ಇನ್ಸ್ಟಾಗ್ರಾಮ್ ಫೈಟ್ ಕೊಲೆಯಲ್ಲಿ ಅಂತ್ಯ: ಮೂವರು ಅಪ್ರಾಪ್ತರು ಪೊಲೀಸ್ ವಶಕ್ಕೆ
ಲಿಂಕ್ ನಕಲಿಸಲಾಗಿದೆ ✓
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಇನ್ಸ್ಟಾಗ್ರಾಮ್ನಲ್ಲಿ ಆರಂಭವಾದ ಜಗಳ ಅಪ್ರಾಪ್ತ ಬಾಲಕನ ಹತ್ಯೆಗೆ ಕಾರಣವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಮೂವರು ಅಪ್ರಾಪ್ತ ಬಾಲಕರನ್ನು ಬಂಧಿಸಲಾಗಿದ್ದು, ಜೊತೆಗೆ ಓರ್ವ ವ್ಯಕ್ತಿಯನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಮೃತನನ್ನು 17 ವರ್ಷದ ಪ್ರಜ್ವಲ್ ಸುಂಕದ ಎಂದು ಗುರುತಿಸಲಾಗಿದೆ.
ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.26ರಂದು ಸಂಜೆ ಈ ಘಟನೆ ನಡೆದಿದೆ.
ಮೃತ ಪಜ್ವಲ್ ಮಲ್ಲಾಪುರ ಗ್ರಾಮದ ನಿವಾಸಿಯಾಗಿದ್ದು, ಇನ್ಸ್ಟಾಗ್ರಾಂನಲ್ಲಿ ಸಕ್ರಿಯನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಬಾಲಕಿಯ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಪ್ರಜ್ವಲ್ಗೆ ಸಂದೇಶ ಕಳುಹಿಸುತ್ತಿದ್ದರು.
ಈ ವಿಷಯ ತಿಳಿದ ಸಂತ್ರಸ್ತ ಅವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಇದರಿಂದ ಕುಪಿತಗೊಂಡ ಆರೋಪಿಗಳು ಗುಂಪುಗೂಡಿ ಪ್ರಜ್ವಲ್ ಜತೆ ಜಗಳವಾಡಿದ್ದಾರೆ. ಬಳಿಕ ಸುಂಕದ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಕೂಡಲೇ ಅವನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪಜ್ವಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
ಮುಂದಿನ ತನಿಖೆ ನಡೆಯುತ್ತಿದೆ.
Peepal Media Desk
Peepal Media · ರಾಜ್ಯ ವಿಭಾಗ