ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಆಮ್ ಆದ್ಮಿ ಪಾರ್ಟಿಯಿಂದ ವಿವಿಧೆಡೆ ಕನ್ನಡ ರಾಜ್ಯೋತ್ಸವ ಆಚರಣೆ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಆಮ್ ಆದ್ಮಿ ಪಾರ್ಟಿಯಿಂದ ವಿವಿಧೆಡೆ ಕನ್ನಡ ರಾಜ್ಯೋತ್ಸವ ಆಚರಣೆ

ಬೆಂಗಳೂರು: ಬೆಂಗಳೂರಿನ ಕುಮಾರ ಪಾರ್ಕ್‌ನಲ್ಲಿರುವ ಆಮ್ ಆದ್ಮಿ ಪಾರ್ಟಿ ರಾಜ್ಯ ಕಚೇರಿಯಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಬೆಂಗಳೂರು ನಗರ ಎಎಪಿ‌ ಅಧ್ಯಕ್ಷ ಮೋಹನ್ ದಾಸರಿಯವರರು, ʼಕನ್ನಡದ ಅಭಿವೃದ್ಧಿಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ಕನ್ನಡ ಶಾಲೆಗಳ ಕಡೆಗಣನೆ, ನಾಡಿನ ಗಡಿ ಪ್ರದೇಶಗಳ ಅಭಿವೃದ್ಧಿಗೆ ನಿರಾಸಕ್ತಿ, ಕೇಂದ್ರ ಸರ್ಕಾರದ ಹಿಂದಿ ಹೇರಿಕೆ, ಕನ್ನಡಿಗರ ಸರ್ಕಾರಿ ಉದ್ಯೋಗಾವಕಾಶ ಅನ್ಯಭಾಷಿಗರ ಪಾಲಾಗುತ್ತಿರುವುದು ಸೇರಿದಂತೆ ಅನೇಕ ಸಮಸ್ಯೆಗಳು ಕನ್ನಡ ಭಾಷೆಗೆ ಆತಂಕ ತಂದಿಟ್ಟಿವೆ. ಇವುಗಳನ್ನು ಗಂಭೀರವಾಗಿ ಪರಿಗಣಿಸಿ ಇತ್ಯರ್ಥ ಪಡಿಸಲು ಆಮ್‌ ಆದ್ಮಿ ಪಕ್ಷ ಬದ್ಧವಾಗಿದೆ. ಸ್ಥಳೀಯ ನುಡಿ, ಸಂಸ್ಕೃತಿಗೆ ಪೂರಕವಾಗುವಂತಹ ಆಡಳಿತ ನೀಡಬೇಕೆಂಬ ನೀತಿಯನ್ನು ಆಮ್‌ ಆದ್ಮಿ ಪಕ್ಷವು ದೇಶದೆಲ್ಲೆಡೆ ಪಾಲಿಸುತ್ತಿದೆʼಎಂದು ಹೇಳಿದರು.

ಈ ವೇಳೆ ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಕುಶಲಸ್ವಾಮಿ, ಜಗದೀಶ್ ವಿ ಸದಂ, ಚನ್ನಪ್ಪಗೌಡ ನೆಲ್ಲೂರು, ಸಂಚಿತ್ ಸೆಹ್ವಾನಿ, ಪ್ರಕಾಶ್ ನೆಡುಂಗಡಿ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ವಿವಿಧೆಡೆ ಆಚರಣೆ

ಬೆಂಗಳೂರಿನ ದಾಸರಹಳ್ಳಿ ವೃತ್ತದಲ್ಲಿ ಎಎಪಿ ಮುಖಂಡರಾದ ಸೌಂದರ್ಯ ಮಂಜಪ್ಪ ಹಾಗೂ ಕೀರ್ತನ್ ಕುಮಾರ್ ನೇತೃತ್ವದಲ್ಲಿ ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಮಹಾಲಕ್ಷ್ಮೀ ಬಡಾವಣೆ, ವಿಜಯನಗರ, ಮಹದೇವಪುರ, ಕೆ.ಆರ್.ಪುರಂ, ಪದ್ಮನಾಭನಗರ, ಜಯನಗರ ಸೇರಿದಂತೆ ಅನೇಕ ವಿಧಾನಸಭಾ ಕ್ಷೇತ್ರಗಳ ಎಎಪಿ ಕಚೇರಿಯಲ್ಲಿ ಕನ್ನಡ ಬಾವುಟ ಹಾರಿಸಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮಿಸಲಾಯಿತು. ಜೊತೆಗೆ, ರಾಜ್ಯಾದ್ಯಂತ ಹಲವು ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಆಮ್‌ ಆದ್ಮಿ ಪಾಕ್ಷದ ಕಾರ್ಯಕರ್ತರು ಕನ್ನಡಾಂಬೆಗೆ ನಮನ ಸಲ್ಲಿಸಿ, ಸಿಹಿ ಹಂಚುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು