ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾಲ್ತುಳಿತ ದುರಂತ: ಹೈಕೋರ್ಟ್ ಮೆಟ್ಟಿಲೇರಿದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಕಾಲ್ತುಳಿತ ದುರಂತ: ಹೈಕೋರ್ಟ್ ಮೆಟ್ಟಿಲೇರಿದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್‌ಸಿಬಿ ತಂಡದ ಐಪಿಎಲ್ ವಿಜಯೋತ್ಸವ ಸಂಭ್ರಮಾಚರಣೆಯ ಸಂದರ್ಭದಲ್ಲಿ ಜೂನ್ 4ರಂದು ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಮೃತಪಟ್ಟು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದೆ.

ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕೆಎಸ್‌ಸಿಎ, ಆರ್‌ಸಿಬಿ ಸಂಸ್ಥೆ ಮತ್ತು ಕಾರ್ಯಕ್ರಮ ಆಯೋಜಕರಾದ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ಜಾರಿಗೊಳಿಸಿ, ಎಫ್‌ಐಆರ್ ದಾಖಲಿಸಿತ್ತು. ಈ ಕ್ರಮವನ್ನು ಪ್ರಶ್ನಿಸಿ ಕೆಎಸ್‌ಸಿಎ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಕೆಎಸ್‌ಸಿಎ ತನ್ನ ಅರ್ಜಿಯಲ್ಲಿ, “ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಮತ್ತು ಆರ್‌ಸಿಬಿ ಸಂಸ್ಥೆ ಹೊತ್ತಿತ್ತು. ಕೆಎಸ್‌ಸಿಎ ಕೇವಲ ಸ್ಥಳವನ್ನು ಒದಗಿಸಿದ್ದು, ಜನಸಂದಣಿ ನಿರ್ವಹಣೆ ಮತ್ತು ಸುರಕ್ಷತಾ ವ್ಯವಸ್ಥೆಯ ಜವಾಬ್ದಾರಿ ಪೊಲೀಸ್ ಇಲಾಖೆ ಮತ್ತು ಆಯೋಜಕರದ್ದಾಗಿತ್ತು” ಎಂದು ವಾದಿಸಿದೆ.

ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ರದ್ದುಗೊಳಿಸುವಂತೆ ಮತ್ತು ಸಿಐಡಿ ತನಿಖೆಯಿಂದ ತಮ್ಮನ್ನು ಮುಕ್ತಗೊಳಿಸುವಂತೆ ಕೆಎಸ್‌ಸಿಎ ಕೋರಿದೆ.

ರಾಜ್ಯ ಸರ್ಕಾರವು ಈ ಘಟನೆಗೆ ಸಂಬಂಧಿಸಿದಂತೆ ಗಂಭೀರ ಕ್ರಮಗಳನ್ನು ಕೈಗೊಂಡಿದೆ. ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಜಸ್ಟೀಸ್ ಮೈಕೆಲ್ ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದ್ದು, 30 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಜೊತೆಗೆ, ಘಟನೆಯ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್, ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ, ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ. ದಯಾನಂದ ಅವರನ್ನು ಅಮಾನತ್ತುಗೊಳಿಸಲಾಗಿದೆ.

ಆದರೆ, ಸರ್ಕಾರದ ಮೂಲಗಳ ಪ್ರಕಾರ, ಕೆಎಸ್‌ಸಿಎ ಕೇವಲ ಸ್ಥಳ ಒದಗಿಸಿದ್ದು ಎಂಬ ವಾದವನ್ನು ಸರ್ಕಾರ ಸ್ವೀಕರಿಸಿಲ್ಲ. “ಕೆಎಸ್‌ಸಿಎ ಸ್ಥಳದ ಮಾಲೀಕರಾಗಿದ್ದು, ಕಾರ್ಯಕ್ರಮದ ಸುರಕ್ಷತಾ ವ್ಯವಸ್ಥೆಯಲ್ಲಿ ಪಾತ್ರವಹಿಸುವ ಜವಾಬ್ದಾರಿ ಅದಕ್ಕೂ ಇತ್ತು. ಅವರೊಂದಿಗೆ ಆರ್‌ಸಿಬಿ ಮತ್ತು ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಸಹ ಸಮನ್ವಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದವು” ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು