ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ತುರ್ತಾಗಿ ಜಸ್ಟೀಸ್‌ ನಾಗಮೋಹನ್‌ ದಾಸ್‌ ಸಮಿತಿಯು ತನ್ನ ವರದಿಯನ್ನು ನೀಡಬೇಕು : ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ ಆಗ್ರಹ

MMurali Maluru

Murali Maluru • ರಾಜ್ಯ

• 1 ನಿಮಿಷದ ಓದು

ತುರ್ತಾಗಿ ಜಸ್ಟೀಸ್‌ ನಾಗಮೋಹನ್‌ ದಾಸ್‌ ಸಮಿತಿಯು ತನ್ನ ವರದಿಯನ್ನು ನೀಡಬೇಕು : ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ ಆಗ್ರಹ

ಬೆಂಗಳೂರು, ಫೆ,07 : ಒಳಮೀಸಲಾತಿಯನ್ನು ಯಾವುದೇ ವಿಳಂಬ ಮಾಡದೆ ತುರ್ತಾಗಿ ಜಾರಿಗೆ ಆಗ್ರಹಿಸಿ ಇಂದು ಬೆಂಗಳೂರಿನ ಪ್ರೆಸ್‌ ಕ್ಲಬ್‌ ನಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದಿಂದ ಪ್ರತಿಕಾಗೋಷ್ಠಿಯನ್ನು ಕರೆಯಲಾಗಿತ್ತು.

ಒಳಮೀಸಲಾತಿ ಜಾರಿಯಾಗುವ ತನಕ ಸರ್ಕಾರಿ ನೇಮಕಾತಿಗಳನ್ನು ತಡೆ ಹಿಡಿರುವುದೂ ಸಹಾ ಅನ್ಯಾಯ ಮಾಡಿದಂತೆ ಎಂಬ ಅಭಿಪ್ರಾಯವನ್ನು ಒಕ್ಕೊರಲಿನಿಂದ ಮಾತನಾಡಿದ ಒಕ್ಕೂಟವು ಯಾವುದೇ ವಿಳಂಬ ಮಾಡದಂತೆ ತುರ್ತಾಗಿ ಜಸ್ಟೀಸ್‌ ನಾಗಮೋಹನ್‌ ದಾಸ್‌ ಸಮಿತಿಯು ತನ್ನ ವರದಿಯನ್ನು ನೀಡಬೇಕೆಂದು ಒತ್ತಾಯಿಸಿದರು.


ದಶಕಗಳ ಕಾಲ ಒಳಮೀಸಲಾತಿ ಪರವಾಗಿ ಹೋರಾಟಗಳು ನಡೆಯುತ್ತಲೇ ಬಂದಿವೆ. ಸುಪ್ರಿಂ ಕೋರ್ಟ್‌ ತೀರ್ಪಿನ ನಂತರ ರಾಜ್ಯ ಸರ್ಕಾರ ಒಳಮೀಸಲಾತಿ ಕಲ್ಪಿಸುವ ವಿಚಾರವಾಗಿ ನಾಗಮೋಹನ್‌ ದಾಸ್‌ ಅವರ ಸಮಿತಿ ರಜಿಸಿದ್ದು ಸ್ವಾಗತಾರ್ಹವಾದರೂ, ಇವರ ಸಮಿತಿಯ ಕೆಲಸ ಶೀಘ್ರವಾಗಿ ಮುಗಿಯದೇ ಹೋದರೆ ಮತ್ತಷ್ಟು ಕಾಲ ದೂಡಿದಂತೆ ಆಗುತ್ತದೆ ಎಂಬ ಅಭಿಪ್ರಾಯದೊಂದಿಗೆ ಒಂದಷ್ಟು ಬೇಡಿಕಡಗಳನ್ನು ಮುಂದಿಟ್ಟಿದ್ದಾರೆ.

  1. ಯಾವುದೇ ಕಾರಣಕ್ಕೂ ಯಾವುದೇ ಸಮುದಾಯಕ್ಕೂ ಅನ್ಯಾಯವಾಗದ ಹಾಗೆ ಒಳಮೀಸಲಾತಿ ವರ್ಗೀಕರಣ ಮಾಡಬೇಕು.
  2. ಸುಪ್ರೀಂ ಕೋರ್ಟ್‌ ತನ್ನ ತೀರ್ಪಿನಲ್ಲಿ ʼಪ್ರಾಯೋಗಿಕ ದತ್ತಾಂಶʼವನ್ನು ಮಾನದಂಡವನ್ನಾಗಿ ವಿಧಿಸಿರುವುದರಿಂದ ಮುಂದಿನ ಜನಗಣತಿಯವರೆಗೆ ಅವಶ್ಯಕವಿರುವ ಅಂಶಗಳಿಗೆಲ್ಲ ʼಸ್ಯಾಂಪಲ್‌ ಸಮೀಕ್ಷೆʼ ಕೈಗೊಳ್ಳಬೇಕು. ಇದಕ್ಕೆ ರಾಜ್ಯ ಸರ್ಕಾರ ಶೀಘ್ರ ಅನುದಾನ ಬಿಡುಗಡೆ ಮಾಡಬೇಕು.
  3. ಉದ್ಯೋಗಗಳಲ್ಲಿ ಅತಿ ಕಡಿಮೆ ಆಯ್ಕೆ/ಅವಕಾಶಗಳಿದ್ದಾಗ, ಪ.ಜಾತಿಯ ಯಾವ ಗುಂಪಿಗೆ ಮೊದಲ ಆದ್ಯತೆ ನೀಡಬೇಕೆಂಬ ಶ್ರೇಣೀಕರಣವನ್ನು ನಿಗದಿಗೊಳಿಸಬೇಕು.
  4. ಬಡ್ತಿ ಮೀಸಲಾತಿಯಲ್ಲಿಯೂ ಒಳಮೀಸಲಾತಿಯನ್ನು ಪರಿಗಣಿಸಬೇಕು.
  5. ರಾಜಕೀಯ ಮತಕ್ಷೇತ್ರ ಮೀಸಲಾತಿಯಲ್ಲಿಯೂ ಒಳಮೀಸಲಾತಿಯನ್ನು ಕಡ್ಡಾಯಗೊಳಿಸಲು ಶಿಫಾರಸು ಮಾಡಬೇಕು.
  6. ಗುತ್ತಿಗೆ ನೌಕರಿಗಳಲ್ಲಿಯೂ ಒಳಮೀಸಲಾತಿ ಪರಿಗಣಿಸಲು ಶಿಫಾರಸು ಮಾಡಬೇಕು.
  7. ಒಳಮೀಸಲಾತಿ ಅನುಷ್ಠಾನದಲ್ಲಿನ ಕುಂದುಕೊರತೆಗಳು ಹಾಗೂ ಪ್ರಗತಿಯ ಮೇಲ್ವಿಚಾರಣೆ ಮಾಡಲು ರಾಜ್ಯ ಪರಿಶಿಷ್ಟ ಆಯೋಗದಡಿಯಲ್ಲಿ ಒಂದು ಸ್ವತಂತ್ರ ಸಮಿತಿ ರಚಿಸಬೇಕು.
  8. ಇಂದಿರಾ ಸಹಾನಿ ತೀರ್ಪಿನನ್ವಯ ಮೀಸಲಾತಿಗೆ ವಿಧಿಸಿರುವ ಶೇ.50 ಮೀಸಲಾತಿ ಮಿತಿಯನ್ನು ರದ್ದುಪಡಿಸಲು ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಬೇಕು.
  9. ಉದ್ಯೋಗಾಕಾಂಕ್ಷಿಗಳಿಗೆ ಸಮಸ್ಯೆಯಾಗದಂತೆ ನಿಗದಿತ ಗಡುವಿನೊಳಗೆ ಆಯೋಗವು ವರದಿ ನೀಡಬೇಕು.

ಈ ಮೇಲಿನ ಮನವಿಗಳನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಹಾಗೆ ಸಾಮಾಜಿಕ ನ್ಯಾಯವನ್ನು ಒಳಮೀಸಲಾತಿಯಲ್ಲಿಯೂ ಎತ್ತಿಹಿಡಿಯುವಂತೆ ಒಕ್ಕೂಟವು ಆಗ್ರಹಿಸಿತು.

ಒಕ್ಕೂಟದ ಪರವಾಗಿ ಬಸವರಾಜ್‌ ಕೌತಾಳ್‌, ಪಿಚ್ಚಳ್ಳಿ ಶ್ರೀನಿವಾಸ್‌, ಮಾವಳ್ಳಿ ಶಂಕರ್‌, ಡಿ.ಟಿ ವೆಂಕಟೇಶ್‌, ಶಿವಣ್ಣ ಕನಕಪುರ, ವಿನಯ್‌ ಶ್ರೀನಿವಾಸ್‌, ಚಂದ್ರು ತರಹುಣಿಸೆ ಭಾಗವಹಿಸಿದ್ದರು

MMurali Maluru

Murali Maluru

Peepal Media · ರಾಜ್ಯ ವಿಭಾಗ

Murali MV is a Reporter at Peepal Media. An avid reader, he reports on Sports and Political issues.

ಸಂಬಂಧಿತ ಸುದ್ದಿಗಳು