರ್ಕಾರಿ ಹುದ್ದೆ ಕೊಡುವ ಸಲುವಾಗಿ, ಕುಟುಂಬದ ವಾರ್ಷಿಕ ಆದಾಯ ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿ ಹಾಕಲು ಅವರು ಸಹಕರಿಸಿದ್ದಾರೆ ಎಂಬುದು ಮೇಲ್ನೋಟಕ್ಕೆ ಸಾಬೀತಾಗಿದೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ 50 ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳಿಗೆ 2024ರ ಮಾರ್ಚ್ 15ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಈ ಹುದ್ದೆಗಾಗಿ ಅಧ್ಯಕ್ಷರ ಪುತ್ರಿ ಸುಮಾ ಎಸ್. ಸಾಹುಕಾರ್ ಅವರು 3ಬಿ ಮೀಸಲಾತಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು. 1:3 ಅನುಪಾತದ ಅರ್ಹತಾ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ಅವರು ಫೆಬ್ರವರಿ 19ರಂದು ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಿದ್ದರು. ದಾಖಲೆಗಳ ಪರಿಶೀಲನೆ ವೇಳೆ, ಅವರು ಸಲ್ಲಿಸಿದ್ದ 2020ರ ಮಾರ್ಚ್ 4ರ ದಿನಾಂಕ ಹೊಂದಿರುವ ಜಾತಿ ಮತ್ತು ಆದಾಯ ಪ್ರಮಾಣಪತ್ರದಲ್ಲಿ ಕುಟುಂಬದ ವಾರ್ಷಿಕ ಆದಾಯ ಕೇವಲ 40 ಸಾವಿರ ಎಂದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.

ಶಿವಶಂಕರಪ್ಪ ಸಾಹುಕಾರ್ ಅವರು 2019 ರಿಂದಲೇ ಆಯೋಗದ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದು, ಆಯೋಗದಿಂದ ವೇತನ ಪಡೆಯುತ್ತಿದ್ದಾರೆ. ಹೀಗಿರುವಾಗ ಅವರ ಆದಾಯ ಕೇವಲ 40 ಸಾವಿರ ಎನ್ನುವುದು ಶುದ್ಧ ಸುಳ್ಳು ಎಂಬುದು ಸ್ಪಷ್ಟವಾಗಿದೆ. ಹೀಗಾಗಿ ಕೆಪಿಎಸ್ ಸಿ ಸಮಗ್ರತೆ ಮತ್ತು ವಿಶ್ವಾಸಾರ್ಹತೆಯನ್ನು ರಕ್ಷಿಸುವ ಜೊತೆಗೆ ನ್ಯಾಯಯುತ, ನಿಷ್ಪಕ್ಷಪಾತ ಮತ್ತು ಪ್ರಭಾವ ರಹಿತ ತನಿಖೆಯನ್ನು ಖಚಿತಪಡಿಸಲು, ರಾಷ್ಟ್ರಪತಿಗಳಿಂದ ಮುಂದಿನ ಆದೇಶ ಬರುವವರೆಗೆ ರಾಜ್ಯಪಾಲರು ಶಿವಶಂಕರಪ್ಪ ಸಾಹುಕಾರ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ. ಅಲ್ಲದೇ ಮುಂದಿನ ಆದೇಶ ಆಗುವವರಗೆ ಆಯೋಗದ ಹಿರಿಯ ಸದಸ್ಯರು ಆಯೋಗದ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವಂತೆ ರಾಜ್ಯಪಾಲರು ಆದೇಶಿಸಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು