ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಮುಂದುವರಿದ ಅಸಮಾಧಾನ: ಖಾತೆ ಹಂಚಿಕೆ ವಿರುದ್ಧ ಕೆ.ಎಚ್. ಮುನಿಯಪ್ಪ ಅಸಮಾಧಾನ, ಹೈಕಮಾಂಡ್‌ಗೆ ದೂರು!

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಮುಂದುವರಿದ ಅಸಮಾಧಾನ: ಖಾತೆ ಹಂಚಿಕೆ ವಿರುದ್ಧ ಕೆ.ಎಚ್. ಮುನಿಯಪ್ಪ ಅಸಮಾಧಾನ, ಹೈಕಮಾಂಡ್‌ಗೆ ದೂರು!

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಅಸಮಾಧಾನದ ಬೆಂಕಿ ಮತ್ತಷ್ಟು ಜೋರಾಗಿದೆ. ಸಚಿವ ಸಂಪುಟ ಸೇರ್ಪಡೆಯಾಗಿ ಖಾತೆ ಹಂಚಿಕೆ ಪ್ರಕಟವಾದ ಬೆನ್ನಲ್ಲೇ, ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಅವರು ಸಹ ತಮಗೆ ನೀಡಿರುವ ಖಾತೆಯ ಬಗ್ಗೆ ತೀವ್ರ ಅಸಮಾಧಾನ ಹೊರಹಾಕುವ ಮೂಲಕ ಬಂಡಾಯದ ಬಾವುಟ ಹಾರಿಸಿದ್ದಾರೆ. ಈ ಮೂಲಕ ಹೊಸದಾಗಿ ರಚನೆಯಾದ ಸರ್ಕಾರವು ಮತ್ತೊಂದು ಬಿಕ್ಕಟ್ಟನ್ನು ಎದುರಿಸುವಂತಾಗಿದೆ.

ಸಂಪುಟದಲ್ಲಿ ಅತ್ಯಂತ ಹಿರಿಯ ನಾಯಕರಾಗಿರುವ ತಮ್ಮನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂಬುದು ಮುನಿಯಪ್ಪ ಅವರ ಮುಖ್ಯ ವಾದವಾಗಿದೆ. ಪ್ರಸ್ತುತ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯನ್ನು ನೀಡಲಾಗಿದೆ. ಆದರೆ, ತಮ್ಮ ಹಿರಿತನಕ್ಕೆ ತಕ್ಕದಾದ ಹಾಗೂ ಪ್ರಭಾವಶಾಲಿಯಾದ ಬೇರೊಂದು ಖಾತೆಯನ್ನು ನೀಡಬೇಕು ಎಂದು ಅವರು ಪಟ್ಟು ಹಿಡಿದಿದ್ದಾರೆ. ತಮ್ಮ ಈ ತೀವ್ರ ಅಸಮಾಧಾನವನ್ನು ಮುನಿಯಪ್ಪ ಅವರು ಈಗಾಗಲೇ ಕಾಂಗ್ರೆಸ್ ಅಗ್ರ ನಾಯಕರಾದ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ರಾಮಲಿಂಗಾರೆಡ್ಡಿ ರಾಜೀನಾಮೆ ಬೆನ್ನಲ್ಲೇ ಬಿಕ್ಕಟ್ಟು: ಇದಕ್ಕೂ ಮುನ್ನ, ಸಚಿವ ಸಂಪುಟದ ಮತ್ತೊಬ್ಬ ಹಿರಿಯ ನಾಯಕರಾದ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿ ಪಕ್ಷಕ್ಕೆ ಶಾಕ್ ನೀಡಿದ್ದರು. ತಮಗೆ ಮೊದಲೇ ಭರವಸೆ ನೀಡಲಾಗಿದ್ದ ‘ಬೆಂಗಳೂರು ನಗರಾಭಿವೃದ್ಧಿ’ ಖಾತೆಯನ್ನು ತಪ್ಪಿಸಿದ್ದಕ್ಕಾಗಿ ಅವರು ರಾಜೀನಾಮೆ ನಿರ್ಧಾರ ಕೈಗೊಂಡಿದ್ದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ರಾಮಲಿಂಗಾರೆಡ್ಡಿ, “ನನಗೆ ಸಚಿವ ಸ್ಥಾನ ನೀಡಿದ್ದಕ್ಕಾಗಿ ಧನ್ಯವಾದಗಳು. ಆದರೆ, ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಹಾಗೂ ಕೊಟ್ಟ ಮಾತು ತಪ್ಪಿದ ಜಾಗದಲ್ಲಿ ನನಗೆ ಕೆಲಸ ಮಾಡಲು ಸಾಧ್ಯವಿಲ್ಲ. ನಾನು ಕೇವಲ ಶಾಸಕನಾಗಿ ಮತ್ತು ಸಾಮಾನ್ಯ ಪಕ್ಷದ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ. ನನಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಕಾರಣಕ್ಕೆ ನಾನು ರಾಜೀನಾಮೆ ನೀಡುತ್ತಿಲ್ಲ, ಬದಲಿಗೆ ತಮಗೆ ನೀಡಿದ್ದ ಭರವಸೆಯನ್ನು ಉಲ್ಲಂಘಿಸಿರುವುದನ್ನು ಪ್ರತಿಭಟಿಸಿ ಈ ನಿರ್ಧಾರ ಕೈಗೊಂಡಿದ್ದೇನೆ” ಎಂದು ಸ್ಪಷ್ಟಪಡಿಸಿದ್ದರು.

ಸಚಿವ ಸಂಪುಟ ಪುನಾರಚನೆಯಾಗಿ ಕೆಲವೇ ದಿನಗಳು ಕಳೆಯುವಷ್ಟರಲ್ಲಿ, ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಮತ್ತು ಕೆ.ಎಚ್. ಮುನಿಯಪ್ಪ ಅವರ ಬಹಿರಂಗ ಅಸಮಾಧಾನವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು