ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜಾಗೃತ ಕರ್ನಾಟಕ ಸಂಘಟನೆ ಆಶ್ರಯದಲ್ಲಿ ಮಂಡ್ಯದ ಅಸ್ಮಿತೆ ಮತ್ತು ಕುವೆಂಪು ಕ್ರಾಂತಿ ಕಹಳೆ-50 ಕಾರ್ಯಕ್ರಮ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಜಾಗೃತ ಕರ್ನಾಟಕ ಸಂಘಟನೆ ಆಶ್ರಯದಲ್ಲಿ ಮಂಡ್ಯದ ಅಸ್ಮಿತೆ ಮತ್ತು ಕುವೆಂಪು ಕ್ರಾಂತಿ ಕಹಳೆ-50 ಕಾರ್ಯಕ್ರಮ

ರಾಷ್ಟ್ರಕವಿ ಕುವೆಂಪು ಅವರ ‘ವಿಚಾರ ಕ್ರಾಂತಿಗೆ ಆಹ್ವಾನ’ ಮತ್ತು ಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿ ಎರಡೂ ಯುಗಪ್ರವರ್ತಕ ಭಾಷಣಗಳಿಗೆ 50 ವರ್ಷ ತುಂಬುತ್ತಿರುವ ನೆನಪಿನಲ್ಲಿ ಮತ್ತು ಮಂಡ್ಯ ಜಿಲ್ಲೆಗೆ 85ವರ್ಷ ತುಂಬುತ್ತಿರುವ ಹೊತ್ತಿನಲ್ಲಿ ಮಂಡ್ಯ ಜಿಲ್ಲೆ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಜಾಗೃತ ಕರ್ನಾಟಕದ ವತಿಯಿಂದ ಮಾ.13ರಂದು ಮಂಡ್ಯನಗರದ ರೈತ ಸಭಾಂಗಣದಲ್ಲಿ ‘ಮಂಡ್ಯದ ಅಸ್ಮಿತೆ ಮತ್ತು ಕುವೆಂಪು ಕ್ರಾಂತಿ ಕಹಳೆ-50 ಕಾರ್ಯಕ್ರಮ’ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಾಗೃತ ಕರ್ನಾಟಕ ಸಂಘಟನೆಯ ಮುಖಂಡ ಎನ್.ನಾಗೇಶ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ರಾಷ್ಟ್ರಧ್ವಜ, ನಾಡಧ್ವಜ, ಕುವೆಂಪು ನುಡಿಗಳ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ 11.30 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಯಾಗಿ ಸಾಹಿತಿ, ಚಿಂತಕ: ಬಂಜಗೆರೆ ಜಯಪ್ರಕಾಶ್ ಭಾಗವಹಿಸುವರು. ಪ್ರಧಾನ ಭಾಷಣಕಾರರಾಗಿ ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಸುಧೀರ್ ಕುಮಾರ್ ಮರೊಳ್ಳಿ ಪ್ರಧಾನ ಭಾಷಣ ಮಾಡುವರು ಎಂದರು.

ರಾಷ್ಟ್ರಧ್ವಜ, ನಾಡಧ್ವಜ, ಕುವೆಂಪು ನುಡಿಗಳ ಮೆರವಣಿಗೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಕೆ. ಮಾಯಿಗೌಡ, ಡಾ. ಸುಜಯ್ ಕುಮಾರ್ ಕೆ.ಬೋರಯ್ಯ, ಪ್ರೊ.ಚಂದ್ರಶೇಖ‌ರ್, ಸುನಂದಾ ಜಯರಾಂ ಎಂ.ವಿ.ಕೃಷ್ಣ, ಲಕ್ಷ್ಮಣ ಚೀರನಹಳ್ಳಿ ಭಾಗವಹಿಸುವರು.

ಕಾರ್ಯಕ್ರಮದ ನಿರ್ವಹಣೆಯನ್ನು ನಾಗಮಂಗಲ ರಮೇಶ್‌ ಗೌಡ ಮಾಡುವರು. ಚಾಮನಕೊಪ್ಪಲು ಗೋವಿಂದ ರಾಜು, ಚಿಣ್ಯ ಮಂಜುನಾಥ್, ಚನ್ನಾಪುರ ಮಂಜೇಶ್. ಡಾ.ಬಿ.ಸಿ.ಬಸವರಾಜು ಕುವೆಂಪು ಗೀತೆಗಳ ಗಾಯನ ಮಾಡುವರು. ಡಾ.ಬಿ.ಸಿ.ಬಸವರಾಜು ನಾಗಮಂಗಲ ಪ್ರಾಸ್ತಾವಿಕ ಭಾಷಣ ಮಾಡುವರು. , ಎನ್. ನಾಗೇಶ್ ಸ್ವಾಗತ ಭಾಷಣ ಮಾಡುವರು ಎಂದರು.

ಪ್ರತಿಸ್ಪಂದನೆಯಲ್ಲಿ ರಾಜೇಂದ್ರ ಪ್ರಸಾದ್, ಸಿ.ಕುಮಾರಿ, ಪೂರ್ಣಿಮಾ ಹಾಗೂ ತೇಜ ಯಾಲಕ್ಕಯ್ಯ ಭಾಗವಹಿಸುವರು.

ಕರ್ನಾಟಕ ರಾಜ್ಯ ರೈತಸಂಘ ಯುವ ನಾಯಕ ಮತ್ತು ಶಾಸಕ ದರ್ಶನ್ ಪುಟ್ಟಣ್ಣಯ್ಯ ಉಪಸ್ಥಿತರಿರುವರು. ಗುರುಪ್ರಸಾದ್ ಕೆರಗೋಡು ಅಧ್ಯಕ್ಷತೆ ವಹಿಸುವರು. ಅಂದು ನಮ್ಮೊಂದಿಗೆ ನಾ.ಸು.ನಾಗೇಶ್ ಚಿಂತಕರು, ಡಾ.ವಾಸು ಜಾಗೃತ ಕರ್ನಾಟಕ, ಬಡಗಲಪುರ ನಾಗೇಂದ್ರ, ಕೆಂಪೂಗೌಡ ರೈತ ಸಂಘ, ದೇವನೂರು ಮಹಾದೇವ, ಬಿ.ಟಿ.ವಿಶ್ವನಾಥ್ ವಕೀಲರು, ಕೃಷ್ಣೇಗೌಡ ಸಿಪಿಐಎಂ, ಅಪ್ರೋಜ್ ಪಾಷ, ನಾಗರೇವಕ್ಕ, ಮಂಜುನಾಥ್ ಕನ್ನಡ ಸೇನೆ, ಲಂಕೇಶ್ ನೆಲದನಿ ಬಳಗ ಹಾಗೂ ಕರುನಾಡ ಸೇವಕರು ಸಂಘಟನೆಯ ನಾಗಣ್ಣಗೌಡ, ಸಿದ್ದರಾಜು ಕರ್ನಾಟಕ ಜನಶಕ್ತಿ, ಇತಿಹಾಸಕಾರ ಮಹಮ್ಮದ್ ಕಲೀಂವುಲ್ಲಾ, ಮಹೇಶ್‌ ಚಂದ್ರಗುರು ವಿಕಸನ,ಶ್ರೀನಿವಾಸ್ ಎ.ಐ.ಎಲ್.ಯು ಹಾಗೂ ವಿಮೋಚನಾ ಜನಾರ್ಧನ್ ಭಾಗವಹಿಸುವರು ಎಂದರು.

ಗೋಷ್ಠಿಯಲ್ಲಿ ಕವಿ ರಾಜೇಂದ್ರ ಪ್ರಸಾದ್, ಕರ್ನಾಟಕ ಜನಶಕ್ತಿಯ ಪೂರ್ಣಿಮ, ಸಿದ್ದರಾಜು ಹಾಗೂ ರಾಹುಲ್ ಉಪಸ್ಥಿತರಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು