ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

4,824 ಕೋಟಿ ಬಂಡವಾಳ, 14,525 ಉದ್ಯೋಗ ಸೃಷ್ಟಿಗೆ ಗ್ರೀನ್‌ ಸಿಗ್ನಲ್ – ಸಚಿವ ಪಾಟೀಲ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ಮೀಡಿಯಾ, ರಾಜ್ಯ

• 1 ನಿಮಿಷದ ಓದು

4,824 ಕೋಟಿ ಬಂಡವಾಳ, 14,525 ಉದ್ಯೋಗ ಸೃಷ್ಟಿಗೆ ಗ್ರೀನ್‌ ಸಿಗ್ನಲ್ – ಸಚಿವ ಪಾಟೀಲ್

ಬೆಂಗಳೂರು : ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ 13 ಜಿಲ್ಲೆಗಳಾದ್ಯಂತ 37 ಹೊಸ ಕೈಗಾರಿಕೆಗಳು ಮತ್ತು ಹೆಚ್ಚುವರಿ ಹೂಡಿಕೆಯ 2 ಯೋಜನೆಗಳ ಒಟ್ಟು ₹4,824.31 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಶುಕ್ರವಾರ ನಡೆದ 158ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಬೃಹತ್‌ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್ (MB Patil) ಅವರು ತಿಳಿಸಿದರು.

ʼಐಟಿ ಮೂಲಸೌಲಭ್ಯ, ಸಕ್ಕರೆ ಕಾರ್ಖಾನೆ, ಟೆಕ್ನಿಕಲ್‌ ಟೆಕ್ಸ್‌ಟೈಲ್‌, ಕಂಪ್ರೆಸ್ಡ್‌ ಗ್ಯಾಸ್‌, ವೈಮಾಂತರಿಕ್ಷ, ಚಿನ್ನಾಭರಣ ತಯಾರಿಕೆ,ಎಲೆಕ್ಟ್ರಾನಿಕ್ಸ್‌, ಸಾಫ್ಟ್‌ವೇರ್‌ ಹಾಗೂ ಪಂಚತಾರಾ ಹೋಟೆಲ್‌ ನಿರ್ಮಾಣ ಯೋಜನೆಗಳಿಗೆ ನೀಡಿರುವ ಅನುಮೋದನೆಗಳಿಂದ ರಾಜ್ಯದಲ್ಲಿ ಹೊಸದಾಗಿ 14,525 ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆʼ ಎಂದರು.

ಈ ಯೋಜನೆಗಳಲ್ಲಿ ಬಾಗ್ಮನೆ ಕನ್‌ಸ್ಟ್ರಕ್ಷನ್‌ ಪ್ರೈವೇಟ್‌ ಲಿಮಿಟೆಡ್‌ನ ₹494.65 ಕೋಟಿ ಮೊತ್ತದ ಐಟಿ ಮೂಲಸೌಲಭ್ಯ ಅಭಿವೃದ್ಧಿ, ಕರ್ನಾಟಕ ಬಂಗಾರು ಷುಗರ್ಸ್‌ನ ₹443.50 ಕೋಟಿಯ ಸಕ್ಕರೆ ಕಾರ್ಖಾನೆ, ಕ್ಲೆನೆ ಪ್ಯಾಕ್ಸ್‌ನ ₹376 ಕೋಟಿಯ ಟೆಕ್ನಿಕಲ್‌ ಟೆಕ್ಸ್‌ಟೈಲ್‌ ಘಟಕ, ತ್ರಿಶೂಲ್‌ ಬಿಲ್ಡ್‌ಟೆಕ್‌ ಆ್ಯಂಡ್‌ ಇನ್‌ಫ್ರಾಸ್ಟ್ರಕ್ಚರ್‌ನ ₹ 300 ಕೋಟಿ ವೆಚ್ಚದ ಪಂಚತಾರಾ ಹೋಟೆಲ್‌, ಮುಧೋಳದಲ್ಲಿ ಟ್ರೌಲ್ಟ್‌ ಗ್ರಾಸ್‌ನ ₹ 257.77 ಕೋಟಿ ವೆಚ್ಚದ ಕಂಪ್ರೆಸ್ಡ್‌ ಗ್ಯಾಸ್‌ ಘಟಕ, ತ್ಸುಯೊ ಮ್ಯಾನುಫ್ಯಾಕ್ಚರಿನ್‌ನ ₹ 250 ಕೋಟಿ ವೆಚ್ಚದಲ್ಲಿನ ವಿದ್ಯುತ್‌ಚಾಲಿತ ವಾಹನಗಳ ಮೋಟರ್‌ ಹಾಗೂ ಕಂಟ್ರೋಲರ್‌ ತಯಾರಿಕೆ ಘಟಕಗಳು ಪ್ರಮುಖವಾಗಿವೆʼ ಎಂದು ಸಚಿವರು ಹೇಳಿದರು.

ʼ ₹50 ಕೋಟಿಗೂ ಹೆಚ್ಚು ಹೂಡಿಕೆಯ 22 ಪ್ರಮುಖ ದೊಡ್ಡ ಮತ್ತು ಮಧ್ಯಮ ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಿರುವುದರಿಂದ ರಾಜ್ಯದಲ್ಲಿ ₹ 3908.68 ಕೋಟಿ ಹೂಡಿಕೆ ಆಗಲಿದೆ. 12,475 ಜನರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ. ʼ ₹ 15 ಕೋಟಿಗಳಿಂದ ₹50 ಕೋಟಿ ಒಳಗಿನ ಹೂಡಿಕೆಯ 15 ಹೊಸ ಯೋಜನೆಗಳಿಗೆ ನೀಡಿರುವ ಅನುಮೋದನೆ ಫಲವಾಗಿ ₹350.60 ಕೋಟಿ ಹೂಡಿಕೆ ಆಗಲಿದ್ದು, 1,750 ಜನರಿಗೆ ಉದ್ಯೋಗಾವಕಾಶಗಳು ಸಿಗಲಿವೆ. ʼಹೆಚ್ಚುವರಿ ಹೂಡಿಕೆಯ 2 ಯೋಜನೆಗಳಿಗೆ ನೀಡಿರುವ ಅನುಮೋದನೆಯಿಂದ ₹565.03 ಕೋಟಿ ಹೂಡಿಕೆಯಾಗಲಿದ್ದು, 300 ಜನರಿಗೆ ಉದ್ಯೋಗಾವಕಾಶ ಸಿಗಲಿವೆʼ ಎಂದು ಸಚಿವರು ಮಾಹಿತಿ ನೀಡಿದರು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎನ್‌. ಸೆಲ್ವಕುಮಾರ್‌, ಕೈಗಾರಿಕಾ ಅಭಿವೃದ್ಧಿ ಆಯುಕ್ತರಾಗಿರುವ ಶ್ರೀಮತಿ ಗುಂಜನ್‌ ಕೃಷ್ಣ , ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಹಾಗೂ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು