ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬ್ಯಾಕ್ ಲಾಗ್ ಹಾಗೂ ಇಲಾಖಾ ಮುಂಬಡ್ತಿಯಲ್ಲಿನ ಅನ್ಯಾಯ ಸರಿಪಡಿಸಲು ಕ್ರಮ. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಸೂಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಬ್ಯಾಕ್ ಲಾಗ್ ಹಾಗೂ ಇಲಾಖಾ ಮುಂಬಡ್ತಿಯಲ್ಲಿನ ಅನ್ಯಾಯ ಸರಿಪಡಿಸಲು ಕ್ರಮ. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಸೂಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು,ಜನವರಿ 28 : ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ. 10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಅನುಸಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲವಿಚಾರಣಾ ಸಮಿತಿ ಸಭೆ ನಡೆಸಲಾಗಿದೆ. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ 2020ರಲ್ಲಿ ಶೇ. 10 ರಷ್ಟಿದ್ದುದು , ಪ್ರಸ್ತುತ ಶೇ. 7ಕ್ಕೆ ಇಳಿದಿದೆ. ಶಿಕ್ಷೆಯ ಪ್ರಮಾಣವನ್ನು ಶೇ. 10 ಕ್ಕೂ ಹೆಚ್ಚಿಸುವಂತೆ ಸೂಚಿಸಲಾಗಿದ್ದು, ಈ ಬಗ್ಗೆ ಸರ್ಕಾರಿ ಪ್ರಾಸಿಕ್ಯೂಟರ್ ಗಳು ಹಾಗೂ ಪೊಲೀಸ್ ಇಲಾಖೆಯವರು ಪರಿಶೀಲನಾ ಸಭೆ ನಡೆಸಬೇಕು. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಬಗ್ಗೆ ಜಿಲ್ಲಾಧಿಕಾರಿಗಳು ಮೂರು ತಿಂಗಳಿಗೊಮ್ಮೆ ತಪ್ಪದೇ ಪ್ರಗತಿ ಪರಿಶೀಲನಾ ಸಭೆ ನಡೆಸಲು, ಈ ಬಗ್ಗೆ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಬ್ಯಾಕ್ ಲಾಗ್ ಹಾಗೂ ಮುಂಬಡ್ತಿ

ಬ್ಯಾಕ್ ಲಾಗ್ ಹಾಗೂ ಬಡ್ತಿ ವಿಚಾರದಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಸಭೆಯಲ್ಲಿ ಸಮಿತಿ ಸದಸ್ಯರು ಚರ್ಚಿಸಿದ್ದು, ಬ್ಯಾಕ್ ಲಾಗ್ ಹಾಗೂ ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪರಿಶೀಲನಾ ಸಭೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ ಎಂದರು.

ಇ.ಡಿ ನೋಟೀಸಿಗೆ ಹೈ ಕೋರ್ಟ್ ತಡೆಯಾಜ್ಞೆ:

ಇ. ಡಿ ನೋಟೀಸು ಜಾರಿ ಮಾಡಿದ್ದು, ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ತನಿಖೆ ನಡೆಯುತ್ತಿದ್ದು, ಸಿಬಿಐ ಗೆ ಪ್ರಕರಣವನ್ನು ವಹಿಸುವ ಬಗ್ಗೆ ಚರ್ಚೆ ನಡೆಯುತ್ತಿದ್ದು ವಾದ ನಡೆಯುವ ಹಂತದಲ್ಲಿದೆ. ಈ ಹಂತದಲ್ಲಿ ಆತುರ ಮಾಡುವುದು ಸರಿಯಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ ಎಂದರು.

ಮುಡಾ ಪ್ರಕರಣ ರಾಜಕೀಯ ಪ್ರೇರಿತ

ಇ.ಡಿ ನೋಟೀಸು ರಾಜಕೀಯ ಪ್ರೇರಿತವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ ಎಂದರು.

ನ್ಯಾಯ ದೊರೆಯುವ ಭರವಸೆ

ಪ್ರಕರಣವನ್ನು ಸಿಬಿಐ ಗೆ ವಹಿಸಬಹುದೆಂಬ ಆತಂಕವಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ ನನಗೇಕೆ ಆತಂಕವಾಗಬೇಕು. ನಮಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ನಮಗಿದೆ ಎಂದರು. ಮೈಕ್ರೋ ಫೈನಾನ್ಸ್ ಹಾವಳಿ ತಡೆಗಟ್ಟಲು ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ನಾವು ಬಸವಣ್ಣನವರ ಅನುಯಾಯಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆಯವರು ಕುಂಭ ಮೇಳದಲ್ಲಿ ಮಿಂದೆದ್ದರೆ ಬಡತನ ಹೋಗುವುದಿಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಗಂಗೆಯಲ್ಲಿ ಸ್ನಾನ ಮಾಡಿದರೆ ಪಾಪ ಪರಿಹಾರವಾಗುತ್ತದೆ ಎಂಬ ನಂಬಿಕೆ ಇದೆ. ನಾವು ಬಸವಣ್ಣನವರ ಅನುಯಾಯಿಗಳು, ‘ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ’ ಎಂಬ ಬಸವಣ್ಣನವರ ಮಾತಿನಲ್ಲಿ ನಮಗೆ ನಂಬಿಕೆ ಇದೆ ಎಂದರು.

ವಿಷಯಗಳು: #karnataka #peepal #peepalmedia #politics
PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು