ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ನಿಮ್ಮ ಸರಕಾರ ಸತ್ತಿದೆಯೋ, ಬದುಕಿದೆಯೋ? ಕಾಂಗ್ರೆಸಿಗೆ ಆರ್‌. ಅಶೋಕ ಪ್ರಶ್ನೆ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ನಿಮ್ಮ ಸರಕಾರ ಸತ್ತಿದೆಯೋ, ಬದುಕಿದೆಯೋ? ಕಾಂಗ್ರೆಸಿಗೆ ಆರ್‌. ಅಶೋಕ ಪ್ರಶ್ನೆ

ಕರ್ನಾಟಕದ ರೈತರಿಗೆ ದಿನಕ್ಕೊಂದು ಬಗೆಯಲ್ಲಿ ಕಿರುಕುಳ ನೀಡುತ್ತಿರುವ ರಾಜ್ಯ ಸರಕಾರ ಈಗ ಗೋಣಿ ಚೀಲವಿಲ್ಲ ಎನ್ನುವ ಕಾರಣ ನೀಡಿ ಕೊಬ್ಬರಿ ಮಾರಲು ಬಂದ ರೈತರನ್ನು ಬರಿಗೈಯಲ್ಲಿ ಕಳುಹಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಆರೋಪಿಸಿದ್ದಾರೆ.

ಈ ಕುರಿತು X ವೇದಿಕೆಯಲ್ಲಿ ಪೋಸ್ಟ್‌ ಮಾಡಿರು ಅಶೋಕ “ರೈತರಿಗೆ ದಿನನಿತ್ಯ ಒಂದಲ್ಲ ಒಂದು ರೀತಿ ಕಿರುಕುಳ ಕೊಡುತ್ತಲೇ ಇರಬೇಕು ಎಂದು ನಿರ್ಧರಿಸಿರುವ @INCKarnataka ಸರ್ಕಾರ, ಗೋಣಿ ಚೀಲದ ಕೊರತೆ ನೆಪ ಹೇಳಿ ಕೊಬ್ಬರಿ ಖರೀದಿ ಮಾಡದೆ ರೈತರನ್ನು ಬರಿಗೈಯಲ್ಲಿ ವಾಪಸ್ ಕಳುಹಿಸುತ್ತಿದೆ.

ಸಿಎಂ @siddaramaiah ನವರೇ, ನಿಮ್ಮ ಸರ್ಕಾರ ನಿಜವಾಗಿಯೂ ಬದುಕಿದೆಯೋ ಅಥವಾ ಸತ್ತಿದೆಯೋ ಒಮ್ಮೆ ಸ್ಪಷ್ಟವಾಗಿ ಹೇಳಿಬಿಡಿ. ಯಾವುದಾದರೂ ಒಂದು ಇಲಾಖೆ, ಒಬ್ಬ ಸಚಿವ ನೆಟ್ಟಗೆ ಕಾರ್ಯನಿರ್ವಹಣೆ ಮಾಡುತ್ತಿರುವ ಉದಾಹರಣೆ ನೀಡಿ ನೋಡೋಣ. ತಮ್ಮ ಆಡಳಿತದಲ್ಲಿ ಇಡೀ ಆಡಳಿತ ಯಂತ್ರ ಸ್ಟಬ್ಧವಾಗಿದೆ. ಸಚಿವರಿಗೆ ಕೆಲಸ ಮಾಡಲು ಆಸಕ್ತಿ ಇಲ್ಲ, ಅಧಿಕಾರಿಗಳು ನಿಯಂತ್ರಣದಲಿಲ್ಲ.

ಯಾವುದಕ್ಕೂ ಪೂರ್ವಸಿದ್ಧತೆ ಇಲ್ಲ, ಮುಂದಾಲೋಚನೆ ಇಲ್ಲ. ಯಾವುದೇ ಸಮಸ್ಯೆ ಬಂದರೂ ಅದಕ್ಕೆ ಕೇಂದ್ರ ಸರ್ಕಾರವೇ ಹೊಣೆ ಅಂತ ಕೈಚೆಲ್ಲೋದು ಇಲ್ಲವೇ ಚುನಾವಣಾ ನೀತಿ ಸಂಹಿತೆಯ ನೆಪ ಹೇಳಿ ಜಾರಿಕೊಳ್ಳೋದು. ಇದಕ್ಕಾ ಕನ್ನಡಿಗರು ನಿಮಗೆ ಮತ ನೀಡಿದ್ದು?” ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

ಗೋಣಿ ಚೀಲಗಳು ಸರಬರಾಜು ಆಗುತ್ತಿರುವುದು ಪಶ್ಚಿಮ ಬಂಗಾಳದಿಂದ. ಆದರೆ ಅಲ್ಲಿ ಪ್ರಸ್ತು ಚುನಾವಣೆ ನಡೆಯುತ್ತಿದೆ. ಹೀಗಾಗಿ ಸರಬರಾಜಿನಲ್ಲಿ ಅಡಚಣೆ ಉಂಟಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆಂದು ರೈತರು ದೂರುತ್ತಿರುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿತ್ತು.

ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು