ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಲವು ದಶಕಗಳಿಂದ ಪಾರಂಪರಿಕವಾಗಿ ಸಾಗುವಳಿ ಮಾಡಿಕೊಂಡು ಜೀವನ ನಿರ್ವಹಿಸುತ್ತಿರುವ ಕೃಷಿ ಕಾರ್ಮಿಕರನ್ನು ಒಕ್ಕಲೆಬ್ಬಿಸುವುದು ಸರಿಯಲ್ಲ- ಮಧು ಎಸ್. ಬಂಗಾರಪ್ಪ

P

Peepal Media • ರಾಜ್ಯ

• 1 ನಿಮಿಷದ ಓದು

ಹಲವು ದಶಕಗಳಿಂದ ಪಾರಂಪರಿಕವಾಗಿ ಸಾಗುವಳಿ ಮಾಡಿಕೊಂಡು ಜೀವನ ನಿರ್ವಹಿಸುತ್ತಿರುವ ಕೃಷಿ ಕಾರ್ಮಿಕರನ್ನು ಒಕ್ಕಲೆಬ್ಬಿಸುವುದು ಸರಿಯಲ್ಲ- ಮಧು ಎಸ್. ಬಂಗಾರಪ್ಪ

ಶಿವಮೊಗ್ಗ, ಸೆಪ್ಟಂಬರ್ 02: ಕಾನು ಸೊಪ್ಪಿನ ಬೆಟ್ಟ ಹುಲ್ಲು ಚಾಡಿ ಪ್ರದೇಶಗಳಲ್ಲಿ ಹಲವು ದಶಕಗಳಿಂದ ಪಾರಂಪರಿಕವಾಗಿ ಸಾಗುವಳಿ ಮಾಡಿಕೊಂಡು ಜೀವನ ನಿರ್ವಹಿಸುತ್ತಿರುವ ಕೃಷಿ ಕಾರ್ಮಿಕರನ್ನು ಒಕ್ಕಲೆಬ್ಬಿಸುವುದು ಸರಿಯಲ್ಲ. ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಕಾರ್ಯ ನಿರ್ವಹಿಸುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಶಾಸಕರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಸೊರಬ ಪಟ್ಟಣದ ತಾಲೂಕು ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಬಗರ್ ಹುಕುಂ ಸಮಿತಿಯ ಮೊದಲ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.

ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆಯು ಬಹು ದಿನಗಳಿಂದ ಇತ್ತು. ಈ ಸಮಸ್ಯೆಯ ಕುರಿತು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಹಲವು ದಶಕಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ರೈತರನ್ನು ಒಮ್ಮೆಲೇ ಒಕ್ಕಲೆಬ್ಬಿಸುವುದರಿಂದ ಅನೇಕ ಕುಟುಂಬಗಳ ಬದುಕು ಶೋಚನೀಯವಾಗಲಿದೆ ಆದ್ದರಿಂದ ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಹಾಗೂ ಕಾನೂನಿನ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು.

ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವ ವಿಷಯದಲ್ಲಿ ಕ್ರಮ ಕೈಗೊಳ್ಳುವ ಅಧಿಕಾರಿಗಳ ದುರ್ವರ್ತನೆಯನ್ನು ಸಹಿಸಿಕೊಳ್ಳಲಾಗುವುದಿಲ್ಲ. ಅಂತಹವರ ವಿರುದ್ಧ ಕಠಿಣ ಕ್ರಮ ಅನಿವಾರ್ಯವಾಗಲಿದೆ ಎಂದವರು ಎಚ್ಚರಿಸಿದರು.

ಅರಣ್ಯ ಮತ್ತು ಕಂದಾಯ ಭೂಮಿಗೆ ಸಂಬಂಧಿಸಿದಂತೆ ಹಲವು ದಶಕಗಳಿಂದ ಅನೇಕ ಸಮಸ್ಯೆಗಳು ಇತ್ಯರ್ಥಗೊಳ್ಳದೆ ಹಾಗೆಯೇ ಬಾಕಿ ಉಳಿದಿದೆ. ಅವುಗಳನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಇತ್ಯರ್ಥಪಡಿಸಲಾಗುವುದು ಎಂದವರು ನುಡಿದರು.

ಅರಣ್ಯ ಇಲಾಖೆಯ ಅರಣ್ಯ ರಕ್ಷಕರು ಅಥವಾ ವನಪಾಲಕರು ಬಗರ್ ಹುಕುಂ ಸಾಗುವಳಿದಾರರ ವಿರುದ್ಧ ಮಾನವೀಯತೆ ಮರೆತು ವರ್ತಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿವೆ. ಇಲಾಖೆಯ ಜವಾಬ್ದಾರಿಯುತ ಅಧಿಕಾರಿಗಳು ಮುಂದಿನ ದಿನಗಳಲ್ಲಿ ದೂರುಗಳು ಬರದಂತೆ ಗಮನ ಹರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಬಗುರ್ ಹುಕುಂ ಸಾಗುವಳಿ ಜಮೀನು ಮಂಜೂರಾತಿಗೆ ಸಂಬಂಧಿಸಿದಂತೆ ಬಗರ್ ಹುಕುಂ ಸಮಿತಿಯಲ್ಲಿ ಅರ್ಜಿಗಳನ್ನು ತಿರಸ್ಕರಿಸುವ ಮುನ್ನ ಸಚಿವರ ಗಮನಕ್ಕೆ ತರುವಂತೆ ಸೂಚಿಸಿದವರು. ಕೆಲವು ಸಂದರ್ಭಗಳಲ್ಲಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಪಕ್ಷಾತೀತವಾಗಿ ಚರ್ಚಿಸಿ ಪರಿಶೀಲಿಸಿದ ನಂತರ ಕ್ರಮ ಕೈಗೊಳ್ಳುವಂತೆ ಅವರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ತಹಸಿಲ್ದಾರ್ ಮಂಜುಳಾ ಹೆಗಡಾಳ ಅವರು ಮಾತನಾಡಿ ಬಗರ್ ಹುಕುಂ ಜಮೀನು ಮಂಜುರಾತಿಗೆ ಸಂಬಂಧಿಸಿದಂತೆ ಈಗಾಗಲೇ ಆನ್ಲೈನ್ ಮೂಲಕ 5113 ಅರ್ಜಿಗಳು ದಾಖಲಾಗಿದ್ದು, ಅವುಗಳನ್ನು ಶೀಘ್ರದಲ್ಲಿ ಬಗರ್ ಹುಕುಂ ಸಮಿತಿಗೆ ಮಂಡಿಸಲಾಗುವುದು. 91 ಅರ್ಜಿದಾರರಿಗೆ ಹಕ್ಕುಪತ್ರ ವಿತರಣೆ, 166 ಜನರಿಗೆ ನೋಂದಣಿ ಮಾಡಿಸಿಕೊಡಬೇಕಾದ ಕಾರ್ಯ ಪ್ರಗತಿಯಲ್ಲಿದೆ ಎಂದ ಅವರು ನೂತನ ಸಮಿತಿ ಸದಸ್ಯರು ಇ-ಕೆವೈಸಿ ಮಾಡಿಸಿದ ನಂತರ ಸಾಗುವಳಿದಾರರ ಅರ್ಜಿಗಳನ್ನು ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಸಭೆಯಲ್ಲಿ ಬಗರ್ ಹುಕುಂ ಸಮಿತಿಯ ನೂತನ ಅಧ್ಯಕ್ಷ ಎಂ. ಡಿ. ಶೇಖರ್ ಸೇರಿದಂತೆ ಸಮಿತಿಯ ನೂತನ ಸದಸ್ಯರು ಹಾಗೂ ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version