ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯದಲ್ಲಿ ತೀವ್ರ ಬರಗಾಲ: ಪರಿಸ್ಥಿತಿ ನಿಭಾವಣೆಗೆ ₹635 ಕೋಟಿ ಮೀಸಲು, ಕೇಂದ್ರದ ನೆರವಿಗೆ ಡಾ. ಜಿ. ಪರಮೇಶ್ವರ್ ಆಗ್ರಹ

PPeepal Media

Peepal Media ರಾಜ್ಯ

• 2 ನಿಮಿಷದ ಓದು

ರಾಜ್ಯದಲ್ಲಿ ತೀವ್ರ ಬರಗಾಲ: ಪರಿಸ್ಥಿತಿ ನಿಭಾವಣೆಗೆ ₹635 ಕೋಟಿ ಮೀಸಲು, ಕೇಂದ್ರದ ನೆರವಿಗೆ ಡಾ. ಜಿ. ಪರಮೇಶ್ವರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ಈ ವರ್ಷ ಅಭೂತಪೂರ್ವ ಬರಗಾಲ ಪರಿಸ್ಥಿತಿ ತಲೆದೋರಿದ್ದು, ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಯಾವುದೇ ತೊಂದರೆಯಾಗದಂತೆ ನಿರ್ವಹಿಸಲು ರಾಜ್ಯ ಸರ್ಕಾರವು ಒಟ್ಟು 635 ಕೋಟಿ ರೂಪಾಯಿಗಳನ್ನು ವ್ಯಯಿಸುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸರ್ಕಾರದ ಬಳಿ ಹಣದ ಕೊರತೆಯಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಜೂನ್ 1 ರಿಂದ ಆಗಸ್ಟ್ 26 ರವರೆಗೆ ರಾಜ್ಯದಲ್ಲಿ ವಾಡಿಕೆ ಮಳೆಯಾದ 666 ಮಿ.ಮೀ ಬದಲಿಗೆ ಕೇವಲ 465 ಮಿ.ಮೀ ಮಳೆಯಾಗಿದ್ದು, ಶೇಕಡಾ 30 ರಷ್ಟು ಕೊರತೆ ದಾಖಲಾಗಿದೆ. 29 ಜಿಲ್ಲೆಗಳು ಮತ್ತು 190 ತಾಲೂಕುಗಳು ಮಳೆ ಕೊರತೆಯ ವ್ಯಾಪ್ತಿಯಲ್ಲಿದ್ದು, 12 ತಾಲೂಕುಗಳು ತೀವ್ರ ಮಳೆ ಕೊರತೆ ಎದುರಿಸುತ್ತಿವೆ. ಕೇಂದ್ರ ಸರ್ಕಾರದ ಬರ ಕೈಪಿಡಿ-2020 ರ ನಿಯಮಗಳ ಅನ್ವಯ, ಟ್ರಿಗರ್-1 ಮತ್ತು ಗ್ರೌಂಡ್-ಟ್ರೂತಿಂಗ್ ಪ್ರಕ್ರಿಯೆಯ ನಂತರ ಮೊದಲ ಹಂತದಲ್ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನುಳಿದ 32 ತಾಲೂಕುಗಳ ಪರಿಶೀಲನೆ ನಡೆಯುತ್ತಿದ್ದು, ಪ್ರತಿ 15 ದಿನಗಳಿಗೊಮ್ಮೆ ಪರಿಸ್ಥಿತಿಯನ್ನು ಪರಾಮರ್ಶಿಸಿ ಅಗತ್ಯವಿರುವ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗುವುದು ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರದ ಪ್ರಸ್ತುತ ಮಾನದಂಡಗಳಲ್ಲಿ ಹಲವು ನ್ಯೂನತೆಗಳಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಮಾನದಂಡಗಳನ್ನು ಪರಿಷ್ಕರಿಸುವಂತೆ ಪದೇ ಪದೇ ಕೋರಿದರೂ ಕೇಂದ್ರವು ಸ್ಪಂದಿಸಿಲ್ಲ ಎಂದರು. ಆಗಸ್ಟ್ 21 ರವರೆಗೆ ರಾಜ್ಯದಲ್ಲಿ ಕೇವಲ ಶೇ. 71 ರಷ್ಟು (60 ಲಕ್ಷ ಹೆಕ್ಟೇರ್) ಮಾತ್ರ ಬಿತ್ತನೆಯಾಗಿದೆ. ಮಣ್ಣಿನಲ್ಲಿ ತೇವಾಂಶ ಕೊರತೆಯಿಂದಾಗಿ 178 ತಾಲೂಕುಗಳಲ್ಲಿ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿದೆ. 132 ತಾಲೂಕುಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದೆ.

ಕುಡಿಯುವ ನೀರಿನ ಪೂರೈಕೆಗಾಗಿ ಈಗಾಗಲೇ 306 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಪಿಡಿ (PD) ಖಾತೆಯಲ್ಲಿ 329 ಕೋಟಿ ರೂಪಾಯಿ ಲಭ್ಯವಿದ್ದು, ಬರ ನಿರ್ವಹಣೆಗೆ ಬಳಸಲು ಸೂಚಿಸಲಾಗಿದೆ. 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ಎಸ್‌ಡಿಆರ್‌ಎಫ್ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಬರಬೇಕಿರುವ 1,239 ಕೋಟಿ ರೂಪಾಯಿ ಪೈಕಿ ಮೊದಲ ಕಂತಿನ ₹450 ಕೋಟಿಯನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದರು. ಈ ತಿಂಗಳ ಅಂತ್ಯದ ವೇಳೆಗೆ ಕೇಂದ್ರಕ್ಕೆ ಅಧಿಕೃತ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದ ಅವರು, 2023 ರಂತೆ ಪರಿಹಾರ ಬಿಡುಗಡೆ ಮಾಡಲು ವಿಳಂಬ ಮಾಡಬಾರದು ಎಂದರು.

ಬರ ಪರಿಸ್ಥಿತಿಯ ನಡುವೆಯೂ ಫಸಲ್ ಬಿಮಾ ಯೋಜನೆಯಡಿ ದಾಖಲೆಯ 49 ಲಕ್ಷ ರೈತರು ನೋಂದಾಯಿಸಿಕೊಂಡಿದ್ದಾರೆ. ಮಳೆ ಕೊರತೆಯಿಂದ ಬಿತ್ತನೆ ಮಾಡಲಾಗದ ರೈತರು ‘ಬಿತ್ತನೆ ತಡೆಹಿಡಿಯಲಾದ’ (Prevented Sowing) ವಿಭಾಗದಡಿ ವಿಮಾ ಪರಿಹಾರ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಮಾಹಿತಿ ನೀಡಿದರು. ವಲಸೆ ತಡೆಯಲು ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.

ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ:

ನೇಪಾಳದ ನೈಸರ್ಗಿಕ ವಿಕೋಪದಲ್ಲಿ ಸಿಲುಕಿರುವ ಬೆಂಗಳೂರಿನ ಎಂಟು ಮಂದಿಯನ್ನು ರಕ್ಷಿಸಲು ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಂಡಿದೆ. ಯಾವುದೇ ಸಾವು-ನೋವು ಸಂಭವಿಸಿದ ವರದಿಯಾಗಿಲ್ಲ. ಸಂಕಷ್ಟದಲ್ಲಿರುವವರ ನೆರವಿಗಾಗಿ ಸಹಾಯವಾಣಿ (1070 / 080-22253707) ಆರಂಭಿಸಲಾಗಿದೆ. ಪರಿಸ್ಥಿತಿಯ ಮೇಲ್ವಿಚಾರಣೆಗಾಗಿ ಹಿರಿಯ ಅಧಿಕಾರಿಗಳನ್ನು ಕಠ್ಮಂಡುವಿಗೆ ಕಳುಹಿಸಲಾಗುವುದು ಹಾಗೂ ದೆಹಲಿಯ ರೆಸಿಡೆಂಟ್ ಕಮಿಷನರ್ ಮೂಲಕ ಅಗತ್ಯ ನೆರವು ಒದಗಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು