ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅನಧಿಕೃತ ಆಸ್ತಿಗಳಿಗೆ 7 ದಿನಗಳಲ್ಲಿ ಇ-ಖಾತಾ ನೀಡಿ: ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಅನಧಿಕೃತ ಆಸ್ತಿಗಳಿಗೆ 7 ದಿನಗಳಲ್ಲಿ ಇ-ಖಾತಾ ನೀಡಿ: ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ

ಜಿಲ್ಲೆಯ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಎಲ್ಲಾ ಅನಧಿಕೃತ ಆಸ್ತಿಗಳಿಗೆ ಇ-ಖಾತಾ ನೀಡುವ ಕಾರ್ಯವನ್ನು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಭಿಯಾನದ ಮಾದರಿಯಲ್ಲಿ ಕೈಗೊಂಡು 3 ತಿಂಗಳ ಒಳಗೆ ಈ ಕಾರ್ಯವನ್ನು ಮುಕ್ತಾಯಗೊಳಿಸುವಂತೆ ಹಾಗೂ ಅರ್ಜಿ ಸಲ್ಲಿಸಿದ 7 ದಿನಗಳ ಒಳಗೆ ಜಾಗದ ಮಾಲೀಕರಿಗೆ ಇ-ಖಾತಾ ನೀಡುವಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು.

ಅವರು ಮಂಗಳವಾರ, ರಾಜ್ಯದಲ್ಲಿ ಅನಧಿಕೃತ ಆಸ್ತಿಗಳಿಗೆ ಇ-ಖಾತಾ ನೀಡುವ ಕುರಿತು ನಡೆದ ಮುಖ್ಯಮಂತ್ರಿಗಳ ವೀಡಿಯೋ ಕಾನ್ಪರೆನ್ಸ್ ಸಭೆಯ ನಂತರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದಲ್ಲಿರುವ ಎಲ್ಲಾ ಅನಧಿಕೃತ ಆಸ್ತಿಗಳಿಗೆ ಸಹ ಇ-ಖಾತಾ ನೀಡಲು ಸರ್ಕಾರವು ಕಾಯ್ದೆ ಮತ್ತು ನಿಯಮಾವಳಿಗಳಿಗೆ ತಿದ್ದುಪಡಿ ತಂದಿದ್ದು, ಅನಧಿಕೃತ ಆಸ್ತಿಗಳ ಸ್ವತ್ತಿನ ಮಾಲೀಕರಿಂದ ಅಗತ್ಯ ದಾಖಲೆಗಳನ್ನು ಸ್ವೀಕರಿಸಿ ಸಕಾಲ ತಂತ್ರಾAಶದ ಮೂಲಕ 7 ದಿನದ ಒಳಗಾಗಿ ಇ-ಖಾತಾ ನೀಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಈ ಕಾರ್ಯಕ್ಕಾಗಿ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೆಲ್ಪ್ ಡೆಸ್ಕ್ ತೆರೆದು ಸಾರ್ವಜನಿರಿಗೆ ಅಗತ್ಯ ಮಾಹಿತಿ ನೀಡುವಂತೆ ಮತ್ತು ವ್ಯಾಪಕ ಅರಿವು ಹಾಗೂ ಜಾಗೃತಿ ಮೂಡಿಸುವಂತೆ ತಿಳಿಸಿದರು.
ಜಿಲ್ಲೆಯ ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಅನಧಿಕೃತ ಆಸ್ತಿಗಳನ್ನು ಗುರುತಿಸುವ ಕಾರ್ಯವನ್ನು 2 ದಿನಗಳ ಒಳಗೆ ಮಾಡಬೇಕು. ಇದಕ್ಕಾಗಿ ಹೆಸ್ಕಾಂ ಮತ್ತು ಕಂದಾಯ ಇಲಾಖೆಯಲ್ಲಿರುವ ದತ್ತಾಂಶಗಳ ಮಾಹಿತಿಯನ್ನು ಪಡೆದು ಪರಿಶೀಲಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಇ-ಖಾತಾ ನೀಡುವ ಕಾರ್ಯದಲ್ಲಿ ಯಾವುದೇ ಹಂತದಲ್ಲೂ ಮಧ್ಯವರ್ತಿಗಳ ಹಾವಳಿ ಕಂಡು ಬರದಂತೆ ನೋಡಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇ –ಖಾತಾ ನೀಡುವ ಕಾರ್ಯ ಸಂಪೂರ್ಣವಾಗಿ ಮುಗಿದ ನಂತರ ಎಲ್ಲಾ ನಗರಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅನಧಿಕೃತ ಆಸ್ತಿಗಳು ಇಲ್ಲವೆಂದು ದೃಢೀಕರಣ ನೀಡಬೇಕು. ಇದರ ನಂತರವೂ ಅನಧಿಕೃತ ಬಡಾವಣೆಗಳು ಕಂಡು ಬಂದಲ್ಲಿ ಸಂಬAಧಪಟ್ಟ ಎಲ್ಲಾ ಅಧಿಕಾರಿಗಳು ಜವಾಬ್ದಾರರಾಗಲಿದ್ದು, ಅಂತಹ ಅಧಿಕಾರಿಗಳ ವಿರುದ್ದ ನಾಗರೀಕಾ ಸೇವಾ ನಿಯಮಗಳನ್ವಯ ಶಿಸ್ತು ಕ್ರಮ ಮಾತ್ರವಲ್ಲದೇ ದಂಡ ಮತ್ತು ಸೆರೆವಾಸದ ಶಿಕ್ಷೆಯನ್ನೂ ಕೂಡಾ ವಿಧಿಸಬಹುದಾಗಿದ್ದು, ಎಲ್ಲಾ ಅಧಿಕಾರಿಗಳು ಈ ಕಾರ್ಯವನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹಾಗೂ ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು