ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜಯದೇವ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ: ಸಿ.ಎಂ ಪ್ರಶಂಸೆ ಹೊಸ ವರ್ಷಕ್ಕೆ ಜಯದೇವ ಕಾರ್ಯಾರಂಭ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿ.ಎಂ ಭರವಸೆ

ಕಲಬುರಗಿ : ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ. ಕಲಬುರಗಿಯ ಜಯದೇವ ಇವೆರಡೂ ಆಸ್ಪತ್ರೆಗಳಿಗಿಂತ ಇನ್ನೂ ಹೆಚ್ಚಿನ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿರುವ ಜನತೆ ಹೃದ್ರೋಗ ಸಮಸ್ಯೆಗಳಿಗೆ ಈಗ ಬೆಂಗಳೂರಿಗೆ ಬರುವ ಅಗತ್ಯವೇ ಇಲ್ಲ. ಕಲಬುರಗಿಯಲ್ಲೇ ಜಯದೇವ ಲೋಕಾರ್ಪಣೆಗೊಳಿಸಿದ್ದೇವೆ ಎಂದರು‌.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಸಂಗತಿಗಳನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು, “ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿ, ಈ ಬಗ್ಗೆ ಬೇಗ ತೀರ್ಮಾನ ತೆಗೆದುಕೊಳ್ಳುವಂತೆ ವೇದಿಕೆಯಲ್ಲಿದ್ದ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಸೂಚಿಸಿದರು. ಮೈಸೂರಿಗೂ ನಿಮ್ಹಾನ್ಸ್ ಘಟಕದ ಅಗತ್ಯವಿದ್ದು ಅದನ್ನು ಮರೆಯಬೇಡಿ ಎಂದರು‌.371 ಜೆ ಜಾರಿಯಿಂದ ಈ ಭಾಗದ ಸಹಸ್ರಾರು ವಿದ್ಯಾವಂತರು ಉತ್ತಮ ಹುದ್ದೆಗಳನ್ನು ಪಡೆಯಲು ಸಾಧ್ಯವಾಗಿದೆ. ನಮ್ಮ ಸರ್ಕಾರ ಉತ್ತರ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ನೀಲನಕ್ಷೆ ಸಿದ್ದಪಡಿಸಿಕೊಂಡಿದ್ದೇವೆ. ಇದು ನಮ್ಮ ಸರ್ಕಾರದ ಬದ್ಧತೆ ಎಂದರು.ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಇಲ್ಲಿನ ವಿಶ್ವ ವಿದ್ಯಾಲಯಗಳಲ್ಲಿ ನೂತನ ಹೊಸ ಕೋರ್ಸ್ ಗಳನ್ನು ಆರಂಭಿಸುವುದು ಮತ್ತು ಖಾಲಿ ಇರುವ ಹುದ್ದೆಗಳನ್ನು ತುಂಬುವ ಕೆಲಸವನ್ನೂ ಮಾಡಲಾಗುವುದು ಎಂದರು.ತೊಗರಿ ಬೆಳೆ ಪ್ಯಾಕೇಜ್ ಬಗ್ಗೆ KKRDB ಅಧ್ಯಕ್ಷರಾದ ಅಜಯ್ ಸಿಂಗ್ ಮತ್ತು ಇಲ್ಲಿನ ಶಾಸಕರು, ಸಚಿವರು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ವರದಿ ಕೇಳಿದ್ದೇನೆ. ವರದಿ ಬಂದ ಕೂಡಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಅನುಭವ ಮಂಟಪ ಪೂರ್ವ ಕ್ಕೆ ಹಣ

ಈಗಾಗಲೇ ಅನುಭವ ಮಂಟಪ ನಿರ್ಮಾಣ ಅರ್ಧ ಮುಗಿದಿದೆ. ಪೂರ್ಣಗೊಳಿಸಲು ಅಗತ್ಯ ಹಣ ನೀಡಲಾಗಿದೆ. ಇನ್ನೂ ಅಗತ್ಯಬಿದ್ದರೆ ಹಣ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು