ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರಧಾನಿ ವಿರುದ್ಧ ನಿಂದನೆಯ ಮಾತುಗಳು ಅವಹೇಳನಕಾರಿಯೇ ಹೊರತು ದೇಶದ್ರೋಹವಲ್ಲ: ಕರ್ನಾಟಕ ಹೈಕೋರ್ಟ್

P

Peepal Media Desk • ರಾಜ್ಯ

• 1 ನಿಮಿಷದ ಓದು

ಪ್ರಧಾನಿ ವಿರುದ್ಧ ನಿಂದನೆಯ ಮಾತುಗಳು ಅವಹೇಳನಕಾರಿಯೇ ಹೊರತು ದೇಶದ್ರೋಹವಲ್ಲ: ಕರ್ನಾಟಕ ಹೈಕೋರ್ಟ್
High Court Of Karnataka.Bangalore,INDIA

ಬೀದರಿನ ಶಾಲಾ ಆಡಳಿತ ಮಂಡಳಿ ವಿರುದ್ಧದ ದೇಶದ್ರೋಹ ಪ್ರಕರಣವೊಂದನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಡಲಾದ ನಿಂದನೆಯು ಅವಹೇಳನಕಾರಿ ಮತ್ತು ಬೇಜವಾಬ್ದಾರಿಯಿಂದ ಕೂಡಿದೆ. ಆದರೆ ಅದನ್ನು ದೇಶದ್ರೋಹ ಎಂದು ಕರೆಯಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ವಿವಿಧ ಧಾರ್ಮಿಕ ಗುಂಪುಗಳ ನಡುವಿನ ಸಾಮರಸ್ಯವನ್ನು ಕದಡಿದಾಗ ಹೇರಲಾಗುವ ಸೆಕ್ಷನ್ 153 (ಎ) ಈ ಪ್ರಕರಣದಲ್ಲಿ ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಬೆಂಗಳೂರು, ಶಾಲಾ ಆಡಳಿತ ಮಂಡಳಿಯೊಂದರ ವಿರುದ್ಧದ ದೇಶದ್ರೋಹದ ಪ್ರಕರಣವನ್ನು ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್, ʼಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಳಸಲಾಗಿರುವ ಶಬ್ಧಗಳು ಅವಹೇಳನಕಾರಿಯಾಗಿವೆ ಮತ್ತು ಬೇಜವಾಬ್ದಾರಿಯಿಂದ ಕೂಡಿವೆ ಆದರೆ ಅದು ದೇಶದ್ರೋಹವಲ್ಲʼ ಎಂದು ಹೇಳಿದೆ.

ಪ್ರಧಾನಿಯನ್ನು ನಿಂದಿಸುವುದು ಅವಮಾನಕರ – ಹೈಕೋರ್ಟ್


ನ್ಯಾಯಮೂರ್ತಿ ಚಂದನಗೌಡರು ತಮ್ಮ ತೀರ್ಪಿನಲ್ಲಿ ‘ಪ್ರಧಾನಿ ಅವರ ವಿರುದ್ಧ ನಿಂದನೀಯ ಮಾತುಗಳನ್ನು ಹೇಳುವುದು ಅವಹೇಳನಕಾರಿ ಮಾತ್ರವಲ್ಲ ಬೇಜವಾಬ್ದಾರಿಯೂ ಆಗಿದೆ. ಸರ್ಕಾರದ ನೀತಿಗಳ ಬಗ್ಗೆ ಸಕಾರಾತ್ಮಕ ಟೀಕೆಗಳು ಸಮರ್ಥನೀಯ. ಆದರೆ ಸಾಂವಿಧಾನಿಕ ಹುದ್ದೆಗಳಲ್ಲಿ ಕುಳಿತಿರುವ ಜನರು ಆಡಳಿತದ ನಿರ್ಧಾರಗಳನ್ನು ಟೀಕಿಸುವಂತಿಲ್ಲ. ವಿಶೇಷವಾಗಿ ಅದು ಒಂದು ಗುಂಪಿಗೆ ಇಷ್ಟವಾಗಿಲ್ಲ ಎನ್ನುವ ಕಾರಣಕ್ಕೆ.

ಶಾಲೆಯ ಆರೋಪಿಯೊಬ್ಬ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಅದರ ವೀಡಿಯೋವನ್ನು ಅಪ್‌ಲೋಡ್ ಮಾಡಿದ ನಂತರ ಶಾಲೆಯಲ್ಲಿ ನಡೆದ ನಾಟಕವು ಮುನ್ನೆಲೆಗೆ ಬಂದಿದೆ ಎನ್ನುವುದನ್ನು ಹೈಕೋರ್ಟ್ ಹೇಳಿದೆ.

ಹೈಕೋರ್ಟ್ ಹೇಳಿದ್ದೇನು?

ಬೀದರ್ ನ ಶಾಹೀನ್ ಉರ್ದು ಮಾಧ್ಯಮ ಪ್ರಾಥಮಿಕ ಶಾಲೆಯು, 4, 5 ಮತ್ತು 6ನೇ ತರಗತಿಯ ವಿದ್ಯಾರ್ಥಿಗಳು ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಜನವರಿ 21, 2020ರಂದು ಶಾಲೆಯಲ್ಲಿ ನಾಟಕವನ್ನು ಪ್ರದರ್ಶಿಸಿದ್ದರು. ಈ ಕುರಿತು ಎವಿಬಿಪಿ ಕಾರ್ಯಕರ್ತ ನೀಲೇಶ್ ರಕ್ಷಾಲಾ ನೀಡಿದ ದೂರಿನ ಮೇರೆಗೆ ನಾಲ್ವರ ವಿರುದ್ಧ ಸೆಕ್ಷನ್ 504 (ಸ್ವಯಂಪ್ರೇರಿತವಾಗಿ ಅವಮಾನ), 505(2), 124ಎ (ದೇಶದ್ರೋಹ), 153ಎ ಮತ್ತು 34 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಸರ್ಕಾರದ ವಿರುದ್ಧ ಜನರನ್ನು ಎತ್ತಿಕಟ್ಟುವ ಅಥವಾ ಸಾರ್ವಜನಿಕರನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಅರ್ಜಿದಾರರು ಈ ಕ್ರಮ ಕೈಗೊಂಡಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಅದಕ್ಕಾಗಿಯೇ ಸೆಕ್ಷನ್ 124 ಎ (ದೇಶದ್ರೋಹ) ಮತ್ತು ಸೆಕ್ಷನ್ 505 (2) ಕ್ಕೆ ಸಾಕಷ್ಟು ಷರತ್ತುಗಳ ಕೊರತೆಯಿಂದಾಗಿ, ಈ ಸೆಕ್ಷನ್‌ಗಳನ್ನು ಹೇರುವುದು ನ್ಯಾಯಸಮ್ಮತವಲ್ಲ ಎಂದು ನ್ಯಾಯಾಲಯ ಹೇಳಿದೆ. ಮಕ್ಕಳನ್ನು ಸರ್ಕಾರದ ವಿರುದ್ಧ ಟೀಕಿಸುವುದಕ್ಕೆ ಬಳಸದೆ ದೂರವಿಡುವಂತೆಯೂ ಹೈಕೋರ್ಟ್ ತನ್ನ ಆದೇಶದಲ್ಲಿ ಶಾಲೆಗೆ ಸೂಚನೆ ನೀಡಿದೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version