ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕರ್ನಾಟಕ ಬಂದ್, ಭಾರಿ ಬಂದೋಬಸ್ತ್, ಕೆಎಸ್‌ಆರ್‌ಪಿ, ಸಿಆರ್‌ಪಿ ಕಾವಲು

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಕರ್ನಾಟಕ ಬಂದ್, ಭಾರಿ ಬಂದೋಬಸ್ತ್, ಕೆಎಸ್‌ಆರ್‌ಪಿ, ಸಿಆರ್‌ಪಿ ಕಾವಲು

ಬೆಂಗಳೂರು: ಕಾವೇರಿ ನೀರಿಗಾಗಿ ಕನ್ನಡಿಗರ ಹೋರಾಟ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಕಾವೇರಿ ನೀರಿಗಾಗಿ ನಾಳೆ ಸೆಪ್ಟೆಂಬರ್ 29 ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.

ಈ ಸಂಬಂಧ ಸುದ್ದಿಗೋಷ್ಠಿ ಆಯೋಜಿಸಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಕೆಲ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಪೊಲೀಸರು ಹೊರಡಿಸಿರುವ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಯಾನಂದ್ ಎಚ್ಚರಿಕೆ ನೀಡಿದರು.

ಬೆಂಗಳೂರು ನಗರದಲ್ಲಿ ಇಂದು ಮಧ್ಯರಾತ್ರಿ 12ರಿಂದ ಶುಕ್ರವಾರ ಮಧ್ಯರಾತ್ರಿ 12 ಗಂಟೆಯವರೆಗೆ ಸೆಕ್ಷನ್ 144 ಜಾರಿಯಲ್ಲಿರುತ್ತದೆ ಮತ್ತು ಬಂದ್ ಸಮಯದಲ್ಲಿ ಯಾವುದೇ ಸಾರ್ವಜನಿಕ ಸಭೆಗಳು ಅಥವಾ ಸಮಾವೇಶಗಳಿಗೆ ಅವಕಾಶವಿಲ್ಲ ಮತ್ತು ಪ್ರತಿಭಟನೆಯ ಸಮಯದಲ್ಲಿ ಸಾರ್ವಜನಿಕ ಆಸ್ತಿ ಅಥವಾ ಸರ್ಕಾರಿ ಆಸ್ತಿಗೆ ಯಾವುದೇ ಹಾನಿ ಉಂಟಾದರೆ, ಪ್ರತಿಭಟನೆಗೆ ಕರೆ ನೀಡಿದವರೇ ಹಾನಿಗೆ ಹೊಣೆಗಾರರಾಗುತ್ತಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಎಚ್ಚರಿಸಿದ್ದಾರೆ.

ಹೋರಾಟದ ಹೆಸರಿನಲ್ಲಿ ಯಾವುದೇ ಪ್ರದೇಶಗಳಲ್ಲಿ ಅಂಗಡಿಗಳನ್ನು ಮುಚ್ಚಿ ರಸ್ತೆಯಲ್ಲಿ ಇತರ ವಾಹನಗಳನ್ನು ತಡೆದರೆ ಅಥವಾ ಸಂಚಾರಕ್ಕೆ ಅಡ್ಡಿಪಡಿಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದಯಾನಂದ ಎಚ್ಚರಿಕೆ ನೀಡಿದರು. ನಾಗರಿಕರಿಗೆ ತೊಂದರೆಯುಂಟು ಮಾಡಿದೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಪ್ರಕರಣ ದಾಖಲಿಸಲಾಗುವುದು ಎಂದು ದಯಾನಂದ ಹೇಳಿದರು.

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಪಿ ಮತ್ತು ಸಿಆರ್‌ಪಿಎಫ್ ಪಡೆಗಳನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಇನ್ನೂ ಗೃಹರಕ್ಷಕರನ್ನು ನಿಯೋಜಿಸಲಾಗಿದೆ. ಕರ್ನಾಟಕ ಬಂದ್ ವೇಳೆ ಮೆರವಣಿಗೆ, ರ್ಯಾಲಿಗಳಿಗೆ ಅವಕಾಶವಿಲ್ಲ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನೀಡಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಇತ್ತೀಚೆಗೆ (ಮಂಗಳವಾರ) ಬೆಂಗಳೂರು ಬಂದ್ ಸಂದರ್ಭದಲ್ಲಿ ಕಲ್ಲು ತೂರಾಟ ನಡೆಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಈಗಾಗಲೇ ಇಬ್ಬರು ವಿಧ್ವಂಸಕರನ್ನು ಬಂಧಿಸಲಾಗಿದ್ದು, ಸಿಸಿಟಿವಿಗಳನ್ನು ಇನ್ನೂ ಪರಿಶೀಲಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು