ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇನ್ನುಮುಂದೆ ರಾಜ್ಯ ಹಾಗೂ ರಾಷ್ಟ್ರ ಪ್ರಣಾಳಿಕೆಗಳಲ್ಲಿ ಜನರ ಅಭಿಪ್ರಾಯ : ರಾಹುಲ್‌ ಗಾಂಧಿ

PPeepal Media

Peepal Media ರಾಜ್ಯ

• 2 ನಿಮಿಷದ ಓದು

ಇನ್ನುಮುಂದೆ ರಾಜ್ಯ ಹಾಗೂ ರಾಷ್ಟ್ರ ಪ್ರಣಾಳಿಕೆಗಳಲ್ಲಿ ಜನರ ಅಭಿಪ್ರಾಯ : ರಾಹುಲ್‌ ಗಾಂಧಿ

ಬೆಂಗಳೂರು : ರಾಹುಲ್ ಗಾಂಧಿ ಅವರು ಶುಕ್ರವಾರದಂದು ಶಿಕ್ಷಣ ತಜ್ಞರ ಜೊತೆ ಸಭೆ ನಡೆಸಿದ್ದು, ಹಲವು ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು, ಮಹಿಳಾ ಶಿಕ್ಷಕಿಯರು ಈ ಸಂವಾದದಲ್ಲಿ ಭಾಗವಹಿಸಿದ್ದರು. ಇವರೆಲ್ಲರೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಾಗೂ ಎನ್ ಇಪಿ ಜಾರಿ ನಂತರ ನಮ್ಮ ಶಿಕ್ಷಣ ಕ್ಷೇತ್ರದಲ್ಲಿ ಆಗುತ್ತಿರುವ ತೊಂದರೆಗಳ ವಿಚಾರವನ್ನು ರಾಹುಲ್ ಗಾಂಧಿ ಅವರ ಮುಂದೆ ಪ್ರಸ್ತಾಪಿಸಿದರು.

ಸಭೆಯಲ್ಲಿ ನ್ಯಾಷನಲ್ ಲಾ ಸ್ಕೂಲ್ ಪ್ರಾಧ್ಯಾಪಕರು ಮಾತನಾಡಿ ʼಎನ್ಇಪಿ ಜಾರಿ ನಂತರ ಮೂರು ಸಮಸ್ಯೆಗಳು ಎದುರಾಗಿದ್ದು, ಕೋಮುವಾದಿಕರಣ, ವಾಣಿಜ್ಯಕರಣ ಹಾಗೂ ಕೇಂದ್ರಿಕರಣದಿಂದ ಕಳೆದ 75 ವರ್ಷಗಳಲ್ಲಿ ನಮ್ಮ ದೇಶದ ಶಿಕ್ಷಣ ಕ್ಷೇತ್ರದ ಅಡಿಪಾಯ ನಾಶವಾಗುತ್ತಿದೆ. ಕೋಮುವಾದದ ವಿಷಬೀಜವನ್ನು ಚಿಕ್ಕ ಮಕ್ಕಳ ಮನಸ್ಸಿನಲ್ಲಿ ಬಿತ್ತುತ್ತಿದ್ದಾರೆʼಎಂದು ಹೇಳಿದರು

ನಮ್ಮ ರಾಜ್ಯದ ಪಠ್ಯಪುಸ್ತಕದಲ್ಲಿ ಸಾರ್ವಕರ್ ವಿಚಾರವಾಗಿ ಇದ್ದ ಪಾಠದಲ್ಲಿ ಬುಲ್ ಬುಲ್ ಹಕ್ಕಿ ಮೇಲೆ ಕೂತು ತಾಯ್ನಾಡನ್ನು ಸಂದರ್ಶಿಸುತ್ತಿದ್ದರು ಎಂಬಂತಹ ಕಟ್ಟು ಕಥೆಗಳು ಮಕ್ಕಳ ಮೇಲೆ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬ ವಿಚಾರವೂ ಚರ್ಚೆ ಆಯಿತು. ಈ ರೀತಿ ಮಾಡುತ್ತಿರುವುದೇಕೆ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ರಾಹುಲ್‌ ಗಾಂಧಿ ʼಜನರಲ್ಲಿ ಚಿಕ್ಕ ವಯಸ್ಸಿನಲ್ಲೇ ಹೊಸ ಹೊಸ ಪುರಾಣಗಳನ್ನು ಸೃಷ್ಟಿಸಿ ಅವರು ನಂಬುವಂತೆ ಮಾಡುವ ಪ್ರಯತ್ನ ನಡೆಯುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದವರಿಗೆ ಪ್ರಾಮುಖ್ಯತೆ ನೀಡಲು ಇಂತಹ ಪ್ರಯತ್ನ ಮಾಡಲಾಗುತ್ತಿದೆʼ ಎಂದು ತಿಳಿಸಿದರು.

ಆರ್ ಎಸ್ಎಸ್ ಗೆ ಆರ್ಥಿಕ ನೆರವು ಹೇಗೆ ಬರುತ್ತಿದೆ ಎಂದು ಕೇಳಿದಾಗ ಅದಕ್ಕೆ ಸರಿಯಾದ ದಾಖಲೆಗಳು ಇಲ್ಲವಾಗಿದೆ. ಆದರೆ ಬಿಜೆಪಿ ಸರ್ಕಾರದ ರಾಜ್ಯಗಳಲ್ಲಿ ಸಾರ್ವಜನಿಕ ಶಾಲೆಗಳಿಗೆ ಹೋಗಬೇಕಾದ ಅನುದಾನಗಳು ಆರ್ ಎಸ್ಎಸ್ ಶಾಲೆಗಳಿಗೆ ನೀಡಲಾಗುತ್ತಿದೆ ಎಂಬ ವಿಚಾರ ಚರ್ಚೆ ಆಯಿತು. ಕೋವಿಡ್ ಸಮಯದಲ್ಲಿ ಶಾಲೆ ಮುಚ್ಚಿರುವ ಪ್ರಮಾಣದಲ್ಲಿ ದೇಶವೇ ಮೊದಲು. ಈ ಸಂದರ್ಭದಲ್ಲಿ ಶ್ರೀಮಂತರ ಮಕ್ಕಳು ಶಿಕ್ಷಣ ಪಡೆದರು, ಬಡವರು 2 ವರ್ಷ ಶಿಕ್ಷಣದಿಂದ ದೂರವಾಗಿದ್ದರು. ಈ ಮಕ್ಕಳು ಹೇಗೆ ತಮ್ಮ ಶಿಕ್ಷಣದ ಕೊರತೆ ನೀಗಿಸುತ್ತಾರೆ, ಇದಕ್ಕೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ವಿಚಾರಗಳು ಚರ್ಚೆ ಆಗಿವೆ.

ಮಂಡ್ಯ ಮೂಲದ ಶಿಕ್ಷಕಿ ಮಾತನಾಡಿ, ʼಪೋಷಕರು ಸರ್ಕಾರಿ ಶಾಲೆಗಿಂತ ಖಾಸಗಿ ಶಾಲೆಗಳತ್ತ ಹೆಚ್ಚಿನ ಒಲವು ತೋರಿದ್ದು, ಅವರ ಪ್ರಕಾರ ಸರ್ಕಾರಿ ಶಾಲೆಗಳ ಮೂಲಸೌಕರ್ಯಕ್ಕೆ ಅನುದಾನ, ಶಿಕ್ಷಕರಿಗೆ ಅನುದಾನ ನೀಡುತ್ತಿಲ್ಲ. ಹೀಗಾಗಿ ಬಡವರು ಕೂಡ ಖಾಸಗಿ ಶಾಲೆಗಳತ್ತ ಮುಖಮಾಡಿದ್ದಾರೆ ಎಂದರು. ಇದಕ್ಕೆ ಪರಿಹಾರ ಏನು ಎಂದು ಕೇಳಿದಾಗ ಉತ್ತರಿಸಿದ ರಾಹುಲ್ ಗಾಂಧಿ ಅವರು, ಸರ್ಕಾರಗಳು ಅನುದಾನಗಳನ್ನು ಹೆಚ್ಚಿಸಬೇಕು. ಈ ಬಗ್ಗೆ ಪ್ರಣಾಳಿಕೆಯಲ್ಲಿ ವಿಚಾರ ಸೇರಿಸುತ್ತೇವೆ. ಸರ್ಕಾರದಿಂದ ಉತ್ತಮ ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಐಐಟಿಗಳೆಲ್ಲವೂ ಸರ್ಕಾರದ ಕಾಲೇಜುಗಳಾಗಿವೆ. ಸರ್ಕಾರ ಮನಸ್ಸು ಮಾಡಿದರೆ ಉತ್ತಮ ಶಿಕ್ಷಣ ನೀಡಬಹುದುʼ ಎಂದರು.

ಇನ್ನು ಈಗಿನ ಪರಿಸ್ಥಿತಿಯಲ್ಲಿ ಉಳ್ಳವರಿಗೆ ಉತ್ತಮ ಶಿಕ್ಷಣ ಹಾಗೂ ಭವಿಷ್ಯ ಸಿಗುತ್ತಿದ್ದು, ಬಡವರು ಶಿಕ್ಷಣ ವಂಚಿತರಾಗುತ್ತಿದ್ದಾರೆ. ಹಿಂದುಳಿಯುತ್ತಿದ್ದಾರೆ ಎಂದು ಚರ್ಚಿಸಲಾಯಿತು. ಸರ್ಕಾರಿ ಶಾಲೆ ಅಭಿವೃದ್ಧಿ ಪಡಿಸಿ ಸಮಾನ ಶಿಕ್ಷಣ ನೀಡುವಂತೆ ಮಾಡಬೇಕು ಎಂಬ ಒತ್ತಾಯ ಮಾಡಲಾಯಿತು. ಇದನ್ನು ಒಪ್ಪಿದ ರಾಹುಲ್ ಗಾಂಧಿ 1947ರಿಂದ ನಮ್ಮ ಶಿಕ್ಷಣ ನೀತಿಗಳಲ್ಲಿ ಸಮಾನ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಮುಂದೆಯೂ ಈ ಬಗ್ಗೆ ಕಾರ್ಯಕ್ರಮ ರೂಪಿಸಲಾಗುವುದು ಎಂದರು.

ಕಾಂಗ್ರೆಸ್ ಸರ್ಕಾರ ಇರುವ ರಾಜ್ಯಗಳಲ್ಲಿ ಹಾಗೂ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಮಾಡಲಾಗಿದ್ದು, ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಇನ್ನು ಮಹಿಳೆಯರ ವಿಚಾರ, ಹಿಜಾಬ್ ವಿವಾದದಿಂದ ಹೆಣ್ಣು ಮಕ್ಕಳ ಶಿಕ್ಷಣ ಕಸಿಯುವ ಪ್ರಯತ್ನ, ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಲ್ಲಿ ಪಠ್ಯ ಕೋಮುವಾದದಿಂದ ತುಂಬುವುದರ ವಿರುದ್ಧ ಚರ್ಚೆ ಮಾಡಿದರು.

ಕಡೆಯದಾಗಿ ಮಾತನಾಡಿದ ರಾಹುಲ್ ಗಾಂಧಿ ಅವರು, ʼಇದು ಚಿಕ್ಕ ಚರ್ಚೆ ಮಾಡಿದ್ದೇವೆ ಅಷ್ಟೇ. ಇನ್ನುಮುಂದೆ ನಮ್ಮ ರಾಜ್ಯದ ಪ್ರಣಾಳಿಕೆ, ಹಾಗೂ ರಾಷ್ಟ್ರ ಪ್ರಣಾಳಿಕೆಗಳಲ್ಲಿ ನಿಮ್ಮ ಅಭಿಪ್ರಾಯ ಸಂಗ್ರಹಿಸಿ ಜನರ ಪ್ರಣಾಳಿಕೆ ಮಾಡಲಾಗುವುದು ಎಂದು ಭರವಸೆಯ ಮಾತುಗಳನ್ನಾಡಿದರು.

ಇದನ್ನೂ ನೋಡಿ: ಹಿಂದೂ ಎಂಬ ಧರ್ಮವೇ ಇರಲಿಲ್ಲ : ಕಮಲ್‌ ಹಾಸನ್‌

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು