ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

P

Peepal Media • ರಾಜ್ಯ

• 1 ನಿಮಿಷದ ಓದು

ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ .

ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ವಿಧಾನಸೌಧದಲ್ಲಿ ಇಂದು ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಾತಿ ಗಣತಿ ಅನುಷ್ಠಾನಕ್ಕೆ ಸಭೆಯಲ್ಲಿ ಒಕ್ಕೊರಲಿನಿಂದ ಒತ್ತಾಯ ಬಂದ ಸಂದರ್ಭದಲ್ಲಿ ಅದಕ್ಕೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದರು.

ಸರ್ಕಾರ ಜಾತಿ ಗಣತಿ ಪರವಾಗಿದೆ . ನಮ್ಮ ಸರ್ಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ.‌ ಮುಂದಿನ ದಿನಗಳಲ್ಲಿ ಅದನ್ನು ಖಂಡಿತವಾಗಿಯೂ ಜಾರಿ ಮಾಡಲಾಗುತ್ತದೆ ಅದರ ಬಗ್ಗೆ ಅನುಮಾನ ಬೇಡ ಎಂದು ತಿಳಿಸಿದರು.

ತಮಿಳು ನಾಡು ಮಾದರಿಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಭೆ ಆಗ್ರಹಿಸಿದಾಗ 1992 ರ ಇಂದಿರಾ ಸಹಾನಿ ಕೇಸನ್ನು ಉಲ್ಲೇಖಿಸಿ ಮೀಸಲಾತಿ ಶೇಕಡ 50ರಷ್ಟು ಮೀರಬಾರದು ಎನ್ನುವ ಅಂಶವನ್ನು ಸಭೆಗೆ ತಿಳಿಸುತ್ತಾ, ಕಳೆದ ಸರ್ಕಾರದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಎಂದು (EWS) ಮೀಸಲಾತಿ ಕಲ್ಪಿಸಿದ್ದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ.
ಸಂವಿಧಾನದ ಆರ್ಟಿಕಲ್ (15)(16)ರ ಪ್ರಕಾರ ಮೀಸಲಾತಿ ನೀಡಬೇಕಾಗಿರುವುದು ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮಾತ್ರ ನೀಡಬೇಕು ಎಂದಿದೆ .

ಜಾತಿ ಗಣತಿಯ ವರದಿ ವೈಜ್ಞಾನಿಕವಾಗಿ ತಯಾರಾಗಿದ್ದು ಸಮಾಜದ ಎಲ್ಲಾ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ತಿಳಿಯಲು ಅನುಕೂಲ ವಾಗಿದೆ. ಆ ಪ್ರಕಾರ ಸರ್ಕಾರದ ಕಾರ್ಯಕ್ರಮಗಳನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದರು.
ಇಷ್ಟು ವರ್ಷಗಳಾದರೂ ಸಮಾನತೆ ಯಾಕೆ ಬಂದಿರುವುದಿಲ್ಲ ಎಂಬುದು ಮುಖ್ಯ. ಕೆಲವರು ತಪ್ಪು ಗ್ರಹಿಕೆಯಿಂದ ಅದನ್ನು ವಿರೋಧಿಸುತ್ತಿದ್ದಾರೆ ಎಂದರು.

ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಮಹಿಳೆಯರು ಎಲ್ಲರನ್ನೂ ಮುಖ್ಯ ವಾಹಿನಿಗೆ ತರುವುದು ನಮ್ಮ ಸರ್ಕಾರದ ಉದ್ದೇಶ
ಅಸಮಾನತೆ ಹೋಗಬೇಕು ಜಾತಿ ವ್ಯವಸ್ಥೆಯಿಂದ ನಿರ್ಮಾಣವಾಗಿರುವ ಅಸಮಾನತೆಯಿಂದ ಬಹು ಸಂಖ್ಯಾತ ಜನ ಅವಕಾಶ ವಂಚಿತರಾಗಿದ್ದಾರೆ ಎಲ್ಲರಿಗೂ ಸಮಾನ ಅವಕಾಶ ನೀಡಬೇಕಿದೆ ತಳ ಸಮುದಾಯವಿರಲಿ, ಮೇಲ್ವರ್ಗವಿರಲಿ ಎಲ್ಲರಿಗೂ ಸಮಾನತೆ ಇರಬೇಕು ಎಂಬ ಅಂಶವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿ ದ್ದಾರೆ

ಹಿಂದುಳಿದ ಜಾತಿಗಳಲ್ಲೂ ತಾರತಮ್ಯ ಅಸಮಾನತೆ ಇದೆ ಇದನ್ನು ಒಂದೇ ಬಾರಿಗೆ ಹೋಗಲಾಡಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟರು .

ಅಲೆಮಾರಿ ಜನಾಂಗಕ್ಕೆ ವಿಶೇಷ ಸ್ಥಾನಮಾನ ನೀಡುವ ಬಗ್ಗೆ ಪ್ರತಿಕ್ರಿಯಿಸಿ ಅಲೆಮಾರಿ ಆಯೋಗ ರಚನೆಗೆ ಉಂಟಾಗಿರುವ ಸಮಸ್ಯೆಗಳಿಂದಾಗಿ ಆಯೋಗ ರಚನೆ ಸಾಧ್ಯವಾಗಿರುವುದಿಲ್ಲ ಎಂದರು.

ಅಲೆಮಾರಿ ಜನಾಂಗಕ್ಕೆ ಉಚಿತ ಶಿಕ್ಷಣ ಹಕ್ಕು ಒತ್ತಾಯಕ್ಕೆ ಪ್ರತಿಕ್ರಿಯಿಸಿ ಸರ್ಕಾರ ಶಿಕ್ಷಣದ ಹಕ್ಕನ್ನು ನೀಡಿದೆ (RTE)
ಅದರ ಪ್ರಕಾರ ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಅವಕಾಶ ಸಿಗಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈ ಬಾರಿಯ ಆಯವ್ಯಯದಲ್ಲಿ ಅಲೆಮಾರಿ ಜನಾಂಗಕ್ಕೆ ವಿಶೇಷ ಗಮನ ಹರಿಸುವುದಾಗಿ ತಿಳಿಸಿದರು. ಮಾತ್ರವಲ್ಲ ಅತಿ ಹಿಂದುಳಿದ ವರ್ಗದವರಿಗೂ ಕಾರ್ಯಕ್ರಮಗಳನ್ನು ಈ ಬಾರಿಯ ಆಯವ್ಯಯದಲ್ಲಿ ಅನುಷ್ಠಾನಗೊಳಿಸಲು ಪ್ರಯತ್ನಿಸುವುದಾಗಿ ಹೇಳಿದರು. ಜೊತೆಗೆ ಹಣಕಾಸಿನ ಲಭ್ಯತೆಗೆ ಅನುಗುಣವಾಗಿ ಹಿಂದುಳಿದ ವರ್ಗಗಳಿಗೆ ಕಾರ್ಯಕ್ರಮಗಳನ್ನು ರೂಪಿಸುವುದಾಗಿ ಭರವಸೆ ನೀಡಿದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version