ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media Desk

Peepal Media Desk ರಾಜ್ಯ

• 2 ನಿಮಿಷದ ಓದು

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜೂನ್ 20: ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ ಎಂದು ಮುಖ್ಯಮಂತ್ರಿ ಸಿದ್ದಾಮಯ್ಯ ಕರೆ ನೀಡಿದರು.

ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರದ ಬಳಿ ನಾಡದೇವಿ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಿದ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು.

ಮಾತೃಭಾಷೆಯಲ್ಲಿ ಮಾತನಾಡುವುದು ಹೆಮ್ಮೆಯ ಸಂಗತಿಯಾಗಬೇಕು
ಪ್ರತಿಯೊಬ್ಬರೂ ಕೂಡ ಕರ್ನಾಟಕದಲ್ಲಿ ಬಾಳಿ ಬದುಕುವವರೊಂದಿಗೆ ಕನ್ನಡದಲ್ಲಿಯೇ ಮಾತನಾಡುತ್ತೇನೆ. ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡುವುದಿಲ್ಲ ಎಂದು ತೀರ್ಮಾನ ಮಾಡಬೇಕು. ಕನ್ನಡಿಗರು ಉದಾರಿಗಳು. ಹಾಗಾಗಿಯೇ ಬೇರೆ ಭಾಷೆ ಮಾತನಾಡುವವರೂ ಕೂಡ ಕನ್ನಡ ಕಲಿಯದೆ ಬದುಕುವ ವಾತಾವರಣ ಕರ್ಣಾಟಕದಲ್ಲಿದೆ. ತಮಿಳುನಾಡು , ಆಂಧ್ರ, ಕೇರಳಕ್ಕೆ ಹೋದರೆ ಅವರ ಮಾತೃಭಾಷೆಯಲ್ಲಿಯೇ ಮಾತನಾಡುತ್ತಾರೆ. ನಾವೂ ಕೂಡ ನಮ್ಮ ಮಾತೃಭಾಷೆಯಲ್ಲಿಯೇ ವ್ಯವಹರಿಸಬೇಕು. ಅದು ನಮಗೆ ಹೆಮ್ಮೆಯ ವಿಷಯವಾಗಬೇಕು. ಅದರಲ್ಲಿ ಕೀಳರಿಮೆ ಅಗತ್ಯವಿಲ್ಲ ಎಂದರು.

ಕರ್ನಾಟಕದಲ್ಲಿ ವಾಸ ಮಾಡುವವರು ಕನ್ನಡ ಕಲಿಯಬೇಕು
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ನಮ್ಮೆಲ್ಲರ ಕರ್ತವ್ಯ.ಅದಕ್ಕಾಗಿ ಇಲ್ಲಿ ವಾಸ ಮಾಡುವವರೆಲ್ಲಾರೂ ಕನ್ನಡವನ್ನು ಕಲಿಯಲೇಬೇಕು. ಹಾಗೆಂದು ನಾವು ಸುಮ್ಮನಿರುವಂತಿಲ್ಲ. ಕನ್ನಡಿಗರು ದುರಭಿಮಾನಿಗಳಲ್ಲ. ಆದರೆ ಕನ್ನಡದ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಬೇರೆ ರಾಜ್ಯಗಳಲ್ಲಿ ದುರಭಿಮಾನಿಗಳಂತೆ ನಾವು ಆಗಬೇಕಿಲ್ಲ. ಆದರೆ ನಮ್ಮ ಭಾಷೆ, ನೆಲ, ನಾಡಿನ ಬಗೆ ಗೌರವ, ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದರು.

ನವೆಂಬರ್ ಒಂದರೊಳಗೆ ಕಾಮಗಾರಿ ಪೂರ್ಣಗೊಳಬೇಕು
ಭುವನೇಶ್ವರಿ ತಾಯಿ ಎಲ್ಲರಿಗೂ ಈ ನಿಟ್ಟಿನಲ್ಲಿ ಎಲ್ಲರಿಗೂ ಸ್ಪೂರ್ತಿ ಕೊಡಲಿ ಎಂದು ಆಶಿಸುತ್ತೇನೆ ಎಂದರು. ನವೆಂಬರ್ 01, 2024 ರೊಳಗೆ ಪೂರ್ಣಗೊಳ್ಳಬೇಕು. ಈಗಾಗಲೇ ಕೆಲಸ ಪ್ರಾರಂಭವಾಗಿದೆ. ಹಣದ ಕೊರತೆಯೂ ಇಲ್ಲ.ಇದೊಂದು ಉತ್ತಮವಾದ ಕೆಲಸ. ವಿಧಾನ ಸೌಧದ ಆವರಣದಲ್ಲಿ ಸುಮಾರು 25 ಅಡಿ ಎತ್ತರ ಇರುವ ಕಂಚಿನ ಪ್ರತಿಮೆ ನಿರ್ಮಾಣವಾಗಲಿದೆ. ಜನರಿಗೆ ಆರ್ಕರ್ಷಣೆಯಾಗುವ ರೀತಿಯಲ್ಲಿ ಇರಬೇಕೆಂದು ಸೂಚಿಸಲಾಗಿದೆ.ಅನೇಕ ರಾಜಕಾರಣಿಗಳ ಪ್ರತಿಮೆಗಳನ್ನು ಸ್ಥಾಪಿಸಿದ್ದೇವೆ. ಪ್ರತಿಮೆ ವಿಧಾನಸೌಧದ ಆಕರ್ಷಣೆಯನ್ನು ಇಮ್ಮಡಿಗೊಳಿಸುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದರು.
2023, ನವೆಂಬರ್ 01 ರಂದು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳ ತುಂಬಿವೆ. ಈ ಸಂದರ್ಭದಲ್ಲಿ ಇಡಿ ವರ್ಷ ಕರ್ನಾಟಕ ಸಂಭ್ರಮ ಎಂಬ ಹೆಸರಿನಡಿ ಹೆಸರಾಯಿತು ‘ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಘೋಷವಾಕ್ಯ ವನ್ನು ಇಟ್ಟು ಇಡೀ ವರ್ಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ನವೆಂಬರ್ 01 2023 ರಂದು ಹಂಪಿಯಿಂದ ಕಾರ್ಯಕ್ರಮ ಪ್ರಾರಂಭವಾಗಿತ್ತು. ಗದಗಿನಲ್ಲಿಯೂ ದೊಡ್ಡ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಾಮಕರಣವಾದ ನಂತರ ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ಅವರು ಅಲ್ಲಿಗೆ ಭೇಟಿ ನೀಡಿದ್ದರು. ಅವರ ಕಾಲದಲ್ಲಿಯೇ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಲಾಗಿದೆ. ಅಲ್ಲಿಯವರೆಗೆ ಮೈಸೂರು ರಾಜ್ಯ ಎಂದಿತ್ತು. ತಾಯಿ ಭುವನೇಶ್ವರಿಯ ಪೂಜೆ ಯನ್ನು ಬಹಳ ವರ್ಷಗಳಿಂದ ರಾಜಮಹಾರಾಜರು ಮಾಡಿಕೊಂಡು ಬರುತ್ತಿದ್ದಾರೆ. ಕರ್ನಾಟಕದಲ್ಲಿಯೂ ತಾಯಿ ಭುವನೇಶ್ವರಿಯ ಪೂಜೆ ಮಾಡುತ್ತೇವೆ. ಏಕೀಕರಣದ ನಂತರ ಅದಕ್ಕೂ ಮುನ್ನವೇ ಪೂಜೆ ಮಾಡಿ ಗೌರವಿಸಿ, ಸ್ಮರಿಸುವ ಕೆಲಸ ಮಾಡಿಕೊಂಡು ಬರುತ್ತಿದ್ದೇವೆ ಎಂದರು.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಶಾಸಕರು ಮೊದಲಾದವರು ಉಪಸ್ಥಿತರಿದ್ದರು

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು