ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದ.ಕ.ಜಿಲ್ಲೆಯಲ್ಲಿ ಬಿಜೆಪಿಯಿಂದ ಈ ಬಾರಿ ಇಬ್ಬರು ಮಹಿಳೆಯರಿಗೆ ಟಿಕೆಟ್, ಇಬ್ಬರಿಗೆ ಕೊಕ್

PPeepal Media Desk

Peepal Media Desk ರಾಜ್ಯ

• 2 ನಿಮಿಷದ ಓದು

ದ.ಕ.ಜಿಲ್ಲೆಯಲ್ಲಿ ಬಿಜೆಪಿಯಿಂದ ಈ ಬಾರಿ ಇಬ್ಬರು ಮಹಿಳೆಯರಿಗೆ ಟಿಕೆಟ್, ಇಬ್ಬರಿಗೆ ಕೊಕ್

ಮಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣಾ ಕಣ ಮತ್ತೆ ರಂಗೇರಿದ್ದು, ಬಿಜೆಪಿ ಮಂಗಳವಾರ ರಾತ್ರಿ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ‌. ದ.ಕ.ಜಿಲ್ಲೆಯಲ್ಲಿ ಹಾಲಿ ಐವರು ಶಾಸಕರಿಗೆ ಟಿಕೆಟ್ ಲಭ್ಯವಾಗಿದೆ. ಜೊತೆಗೆ ಇಬ್ಬರು ಮಹಿಳಾ ಅಭ್ಯರ್ಥಿಗಳು ಸೇರಿದಂತೆ ಮೂವರು ಹೊಸ ಮುಖಗಳಿಗೆ ಮಣೆ ಹಾಕಿದೆ.

ವಿಶೇಷವೆಂದರೆ ‘ಸೋಲಿಲ್ಲದ ಸರದಾರ’ನೆಂದೇ ಖ್ಯಾತರಾಗಿದ್ದ ಸುಳ್ಯ ಕ್ಷೇತ್ರದಲ್ಲಿ ಆರು ಬಾರಿ ಜಯಭೇರಿ ಬಾರಿಸಿದ್ದ ಹಾಲಿ ಸಚಿವ ಎಸ್.ಅಂಗಾರ ಈ ಬಾರಿ ಟಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದಾರೆ. ಅದೇ ರೀತಿ ಪುತ್ತೂರು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಸಂಜೀವ ಮಠಂದೂರು ಅವರಿಗೆ ಟಿಕೆಟ್ ಸಿಕ್ಕಿಲ್ಲ. ಸಂಜೀವ ಮಠಂದೂರು ಅವರು ಕಾರ್ಯಕರ್ತರ ಪರವಾಗಿಲ್ಲ ಎಂದು ಕೇಳಿ ಬರುವ ಆರೋಪವೇ ಅವರಿಗೆ ಟಿಕೆಟ್ ನಿರಾಕರಣೆಗೆ ಕಾರಣ ಎನ್ನಲಾಗುತ್ತಿದೆ. ಅಭಿವೃದ್ಧಿ ಶೂನ್ಯವೆಂಬ ಹಿನ್ನೆಲೆಯಲ್ಲಿ ಕ್ಷೇತ್ರದ ಜನರಿಂದ ವಿರೋಧ ವ್ಯಕ್ತವಾಗಿದ್ದ ಕಾರಣ ಎಸ್.ಅಂಗಾರ ಅವರನ್ನು ನಿವೃತ್ತಿಗೊಳಿಸಲಾಗಿದೆ.

ಮಂಗಳೂರು ಉತ್ತರಕ್ಕೆ ಡಾ.ವೈ.ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ವೇದವ್ಯಾಸ ಕಾಮತ್, ಮುಲ್ಕಿ – ಮೂಡುಬಿದಿರೆ ಕ್ಷೇತ್ರಕ್ಕೆ ಉಮಾನಾಥ ಕೋಟ್ಯಾನ್, ಬಂಟ್ವಾಳ ರಾಜೇಶ್ ನಾಯ್ಕ್, ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾ ಹೀಗೆ ಈ ಐವರು ಹಾಲಿ ಶಾಸಕರಿಗೆ ಅವರ ಈ ಹಿಂದೆ ಇದ್ದ ಕ್ಷೇತ್ರದಲ್ಲಿಯೇ ಮತ್ತೊಮ್ಮೆ ಟಿಕೆಟ್ ನೀಡಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಲಾಗಿದೆ. ಆದರೆ ಮಂಗಳೂರು ಕ್ಷೇತ್ರದಲ್ಲಿ ಈ ಬಾರಿ ಹೊಸ ಮುಖ ಸತೀಶ್ ಕುಂಪಲ ಅವರಿಗೆ ಟಿಕೆಟ್ ದೊರಕಿದೆ. ಕಳೆದ ಬಾರಿ ಸಂತೋಷ್ ರೈ ಬೋಳಿಯಾರು ಈ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಯು.ಟಿ.ಖಾದರ್ ಅವರ ಎದುರು ಕಣಕ್ಕಿಳಿದು ಸೋತಿದ್ದರು. ಈ ಬಾರಿ ಸಂತೋಷ್ ರೈ ಅವರ ಬದಲು ಬಿಜೆಪಿ ಸತೀಶ್ ಕುಂಪಲ ಅವರಿಗೆ ಮಣೆ ಹಾಕಿದೆ.

ಪುತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಆಶಾ ತಿಮ್ಮಪ್ಪರಿಗೆ ಟಿಕೆಟ್ ನೀಡಲಾಗಿದೆ. 65 ವಯಸ್ಸಿನ ಆಶಾ ತಿಮ್ಮಪ್ಪ ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಕುಂತೂರು ಗ್ರಾಮದ ನಿವಾಸಿ. ಈ ಹಿಂದೆ ದ.ಕ.ಜಿಲ್ಲಾ ಪಂಚಾಯತ್ ನ ಅಧ್ಯಕ್ಷೆಯಾಗಿದ್ದವರು‌. ಬಿಜೆಪಿಯ ಹಿರಿಯ ಕಾರ್ಯಕರ್ತೆಯಾಗಿರುವ ಇವರು ನೆಲ್ಯಾಡಿ ಹಾಗೂ ಬೆಳ್ಳಾರೆಯಿಂದ ಜಿಲ್ಲಾ ಪಂಚಾಯತ್ ಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ ಇವರಿಗೆ ಟಿಕೆಟ್ ನೀಡಿದ್ದು ಕಾರ್ಯಕರ್ತರಿಗೆ ಅಸಮಾಧಾನವಿದೆ. ಪುತ್ತೂರಿನಲ್ಲಿ ಆರ್ ಎಸ್ ಎಸ್ ಸೂಚಿತ ಅಭ್ಯರ್ಥಿ ಕಿಶೋರ್ ಕುಮಾರ್ ಬೊಡ್ಯಾಡಿ ಅವರಿಗೆ ಜಾತಿ ಮೀರಿ ಟಿಕೆಟ್ ನೀಡಬೇಕೆಂಬ ಬೇಡಿಕೆ ಕಾರ್ಯಕರ್ತರಲ್ಲಿತ್ತು. ಸ್ಥಳೀಯರಿಗೆ ಟಿಕೆಟ್ ನೀಡುವಂತೆ ಜಿಲ್ಲಾ ಕೋರ್ ಕಮಿಟಿ ಮುಂದೆ ಇಟ್ಟಿರುವ ಬೇಡಿಕೆಗೂ ಯಾವ ಮಾನ್ಯತೆಯೂ ದೊರಕಿಲ್ಲ. ಅಲ್ಲದೆ ಹಿಂದೂ ಕಾರ್ಯಕರ್ತ ಅರುಣ್ ಕುಮಾರ್ ಪುತ್ತಿಲ ಅವರನ್ನು ಕಡಿಗಣಿಸಿರುವುದು ಅಭಿಮಾನಿಗಳಿಗೆ ನಿರಾಸೆ ಉಂಟಾಗಿದೆ.

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಅಂಗಾರ ಬದಲಿಗೆ ಮಹಿಳಾ ಅಭ್ಯರ್ಥಿ ಭಾಗೀರಥಿ ಮುರುಳ್ಯರಿಗೆ ಟಿಕೆಟ್ ಭಾಗ್ಯ ಒಲಿದಿದೆ‌. ಮಾಜಿ ಜಿಪಂ ಸದಸ್ಯೆ ಭಾಗೀರಥಿ ಮುರುಳ್ಯ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ಹಿಂದೆ ಬೀಡಿ ಕಟ್ಟುವ ಕೆಲಸ ಮಾಡುತ್ತಿದ್ದ ಇವರು ಗೌರವ ಶಿಕ್ಷಕಿಯಾಗಿಯೂ ಕೆಲಸ ನಿರ್ವಹಿಸಿದ್ದರು. ಪ್ರಸ್ತುತ ಹೈನುಗಾರಿಕೆ ಹಾಗೂ ಟೈಲರಿಂಗ್ ಕೆಲಸ ಮಾಡುತ್ತಿದ್ದಾರೆ. ತಾಲ್ಲೂಕು ಪಂಚಾಯತ್ ಸದಸ್ಯೆಯಾಗಿದ್ದ ಭಾಗೀರಥಿ ಮುರುಳ್ಯ ಬಿಜೆಪಿ ಪಕ್ಷದಲ್ಲಿ ಹಲವಾರು ಜವಾಬ್ದಾರಿಯನ್ನು ನಿರ್ವಹಿಸಿದ್ದರು

ಇದನ್ನೂ ಓದಿ- ಕರಾವಳಿಯಲ್ಲಿ ನಾಯಕನಿಲ್ಲದೆ ಅತಂತ್ರವಾದ ಕಾಂಗ್ರೆಸ್

ವಿಷಯಗಳು: #india #kannada #karnataka #peepal #peepalmedia
PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು