ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಂಬೇಡ್ಕರ್ ರೂಪಿಸಿದ ಭಾರತೀಯ ಸಂವಿಧಾನದಲ್ಲಿ ಇತರೆ ದೇಶಗಳಲ್ಲಿದ ಸಾಮಾಜಿಕ ನ್ಯಾಯದ ಮೌಲ್ಯಗಳಿವೆ: ಸಿ ಎಮ್

P

Peepal Media Desk • ರಾಜ್ಯ

• 1 ನಿಮಿಷದ ಓದು

ಅಂಬೇಡ್ಕರ್ ರೂಪಿಸಿದ ಭಾರತೀಯ ಸಂವಿಧಾನದಲ್ಲಿ ಇತರೆ ದೇಶಗಳಲ್ಲಿದ ಸಾಮಾಜಿಕ ನ್ಯಾಯದ ಮೌಲ್ಯಗಳಿವೆ: ಸಿ ಎಮ್

“ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ. ಇಡೀ ಜಗತ್ತು ಮಾನವೀಯ ಬೆಸುಗೆಯಲ್ಲಿ ಬೆರೆಯಲು, ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸಂಸ್ಕೃತಿಯನ್ನು ಪಾಲಿಸಿದಾಗ ಜಗತ್ತಲ್ಲಿ ಶಾಂತಿ ನೆಲೆಸುತ್ತದೆ” ಎಂದು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಿನೆಮಾ ಬಹಳ ಪ್ರಭಾವಿ ಮಾಧ್ಯಮ. ನೋಡುಗರ ಮನಸ್ಸು, ಆಲೋಚನೆಯ ಮೇಲೆ ಪ್ರಭಾವ ಬೀರುವ ಶಕ್ತಿ ಸಿನಿಮಾಗಿದೆ. ಸಿನಿಮಾಗಳ ಮೂಲಕ ದೇಶದ ಒಳಗಿನ, ಇತರೆ ದೇಶಗಳ ಜನ ಸಂಸ್ಕೃತಿಯನ್ನು ಅರಿಯುವ ಮತ್ತು ಆ ಮೂಲಕ ನಮ್ಮ ಮಾನವೀಯ ಸಂಸ್ಕೃತಿಯನ್ನು ವಿಸ್ತರಿಸಿಕೊಳ್ಳಲು ನೆರವಾಗುತ್ತದೆ. ಇದಕ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ವೇಗವರ್ದಕವಾಗಿ ಕೆಲಸ ಮಾಡುತ್ತದೆ ಎಂದು ಅವರು ತಿಳಿಸಿದರು.

ಅಂಬೇಡ್ಕರ್ ಅವರು ರೂಪಿಸಿದ ಭಾರತೀಯ ಸಂವಿಧಾನದಲ್ಲಿ ಇತರೆ ದೇಶಗಳ ಸಂವಿಧಾನದಲ್ಲಿ ಇಲ್ಲದ ಸಾಮಾಜಿಕ ನ್ಯಾಯದ ಮೌಲ್ಯಗಳಿವೆ. ಅಂಬೇಡ್ಕರ್ ಮತ್ತು ಅವರ ಮೌಲ್ಯಗಳ ಕುರಿತಾದ ಸಿನಿಮಾಗಳಿಗೆ ಅಗತ್ಯವಾದ ಎಲ್ಲಾ ರೀತಿಯ ನೆರವನ್ನು ನೀಡಲಾಗುವುದು.

ಕುವೆಂಪು ಅವರ ವಿಶ್ವ ಮಾನವ ಸಂಸ್ಕೃತಿಯನ್ನು ವಿಶ್ವದಲ್ಲಿ ಹೆಚ್ಚೆಚ್ಚು ಪಾಲಿಸುವಂಥ ವಾತಾವರಣ ಸೃಷ್ಟಿಯಾಗಬೇಕು. ಇದಕ್ಕೆ ವಿಶ್ವ ಸಿನಿಮಾಗಳು ನೆರವಾಗುತ್ತವೆ ಎಂದರು.

2019 ರಿಂದ ಚಲನಚಿತ್ರ ಪ್ರಶಸ್ತಿಗಳನ್ನು ಕೊಟ್ಟಿಲ್ಲ. ನಾವು ಬಾಕಿ ಉಳಿದಿರುವ ಎಲ್ಲಾ ವರ್ಷಗಳ ಉತ್ತಮ ಸಿನಿಮಾಗಳ ಆಯ್ಕೆಗೆ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿ ವರದಿ ಕೊಟ್ಟ ತಕ್ಷಣ ಪ್ರಶಸ್ತಿಗಳನ್ನು ಘೋಷಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಸಭಾಪತಿಗಳಾದ ಬಸವರಾಜ ಹೊರಟ್ಟಿ, ಶ್ರೇಷ್ಠ ನಟ ಶಿವರಾಜ್ ಕುಮಾರ್, ಅಂತಾರಾಷ್ಟ್ರೀಯ ಚಿತ್ರೋತ್ಸವದ ರಾಯಭಾರಿಯಾದ ನಟ ಡಾಲಿ ಧನಂಜಯ್, ಖ್ಯಾತ ನಿರ್ದೇಶಕ ಜಬ್ಬಾರ್ ಪಟೇಲ್, ಚೆಕ್ ರಿಪಬ್ಲಿಕ್ ದೇಶದ ಚಿತ್ರ ವಿಮರ್ಷಕರಾದ ಮೆಯೆರಾ ಲಾಂಗೆರೊವಾ, ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕರಾದ ವಿದ್ಯಾಶಂಕರ್, ನಟಿ ಆರಾಧನಾ, ಚಲನಚಿತ್ರ ಅಕಾಡೆಮಿಯ ನಿಯೋಜಿತ ಅಧ್ಯಕ್ಷರಾದ ಸಾಧು ಕೋಕಿಲಾ, ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್.ಎಂ.ಸುರೇಶ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version