ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

15000 ಗೌರವ ಸಂಭಾವನೆ| ಒಂದು ವರ್ಷದ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

P

Peepal Media • ರಾಜ್ಯ

• 1 ನಿಮಿಷದ ಓದು

15000 ಗೌರವ ಸಂಭಾವನೆ| ಒಂದು ವರ್ಷದ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರು ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು ಅರ್ಹ ಪತ್ರಿಕೋದ್ಯಮ ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ.


ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯಲ್ಲಿ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಜಾತಿಗೆ ಸೇರಿದ, ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.


ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ಅಪ್ರೆಂಟಿಸ್ ಮಾಹೆಯಾನ ರೂ.15000/- ಗಳ ಸ್ಟೇಫಂಡ್(ಗೌರವ ಸಂಭಾವನೆ) ನೀಡಲಾಗುವುದು.


ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 35 ವರ್ಷದೊಳಗಿರಬೇಕು. ಅರ್ಜಿಯೊಂದಿಗೆ ಆಧಾರ್, ಎಸ್.ಎಸ್. ಎಲ್.ಸಿ ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ತ್ರಿ-ಪ್ರತಿಯಲ್ಲಿ 2024 ರ ಅಕ್ಟೋಬರ್ 28 ರೊಳಗಾಗಿ ಉಪನಿರ್ದೆಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ.17, ಭಗವಾನ್ ಮಾಹಾವೀರ ರಸ್ತೆ, ವಾರ್ತಾ ಸೌಧ, 2ನೇ ಮಹಡಿ, ಇನ್ಫೆಂಟ್ರಿ ರಸ್ತೆ, ಬೆಂಗಳೂರು-560001 ಗೆ ಸಲ್ಲಿಸುವುದು.


ಆಸಕ್ತರು ಅರ್ಹತೆಗಳು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೇಲೆ ತಿಳಿಸಿರುವ ಇಲಾಖೆ ಕಚೇರಿಯ ಇ-ಮೇಲ್ ruralinformation@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version