ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ʼತೆರಿಗೆ ಭಯೋತ್ಪಾದನೆʼ ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ – ಮುಖ್ಯಮಂತ್ರಿ ಸಿದ್ಧರಾಮಯ್ಯ

PPeepal Media Desk

Peepal Media Desk ರಾಜ್ಯ

• 2 ನಿಮಿಷದ ಓದು

ʼತೆರಿಗೆ ಭಯೋತ್ಪಾದನೆʼ ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ – ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ. ಈ ಹುನ್ನಾರದ ಭಾಗವಾಗಿಯೇ ನಮ್ಮ ಪಕ್ಷದ ವಿರುದ್ದ ‘’ತೆರಿಗೆ ಭಯೋತ್ಪಾದನೆ’’ಯಲ್ಲಿ ತೊಡಗಿದೆ. ಈ ರೀತಿ ನಮ್ಮ ಪಕ್ಷವನ್ನು ದುರ್ಬಲಗೊಳಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಆ ಪಕ್ಷದ ಭ್ರಮೆ ಎಂದು ಮುಖ್ಯ ಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಮುಂದುವರೆದು “ಕಾಂಗ್ರೆಸ್ ಪಕ್ಷದ ಮೇಲೆ ವರಮಾನ ತೆರಿಗೆ ಪಾವತಿ ಮಾಡದೆ ಇರುವಆರೋಪ ಹೊರಿಸಿ ರೂ.1823 ಕೋಟಿ ಪಾವತಿಸುವಂತೆ ಐಟಿ ಇಲಾಖೆ ನೋಟೀಸ್ ನೀಡಿದೆ. 2017-18ರಲ್ಲಿ ಬಿಜೆಪಿ ಹೆಸರೇ ಇಲ್ಲದ 92 ದಾನಿಗಳಿಂದ ರೂ.4.5 ಲಕ್ಷ ಮತ್ತು ವಿಳಾಸವೇ ಇಲ್ಲದ 1297 ದಾನಿಗಳಿಂದ ರೂ.42 ಕೋಟಿ ದೇಣಿಗೆ ಪಡೆದಿರುವುದನ್ನು ನಮ್ಮ ಪಕ್ಷದ ನಾಯಕರು ಬಯಲಿಗೆಳೆದಿದ್ದಾರೆ. ನಮ್ಮ ಪಕ್ಷಕ್ಕೆ ಅನ್ವಯಿಸಿದ ಮಾನದಂಡವನ್ನೇ ಅನ್ವಯಿಸಿದರೆ ಬಿಜೆಪಿ ಕಳೆದ ಏಳು ವರ್ಷಗಳಲ್ಲಿ ನಡೆಸಿರುವ ತೆರಿಗೆ ಉಲ್ಲಂಘನೆಗಾಗಿ ರೂ.4263 ಕೋಟಿ ಪಾವತಿಸಬೇಕಾಗಿದೆ.” ಎಂದು ಹೇಳಿದ್ದಾರೆ.

ಮುಂದುವರೆದು “ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅತಿಕ್ರಿಯಾಶಾಲಿಯಾಗಿರುವ ಐಟಿ ಇಲಾಖೆ ಟಿಎಂಸಿ, ಸಿಪಿಐ ಸೇರಿದಂತೆ ಬೇರೆ ವಿರೋಧಪಕ್ಷಗಳ ಮೇಲೆಯೂ ತೆರಿಗೆ ಭಯೋತ್ಪಾದನೆಯ ಅಸ್ತ್ರ ಪ್ರಯೋಗ ಮಾಡಿದೆ. ವಿರೋಧ ಪಕ್ಷಗಳ ಮೇಲೆ ಮುಗಿ ಬಿದ್ದಿರುವ ಐಟಿ ಇಲಾಖೆ ಬಿಜೆಪಿಯ ತೆರಿಗೆ ಉಲ್ಲಂಘನೆ ಬಗ್ಗೆ ಮಾತ್ರ ಕುರುಡಾಗಿದೆ. ಐಟಿ ಇಲಾಖೆಯ ಕಣ್ಣಿಗೆ ಬಟ್ಟೆ ಕಟ್ಟಿರುವವರು ಯಾರು ಎನ್ನುವುದನ್ನು ತಿಳಿಯದಷ್ಟು ದೇಶದ ಜನತೆ ದಡ್ಡರಲ್ಲ.

ಕಾಂಗ್ರೆಸ್ ಪಕ್ಷದ ಕೆಲವು ನಾಯಕರ ಡೈರಿಗಳೆಂದು ಹೇಳಲಾದ ದಾಖಲೆಪತ್ರಗಳನ್ನು ಮುಂದಿಟ್ಟುಕೊಂಡು ತೆರಿಗೆ ಉಲ್ಲಂಘನೆಯ ಆರೋಪ ಮಾಡುತ್ತಿರುವ ಐಟಿ ಇಲಾಖೆಗೆ, ಕರ್ನಾಟಕದಲ್ಲಿಯೇ ಬಯಲಾಗಿದ್ದ ಯಡಿಯೂರಪ್ಪ ಡೈರಿಗಳಾಗಲಿ, ನರೇಂದ್ರಮೋದಿಯವರೂ ಫಲಾನುಭವಿ ಎಂದು ಆರೋಪಿಸಲಾಗಿರುವ ‘’ಬಿರ್ಲಾ-ಸಹಾರಾ’’ ಡೈರಿಯಾಗಲಿ ಯಾಕೆ ಕಣ್ಣಿಗೆ ಬಿದ್ದಿಲ್ಲ?” ಎಂದಿದ್ದಾರೆ.

ತನಿಖಾ ಸಂಸ್ಥೆಗಳ ದುರ್ಬಳಕೆ ಕುರಿತು ಮಾತನಾಡಿರುವ ಅವರು, “ಐಟಿ, ಇಡಿ ಮತ್ತು ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣಾ ಬಾಂಡ್ ಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳನ್ನು ಆಡಳಿತಾರೂಡ ಬಿಜೆಪಿ ಸುಲಿಗೆ ಮಾಡಿರುವುದು ಜಗಜ್ಜಾಹೀರಾಗಿದೆ. ಬಯಲಾಗಿರುವ ಈ ಹಗರಣದಿಂದ ಜನರ ಗಮನ ಬೇರೆ ಕಡೆ ಸೆಳೆಯುವ ಜೊತೆಯಲ್ಲಿ ವಿರೋಧ ಪಕ್ಷಗಳನ್ನೂ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ದುರುದ್ದೇಶದಿಂದಲೇ ಬಿಜೆಪಿ ಸರ್ಕಾರ ವರಮಾನ ತೆರಿಗೆ ವಂಚನೆಯ ಸುಳ್ಳು ಆರೋಪಗಳನ್ನು ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

“ಕಳೆದ ಐದು ವರ್ಷಗಳ ಅವಧಿಯಲ್ಲಿ ವಿಜಯ್ ಮಲ್ಯ, ನೀರವ್ ಮೋದಿ ಮೊದಲಾದ ಬ್ಯಾಂಕ್ ವಂಚಕರ 10.09 ಲಕ್ಷ ಕೋಟಿ ರೂಪಾಯಿಯಷ್ಟು ಬ್ಯಾಂಕ್ ಸಾಲವನ್ನು‌ ಮನ್ನಾ ಮಾಡಿರುವ ಬಿಜೆಪಿ ಸರ್ಕಾರ ಅವರಿಂದ ಪಡೆದಿರುವ ಕಮಿಷನ್ ಹಣ ಎಷ್ಟು ಎನ್ನುವುದನ್ನು ದೇಶದ ಜನತೆಗೆ ತಿಳಿಸಬೇಕಾಗುತ್ತದೆ.

ಕಾಂಗ್ರೆಸ್ ಪಕ್ಷದ ನಿಜವಾದ ಶಕ್ತಿ ಹಣದ ಬಲ ಅಲ್ಲ, ಜನ ಬಲ. ಬಿಜೆಪಿಯಲ್ಲಿ ಹಣ ಬಲ ಇದ್ದರೆ ನಮ್ಮಲ್ಲಿ ಜನಬಲ ಇದೆ. ತೆರಿಗೆ ವಂಚಕರು, ಬ್ಯಾಂಕ್ ಗಳನ್ನು ಮುಳುಗಿಸಿದವರು, ಗಣಿ ಲೂಟಿಕೋರರು, ಕಾಳಸಂತೆಕೋರರು, ಕಳ್ಳ-ಖದೀಮರೇ ಬಿಜೆಪಿಯ ಬಲ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ

“ಬಿಜೆಪಿ ಅಂದ್ರೆ ಭ್ರಷ್ಟರ ಹಣವನ್ನು ನುಂಗಿ ಅವರಿಗೆ ಪ್ರಾಮಾಣಿಕತೆಯ ಸರ್ಟಿಫಿಕೇಟ್ ನೀಡುವ ವಾಷಿಂಗ್‌ ಮೆಶಿನ್‌ ಆಗಿದೆ. ಭ್ರಷ್ಟರು ತಾವು ಮಾಡಿದ ಮಹಾಪಾಪಗಳ ಮೇಲಿನ ತನಿಖೆಯಿಂದ ತಪ್ಪಿಸಿಕೊಳ್ಳಬೇಕಾದರೆ, ಶಿಕ್ಷೆಯಿಂದ ಪಾರಾಗಬೇಕಾದರೆ ಬಿಜೆಪಿ ಸೇರಿಕೊಂಡರೆ ಸಾಕು, ಪಾಪಗಳೆಲ್ಲವೂ ತನ್ನಿಂತಾನೆ ಶುದ್ಧವಾಗುತ್ತದೆ. ಅಲ್ಲಿದ್ದುಕೊಂಡು ಎಷ್ಟು ಬೇಕಾದರೂ ಭ್ರಷ್ಟಾಚಾರ ಮಾಡಬಹುದು, ಜನರ ಹಣ ಲೂಟಿ ಮಾಡಬಹುದು. ಅವರ ಮೇಲೆ ಯಾವ ಕೇಸೂ ದಾಖಲಾಗುವುದಿಲ್ಲ. ಯಾವ ತನಿಖಾ ಸಂಸ್ಥೆಯೂ ಹುಡುಕೊಂಡು ಬರುವುದಿಲ್ಲ.

ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಮತ್ತು ಅಧಿಕಾರವನ್ನು ಉಳಿಸಿಕೊಂಡಿದ್ದೇ ಇಂತಹ ಕಳ್ಳ-ಖದೀಮರ ಲೂಟಿಯ ಹಣದಿಂದ. ಇದಕ್ಕೆ ಉತ್ತಮ ಉದಾಹರಣೆ ಕರ್ನಾಟಕದಲ್ಲಿ ನಡೆಸುತ್ತಾ ಬಂದ ಆಪರೇಷನ್ ಕಮಲ.

400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಎದೆ ತಟ್ಟಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರಮೋದಿಯವರು ವಿರೋಧಪಕ್ಷಗಳನ್ನು ಹಣಿಯಲು ಈ ರೀತಿಯ ಅಕ್ರಮ ಕೃತ್ಯಗಳಿಗೆ ಇಳಿದಿರುವುದನ್ನು ನೋಡಿದರೆ ಅವರಿಗೆ ಗೋಡೆ ಮೇಲಿನ ಬರಹ ಸ್ಪಷ್ಟವಾಗಿ ಕಾಣತೊಡಗಿದೆ ಎಂದರ್ಥ. ಅರಸನ ಮೈಮೇಲಿನ ಬಟ್ಟೆ ಒಂದೊಂದಾಗಿ ಕಳಚಿ ಬೀಳುತ್ತಿದೆ. ದೇಶದ ಜಾಗೃತ ಮತದಾರರ ಮುಂದೆ ಬಿಜೆಪಿ ಮತ್ತು ಅದರ ತಥಾಕಥಿತ ನಾಯಕರೆಲ್ಲರೂ ಬತ್ತಲೆಯಾಗುತ್ತಿದ್ದಾರೆ” ಎಂದು ಸಿದ್ಧರಾಮಯ್ಯನವರು ವಿರೋಧ ಪಕ್ಷದತ್ತ ಚಾಟಿ ಬೀಸಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು