ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಂಗಳೂರು- ಉಡುಪಿ ಜಿಲ್ಲೆಗಳಲ್ಲಿ ಜನವರಿ 17ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ-2025

MMurali Maluru

Murali Maluru • ರಾಜ್ಯ

• 1 ನಿಮಿಷದ ಓದು

ಮಂಗಳೂರು- ಉಡುಪಿ ಜಿಲ್ಲೆಗಳಲ್ಲಿ ಜನವರಿ 17ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ-2025

ಕರ್ನಾಟಕ ಕ್ರೀಡಾಕೂಟ -2025 ವ್ಯವಸ್ಥಿತ ನಿರ್ವಹಣೆಗೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು ಡಿ 23- ಕರ್ನಾಟಕ ಕ್ರೀಡಾಕೂಟ-2025  ಅನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು ವ್ಯವಸ್ಥಿತ ಏರ್ಪಾಡುಗಳನ್ನು ಮಾಡಲು ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಕರ್ನಾಟಕ ಕ್ರೀಡಾಕೂಟ -2025   ವನ್ನು  ಜನವರಿ 17ರಿಂದ  23ರವರೆಗೆ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ.

ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ಜನವರಿ 17ರಂದು  ಮಂಗಳೂರಿನಲ್ಲಿ ನಡೆಯಲಿದ್ದು ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭ ಉಡುಪಿ ಜಿಲ್ಲೆಯಲ್ಲಿ ನಡೆಯಲಿದ್ದು ಗೃಹ ಸಚಿವರು ಭಾಗಿಯಾಗಲಿದ್ದಾರೆ.
     ಸುಮಾರು 25 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳನ್ನು  ಆಯೋಜಿಸುತ್ತಿದ್ದು  ಕ್ರೀಡಾಕೂಟವನ್ನು ವ್ಯವಸ್ಥಿತವಾಗಿ ಆಯೋಜಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.
ಕ್ರೀಡಾಕೂಟದಲ್ಲಿ 3750 ಕ್ರೀಡಾಪಟುಗಳು ಹಾಗೂ 750 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರು ಸೇರಿದಂತೆ ಅಂದಾಜು 4500 ಜನರು ಭಾಗವಹಿಸಲಿದ್ದು ಊಟ -ತಿಂಡಿ,ವಸತಿ , ಸಾರಿಗೆ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳೂರಿನಲ್ಲಿ 12 ಕ್ರೀಡೆಗಳು ಹಾಗೂ ಉಡುಪಿ ಮತ್ತು ಮಣಿಪಾಲಗಳಲ್ಲಿ 11 ಕ್ರೀಡೆಗಳು ಆಯೋಜನೆಗೊಳ್ಳಲ್ಲಿದ್ದು, ಶೂಟಿಂಗ್ ಮತ್ತು ಜಿಮ್ನಾಸ್ಟಿಕ್ ಕ್ರೀಡೆಗಳನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು.

ಕ್ರೀಡಾಕೂಟ ಲಾಂಛನ ಬಿಡುಗಡೆ
ಕರ್ನಾಟಕ ಕ್ರೀಡಾಕೂಟ-2025ರ ಲಾಂಛನ ಬಿಡುಗಡೆಯನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನೆರವೇರಿಸಿದರು.
ಕ್ರೀಡಾಕೂಟದ ಲೋಗೋದಲ್ಲಿನ  ಯಕ್ಷಗಾನ ಕಿರೀಟವು ಕ್ರೀಡಾಕೂಟ ನಡೆಯುವ ಕರಾವಳಿ ಭಾಗದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು,
ತಿಳಿನೀಲಿ ಬಣ್ಣವು ಕಡಲಿನ ಅಗಾಧತೆಯನ್ನು ಜತೆಗೆ ಸೋಲು- ಗೆಲುವು ಗಳಲ್ಲಿ ಕ್ರೀಡಾಪಟುಗಳ ಶಾಂತತೆ ಮತ್ತು ಶ್ರಮವನ್ನು ಪ್ರತಿನಿಧಿಸುವುದಾಗಿ ಅಧಿಕಾರಿಗಳು ವಿವರಿಸಿದರು.
ಸಭೆಯಲ್ಲಿ ಗೃಹಸಚಿವರಾದ ಡಾ ಪರಮೇಶ್ವರ್, ಇಂಧನ ಸಚಿವರಾದ ಕೆ ಜೆ ಜಾರ್ಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು , ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಕೆ. ಗೋವಿಂದರಾಜು, ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದ

MMurali Maluru

Murali Maluru

Peepal Media · ರಾಜ್ಯ ವಿಭಾಗ

Murali MV is a Reporter at Peepal Media. An avid reader, he reports on Sports and Political issues.

ಸಂಬಂಧಿತ ಸುದ್ದಿಗಳು