ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಸಜಿಪ ತಲ್ವಾರ್ ದಾಳಿಯ ದೂರುದಾರರನ್ನೇ ಸುಳ್ಳು ಕೇಸು ಹಾಕಿ ಬಂಧಿಸಿರುವುದು ಖಂಡನೀಯ: ಬಂಟ್ವಾಳ ಮುಸ್ಲಿಂ ಸಮಾಜ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಸಜಿಪ ತಲ್ವಾರ್ ದಾಳಿಯ ದೂರುದಾರರನ್ನೇ ಸುಳ್ಳು ಕೇಸು ಹಾಕಿ ಬಂಧಿಸಿರುವುದು ಖಂಡನೀಯ: ಬಂಟ್ವಾಳ ಮುಸ್ಲಿಂ ಸಮಾಜ

ರೌಡಿ ಶೀಟರ್ ಸುಹಾಸ್ ಶೆಟ್ಟಿಯ ಕೊಲೆಯ ನಂತರ ಜಿಲ್ಲೆಯ ವಿವಿಧ ಕಡೆಗಳಲ್ಲಿ ಸಂಘಪರಿವಾರದ ಸದಸ್ಯರು ಮುಸ್ಲಿಮರನ್ನು ಗುರಿಯಾಗಿಸಿ ಕೊಲೆ ಯತ್ನ ನಡೆಸಿದ್ಧರು. ಇದೇ ಸಂಧರ್ಭದಲ್ಲಿ ಬಂಟ್ವಾಳ ಸಜಿಪದ ಟೆಂಪೋ ಚಾಲಕ ಉಮ್ಮರ್ ಫಾರೂಕ್ ರವರ ಮೇಲೂ ತಲ್ವಾರು ದಾಳಿಯ ಯತ್ನ ನಡೆದಿತ್ತು. ಈ ಘಟನೆಯ ನಂತರ ಉಮ್ಮರ್ ಫಾರೂಕ್ ಬಂಟ್ವಾಳ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ಧರು. ಈಗ ದೂರುದಾರನನ್ನೇ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಈ ಬಗ್ಗೆ ಬಂಟ್ವಾಳದ ಮುಸ್ಲಿಂ ಸಮುದಾಯದ ಖಂಡನೆ ವ್ಯಕ್ತಪಡಿಸಿದೆ.

ಕೇಸಿನ ಸಂಬಂಧ ಪದೇ ಪದೇ ಪೋಲಿಸ್ ಠಾಣೆಗೆ ಬರುವಂತೆ ಪೋಲಿಸರಿಂದ ಕರೆ ಬರುತ್ತಿದ್ದು ಫಾರೂಕ್ ರವರು ಪೋಲಿಸರ ಎಲ್ಲಾ ತನಿಖೆಗೆ ಪೂರಕವಾಗಿಯೇ ಸ್ಪಂಧಿಸಿದ್ಧರು. ಆರೋಪಿಗಳನ್ನು ಪತ್ತೆ  ಹಚ್ಚಲು ಪೋಲಿಸಲು ವಿಫಲರಾದಾಗ ಬಿ ರಿಪೋರ್ಟ್ ಹಾಕಿ ಈ ಕೇಸನ್ನು ಇಲ್ಲಿಗೆ ಮುಗಿಸಿದರೆ ದೂರುದಾರರಾದ ನಿಮಗೂ, ಪೋಲಿಸರಿಗೂ ನೆಮ್ಮದಿ ಸಿಗುತ್ತದೆ ಎಂದು   ಫಾರೂಕ್ ರವರನ್ನು ಪೋಲಿಸರು ಕೇಸು ಹಿಂಪಡೆಯುವಂತೆ ಮನವೊಲಿಸಿದ್ಧರು. ಈ ದೂರಿನಿಂದ ಮಾನಸಿಕವಾಗಿ ಮತ್ತು ಆರ್ಥಿಕವಾಗಿ ಕುಗ್ಗಿ ಹೋಗಿದ್ದ ಫಾರೂಕ್ ರವರು ಪೋಲಿಸರು ಹೇಳಿಕೊಟ್ಟಂತೆ ನ್ಯಾಯಾಲಯದ ಮುಂದೆ  ಹೇಳಿಕೆ ನೀಡಿದ್ದರು.  

ಇವೆಲ್ಲವೂ ಮುಗಿದ ಬಳಿಕ  ಉಮ್ಮರ್ ಫಾರೂಕ್ ರವರಿಗೆ ಕರೆ ಮಾಡಿದ ಪೋಲಿಸರು ಸ್ವಲ್ಪ ಮಾತನಾಡಲಿದೆ ಎಂದು ಠಾಣೆಗೆ ಕರೆಸಿ ಸುಳ್ಳು ಕೇಸು ಹಾಕಿ ಬಂಧಿಸಿದ್ಧಾರೆ.

ಪೋಲಿಸರೊಂದಿಗೆ ಸಕಾರಾತ್ಮಕವಾಗಿ ಸ್ಪಂಧಿಸಿದ ದೂರುದಾರರ ವಿರುದ್ದವೇ ಸುಳ್ಳು ಕೇಸು ದಾಖಲಿಸಿ ಬಂಧಿಸಿರುವ  ಬಂಟ್ವಾಳ ಪೋಲಿಸರ ಈ ಅಮಾನವೀಯ ನಡೆಯನ್ನು ಮುಸ್ಲಿಂ ಸಮಾಜ ತೀವ್ರವಾಗಿ ಖಂಡಿಸುತ್ತದೆ. ಇಂತಹ ಘಟನೆಗಳಿಂದ ಜನಸಾಮಾನ್ಯರಿಗೆ ಪೋಲಿಸ್ ಇಲಾಖೆಯ ಮೇಲಿನ ನಂಬಿಕೆ ಕಡಿಮೆಯಾಗಿ ಮುಂದೆ ಅಹಿತಕರ ಘಟನೆ ನಡೆದಾಗ ದೂರು ನೀಡಲು ಯಾರೂ ಮುಂದೆ ಬರದಂತಹ ಪರಿಸ್ಥಿತಿ ಉದ್ಭವಿಸಿದೆ.

ಆದ್ದರಿಂದ ಉಮ್ಮರ್ ಫಾರೂಕ್ ರವರ ವಿರುದ್ಧ ಸುಳ್ಳು ಕೇಸು ದಾಖಲಿಸಿರುವ ಪೋಲಿಸರ ಮೇಲೆ ಕ್ರಮ ಕೈಗೊಳ್ಳಬೇಕು. ಅಮಾಯಕರಾದ ಉಮ್ಮರ್ ಫಾರೂಕ್ ರವರನ್ನು ಕೂಡಲೇ  ಬಿಡುಗಡೆಗೊಳಿಸಬೇಕು ಮತ್ತು ತಲ್ವಾರು ದಾಳಿಯ ಹಿಂದಿರುವ ನೈಜ ಆರೋಪಿಗಳನ್ನು ಬಂಧಿಸಬೇಕೆಂದು ಮುಸ್ಲಿಂ ಸಮಾಜ ಬಂಟ್ವಾಳ ಆಗ್ರಹಿಸಿದೆ‌.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು