ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಳ್ಳಾರಿಯಲ್ಲಿ ಮಧ್ಯರಾತ್ರಿ ಅಕ್ರಮ ಮರ ಕಟಾವು: ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಹಲ್ಲೆ, ಮೊಬೈಲ್ ಜಪ್ತಿ – ಪ್ರಕರಣ ದಾಖಲು

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಬಳ್ಳಾರಿಯಲ್ಲಿ ಮಧ್ಯರಾತ್ರಿ ಅಕ್ರಮ ಮರ ಕಟಾವು: ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಹಲ್ಲೆ, ಮೊಬೈಲ್ ಜಪ್ತಿ – ಪ್ರಕರಣ ದಾಖಲು

ಬಳ್ಳಾರಿ ನಗರದ ವಿದ್ಯಾನಗರ ವೃತ್ತದಿಂದ ಕೊಳಗಲ್ ರಸ್ತೆಯವರೆಗೆ ರಸ್ತೆ ಅಗಲೀಕರಣ ಕಾಮಗಾರಿಯ ನೆಪದಲ್ಲಿ ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಮರಗಳನ್ನು ಕಟಾವು ಮಾಡುತ್ತಿದ್ದ ಗುತ್ತಿಗೆದಾರರ ಕೃತ್ಯವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದಾಗ, ಈ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅಧಿಕಾರಿಯ ಮೊಬೈಲ್ ಹಾನಿಗೊಳಿಸಿದ ಆರೋಪದ ಮೇಲೆ ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಾಗಿದೆ.


ಘಟನೆಯ ವಿವರ:
ಏ.23 ರಂದು ರಾತ್ರಿ 10:30ರ ಸುಮಾರಿಗೆ ಚೈನಾಜ್ 1.10 ಕಿ.ಮೀ ನಿಂದ 1.60 ಕಿ.ಮೀ ವರೆಗೆ ರಸ್ತೆ ಬದಿಯ ಮರಗಳನ್ನು ಅಕ್ರಮವಾಗಿ ಕಟಾವು ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬಳ್ಳಾರಿ ಶಹರ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸುನೀಲಕುಮಾರ ಆರ್. ಚೌವ್ಹಾಣ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.
ಅನುಮತಿ ಪತ್ರ ಕೇಳಿದಾಗ, ಕಾಮಗಾರಿ ತುರ್ತಾಗಿ ಆಗಬೇಕಿದೆ ಎಂಬ ಹಾರಿಕೆ ಉತ್ತರದೊಂದಿಗೆ ಮರ ಕಟಾವು ಮುಂದುವರಿಸಲಾಯಿತು. ಇದನ್ನು ತಡೆಯಲು ಪ್ರಯತ್ನಿಸಿದಾಗ ಗುತ್ತಿಗೆದಾರರ ಸಹಚರರಾದ ತಿಲ್ಲು ಮತ್ತು ರವಿ ಮೋಕಾ ಎಂಬುವವರು ವಾಗ್ವಾದಕ್ಕಿಳಿದು, ಕೃತ್ಯವನ್ನು ಚಿತ್ರೀಕರಿಸುತ್ತಿದ್ದ ಅಧಿಕಾರಿಯ ಮೊಬೈಲ್ ಫೋನ್ ಕಿತ್ತುಕೊಂಡು ನೆಲಕ್ಕೆ ಎಸೆದು ಹಾನಿಗೊಳಿಸಿದ್ದಾರೆ. ನಂತರ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಮರ ಕಟಾವು ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಯಿತು.


ವಶಪಡಿಸಿಕೊಂಡ ಸ್ವತ್ತು ಮತ್ತು ದಾಖಲಾದ ಪ್ರಕರಣ:
ಸ್ಥಳ ಪರಿಶೀಲನೆಯಲ್ಲಿ ಒಟ್ಟು 25 ಮರಗಳನ್ನು (21 ತಪಸಿ, 02 ಬೇವು, 02 ಅರಳಿ) ಅಕ್ರಮವಾಗಿ ಕಟಾವು ಮಾಡಿರುವುದು ಪತ್ತೆಯಾಗಿದೆ. ಅಂದಾಜು 5 ಟನ್ ಸೌದೆಯನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡಿದೆ. ಕರ್ನಾಟಕ ಅರಣ್ಯ ಕಾಯ್ದೆ 1963 ಮತ್ತು ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ 1976 ರ ಅಡಿಯಲ್ಲಿ ಎನ್.ಸಿ ನಂ 01/2026-27 ರಂತೆ ಪ್ರಕರಣ ದಾಖಲಾಗಿದೆ.


ನ್ಯಾಯಾಲಯದ ಅನುಮತಿ ಪಡೆದು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ರಂತೆ ಶ್ರೀನಿವಾಸ್ (ಶ್ರೀನಿವಾಸ್ ಇನ್ಫಾç ಪ್ರಾಜೆಕ್ಟ್ ಪ್ರೆöÊ.ಲಿ) ಮತ್ತು ಇತರ ನಾಲ್ವರ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿದೆ ಮತ್ತು ಕರ್ತವ್ಯಕ್ಕೆ ಅಡ್ಡಿ ಮತ್ತು ಸಾಕ್ಷö್ಯ ನಾಶಪಡಿಸಿದ ಹಿನ್ನೆಲೆಯಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ನೀಡಲಾಗಿದೆ.


ನಿಯಮಗಳ ಉಲ್ಲಂಘನೆ:


ಈ ರಸ್ತೆ ಕಾಮಗಾರಿಗಾಗಿ ಒಟ್ಟು 233 ಮರಗಳ ಕಟಾವಿಗೆ ಲೋಕೋಪಯೋಗಿ ಇಲಾಖೆ ಅನುಮತಿ ಕೋರಿತ್ತು. ಆದರೆ, ಪರಿಸರ ಸಂರಕ್ಷಣೆ ದೃಷ್ಟಿಯಿಂದ 139 ಮರಗಳನ್ನು ಉಳಿಸಿಕೊಂಡು ಫುಟ್‌ಪಾತ್ ವಿನ್ಯಾಸ ಬದಲಿಸುವಂತೆ ಅರಣ್ಯ ಇಲಾಖೆಯು ಮಾರ್ಚ್ 23ರಂದೇ ಪತ್ರ ಬರೆದಿತ್ತು. ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡದ ಗುತ್ತಿಗೆದಾರರು, ಏಕಾಏಕಿ ತಡರಾತ್ರಿ ಈ ದುಷ್ಕೃತ್ಯ ಎಸಗಿದ್ದಾರೆ.


ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ 1976 ರ ಪ್ರಕಾರ 50ಕ್ಕೂ ಹೆಚ್ಚು ಮರಗಳ ಕಟಾವಿಗೆ ಸಾರ್ವಜನಿಕ ಆಕ್ಷೇಪಣೆ ಪಡೆಯುವುದು ಕಡ್ಡಾಯ. ಯಾವುದೇ ಆಕ್ಷೇಪಣೆ ಇಲ್ಲದಿದ್ದಲ್ಲಿ ರಸ್ತೆ ಅಗಲೀಕರಣದ ನಂತರ ಗಿಡಗಳನ್ನೂ ನೆಡಲು ಅನ್ವಯಿಸುವ ಶುಲ್ಕಗಳನ್ನು ಪಾವತಿಸಿಕೊಂಡು ಅನುಮತಿ ನೀಡಲು ಕ್ರಮವಹಿಸಬೇಕಾಗಿರುತ್ತದೆ. ಆದರೆ ಕಾನೂನು ಗಾಳಿಗೆ ತೂರಿ ಈ ಕೃತ್ಯ ಎಸಗಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಯ ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಬಸವರಾಜ ಕೆ.ಎನ್ ಅವರು ತಿಳಿಸಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು