ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೋವಿಡ್-19 ನಿರ್ವಹಣೆಯಲ್ಲಿನ ಅವ್ಯವಹಾರದ ತನಿಖೆ | ಕರ್ನಾಟಕ ಸರ್ಕಾರದಿಂದ ತನಿಖಾ ಆಯೋಗದ ಅವಧಿ ವಿಸ್ತರಣೆ

P

Peepal Media • ರಾಜ್ಯ

• 1 ನಿಮಿಷದ ಓದು

ಕೋವಿಡ್-19 ನಿರ್ವಹಣೆಯಲ್ಲಿನ ಅವ್ಯವಹಾರದ ತನಿಖೆ | ಕರ್ನಾಟಕ ಸರ್ಕಾರದಿಂದ ತನಿಖಾ ಆಯೋಗದ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ಸರ್ಕಾರವು ಕೋವಿಡ್-19 ನಿರ್ವಹಣೆ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ರಚಿಸಲಾಗಿರುವ ತನಿಖಾ ಆಯೋಗಗಳ ಅವಧಿಯನ್ನು ವಿಸ್ತರಿಸಿದೆ. ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ರಚಿತವಾದ ಈ ಆಯೋಗಗಳು ಗಂಭೀರ ಆರೋಪಗಳ ಕುರಿತು ತನಿಖೆ ನಡೆಸುತ್ತಿವೆ.

2021ರ ಜುಲೈ-ಆಗಸ್ಟ್‌ನಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಕೋವಿಡ್-19 ನಿರ್ವಹಣೆಗೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಇತರೆ ಸಂಸ್ಥೆಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿತ್ತು. ಇದರಲ್ಲಿ ಔಷಧಿ, ಉಪಕರಣಗಳ ಖರೀದಿ, ಆಮ್ಲಜನಕ ನಿರ್ವಹಣೆ, ಮತ್ತು ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳು ಸೇರಿವೆ.

ಈ ಆರೋಪಗಳನ್ನು ತನಿಖೆ ಮಾಡಲು ಸರ್ಕಾರವು 25 ಆಗಸ್ಟ್ 2023ರಂದು Commission of Inquiry Act 1952ರ ಅಡಿಯಲ್ಲಿ ಶ್ರೀ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಚಿಸಿತ್ತು.

ದಿನಾಂಕ 04 ಜೂನ್ 2025 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್.ಸಿ.ಬಿ. ತಂಡದ ಅಭಿನಂದನಾ ಸಮಾರಂಭದ ವೇಳೆ ಉಂಟಾದ ಕಾಲ್ತುಳಿತದಿಂದ ಸಾವು-ನೋವುಗಳು ಸಂಭವಿಸಿದೆ. ಈ ಘಟನೆಯ ತನಿಖೆಗಾಗಿ ಸರ್ಕಾರವು 05 ಜೂನ್ 2025 ರಂದು ಶ್ರೀ ಜಾನ್ ಮೈಕಲ್ ಕುನ್ಹಾ ಇವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಿದೆ. ಈ ತನಿಖೆಯ ತುರ್ತು ಸ್ವರೂಪವನ್ನು ಗಮನದಲ್ಲಿಟ್ಟುಕೊಂಡು, ಒಂದು ತಿಂಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಘಟನೆಗೆ ಆದ್ಯತೆ ನೀಡಿರುವ ಕಾರಣ, ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಸಂಭವಿಸಿದ ಸಾವುಗಳಿಗೆ ಸಂಬಂಧಿಸಿದ ತನಿಖೆಯ ಅವಧಿಯನ್ನು ಒಂದು ತಿಂಗಳಿಗೆ ವಿಸ್ತರಿಸಲಾಗಿದೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version