ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಪತ್ರಕರ್ತರ ತರಬೇತಿಗಾಗಿ ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌ – ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಪತ್ರಕರ್ತರ ತರಬೇತಿಗಾಗಿ ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌ – ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್‌ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್‌ ಸಿಎಸ್‌ಆರ್‌ ಕಾರ್ಯಕ್ರಮದಡಿ ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರ ತರಬೇತಿಗಾಗಿ ಒಡಂಬಡಿಕೆ ಮಾಡಿಕೊಂಡಿದೆ.
ಪತ್ರಕರ್ತರ ಸಾಫ್ಟ್‌ಸ್ಕಿಲ್‌ ತರಬೇತಿಯ ಉದ್ದೇಶಕ್ಕಾಗಿ ಮಾಡಿಕೊಳ್ಳುತ್ತಿರುವ ಈ ಒಡಂಬಡಿಕೆಯು ಸಿ.ಎಸ್.ಆರ್.‌ ಅಡಿ ಕರ್ನಾಟಕ ಮಾಧ್ಯಮ ಅಕಾಡೆಮಿ ಕೈಗೆತ್ತಿಕೊಂಡ ಮೊದಲ ಕಾರ್ಯಕ್ರಮವಾಗಿದೆ.
ಇನ್ಫೋಸಿಸ್ CSR ಯೋಜನೆಯ “ಸ್ಪ್ರಿಂಗ್‌ಬೋರ್ಡ್” ಪ್ಲಾಟ್‌ಫಾರ್ಮ್ ಮೂಲಕ ಪತ್ರಕರ್ತರ ಡಿಜಿಟಲ್ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಸಾಮರ್ಥ್ಯ ನಿರ್ಮಾಣ ಈ ಒಡಂಬಡಿಕೆಯ ಉದ್ದೇಶವಾಗಿದೆ.
“ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿಯ ಸಹಭಾಗಿತ್ವವು ಬದಲಾಗುತ್ತಿರುವ ಹೊಸ ಮಾಧ್ಯಮಕ್ಕೆ ಹೊಂದಿಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಈ ವಿನೂತನ ಪ್ಲಾಟ್‌ಫಾರಂ ಮಾಧ್ಯಮ ವೃತ್ತಿಪರರ ಕೌಶಲ್ಯ ಉನ್ನತೀಕರಣಕ್ಕೆ, ಅದರಲ್ಲೂ ವಿಶೇಷವಾಗಿ ಪತ್ರಕರ್ತರಿಗೆ ವೇಗವಾಗಿ ಬದಲಾಗುತ್ತಿರುವ ಸನ್ನಿವೇಶಗಳಿಗೆ ಅನುಗುಣವಾಗಿ ತಾಂತ್ರಿಕ ಪರಿಣತಿ ಹಾಗೂ ಸುದ್ದಿಯನ್ನು ಪ್ರಸ್ತುತಪಡಿಸುವ ಕೌಶಲವನ್ನು ಒದಗಿಸಲಿದೆ” ಎಂಬ ಆಶಯವನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಶ್ರೀಮತಿ ಆಯೇಶಾ ಖಾನಂ ಅವರು ವ್ಯಕ್ತಪಡಿಸಿದ್ದಾರೆ.
“ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌ ಶಿಕ್ಷಣ ಕುರಿತ ಸಿಎಸ್‌ಆರ್‌ ಕಾರ್ಯಕ್ರಮವಾಗಿದೆ. ಇಂದು ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌ ಮಾಧ್ಯಮ ಅಕಾಡೆಮಿಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದೆ. ಮಾಧ್ಯಮ ಅಕಾಡೆಮಿಗೆ ಸ್ಪ್ರಿಂಗ್‌ಬೋರ್ಡ್‌ನ ಡಿಜಿಟಲ್‌ ವಿಷಯಗಳಿಗೆ ಪ್ರವೇಶ ಲಭಿಸಲಿದೆ ಮತ್ತು ಅವರು ಸಾಫ್ಟ್ ಸ್ಕಿಲ್ ಗಳು, ವ್ಯಕ್ತಿತ್ವ ವಿಕಾಸ ಹಾಗೂ ಕೃತಕ ಬುದ್ಧಿಮತ್ತೆ (AI) ಸೇರಿದಂತೆ ಇತ್ತೀಚಿನ ತಂತ್ರಜ್ಞಾನಗಳ ಅವಲೋಕನ ಕುರಿತ ವಿಷಯಗಳಿಂದ ಪ್ರಯೋಜನ ಪಡೆಯಬಹುದು. ಇದು ವಿಶೇಷವಾಗಿ 2ನೇ ಹಾಗೂ 3ನೇ ಹಂತದ ನಗರಗಳ ಪತ್ರಕರ್ತರಿಗೆ ಖಂಡಿತವಾಗಿಯೂ ಸಹಾಯಕವಾಗಲಿದೆ” ಎಂದು ಇನ್ಫೋಸಿಸ್ ನ ಹಿರಿಯ ಉಪಾಧ್ಯಕ್ಷ (ಇ ಟಿ ಎ) ಶ್ರೀ ಸತೀಶ ಬಿ. ನಂಜಪ್ಪ ಅವರು ಅಭಿಪ್ರಾಯ ಪಟ್ಟಿದ್ದಾರೆ.
ತರಬೇತಿ
ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌ ಕಾರ್ಯಕ್ರಮದಡಿ ಪತ್ರಕರ್ತರಿಗೆ ಮೂರು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಇದರಲ್ಲಿ ಡಿಜಿಟಲ್‌ ಮಾಧ್ಯಮಕ್ಕೆ ಅಗತ್ಯ ಕೌಶಲ್ಯಗಳು, ಕೃತಕ ಬುದ್ಧಿಮತ್ತೆಯ ಬಳಕೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದಂತೆ ತರಬೇತಿ ನೀಡಲಾಗುವುದು.
ಈ ವರ್ಷದಲ್ಲಿ ಒಟ್ಟು ಮೂರು ಕಾರ್ಯಕ್ರಮಗಳ ಮೂಲಕ ಒಟ್ಟು 150 ಪತ್ರಕರ್ತರಿಗೆ ತರಬೇತಿ ನೀಡಲು ಉದ್ದೇಶಿಸಿದೆ. ಇದರಲ್ಲಿ ವಿಶೇಷವಾಗಿ ಒಂದು ಬ್ಯಾಚ್‌ನಲ್ಲಿ ಮಹಿಳಾ ಆಯವ್ಯಯದಡಿ ಪತ್ರಕರ್ತೆಯರಿಗೆ ತರಬೇತಿ ನೀಡಲು ಉದ್ದೇಶಿಸಿದೆ.
ಜಿಲ್ಲಾ ಮಟ್ಟದ ಪತ್ರಕರ್ತರಿಗೆ ಈ ತರಬೇತಿಯಲ್ಲಿ ಆದ್ಯತೆ ನೀಡಲಾಗುವುದು.

ಇನ್ಫೋಸಿಸ್ ಸಂಸ್ಥೆಯು ಪ್ಲಾಟ್‌ಫಾರ್ಮ್ ಮತ್ತು ಪರಿಣತಿ ಒದಗಿಸಲಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರು ಹಾಗೂ ಶಿಕ್ಷಕರ ಭಾಗವಹಿಸುವಿಕೆ ಸಮನ್ವಯಗೊಳಿಸಲಿದೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗುಣಮಟ್ಟದ ಸುಧಾರಣೆಯ ನಿಟ್ಟಿನಲ್ಲಿ ಇದೊಂದು ಮಹತ್ವದ ಉಪಕ್ರಮವಾಗಿದೆ.

ಹೆಚ್ಚು ಪತ್ರಕರ್ತರಿಗೆ ತರಬೇತಿ ನೀಡುವ ಆಶಯದೊಂದಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯು ಮುಂದಡಿಯಿಟ್ಟಿದೆ.

ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ, ಸದಸ್ಯ ಹೆಚ್.ವಿ. ಕಿರಣ್‌ ಇನ್‌ಫೋಸಿಸ್ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಸತೀಶ ಬಿ. ನಂಜಪ್ಪ, ಹಿರಿಯ ಅಧಿಕಾರಿಗಳಾದ ಸಂತೋಷ್‌ ಅನಂತಪುರ, ಬಿಳಿಗಿರಿ ರಂಗ ಮೊದಲಾದವರು ಉಪಸ್ಥಿತರಿದ್ದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು