ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಿಡಬ್ಲ್ಯೂಆರ್‌ಸಿ ಆದೇಶ: ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ ಸರ್ಕಾರ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಿಡಬ್ಲ್ಯೂಆರ್‌ಸಿ ಆದೇಶ: ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ ಸರ್ಕಾರ

ತಮಿಳುನಾಡಿಗೆ ಬುಧವಾರದಿಂದ ಆರಂಭವಾಗುವಂತೆ ಮುಂದಿನ 15 ದಿನಗಳ ಕಾಲ ಕಾವೇರಿ ನದಿಯಿಂದ ದಿನಪ್ರತಿ 3,500 ಕ್ಯೂಸೆಕ್ ನೀರನ್ನು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಂಗಳವಾರ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಆದರೆ, ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರ ಕುಸಿದಿದ್ದು, ಕುಡಿಯುವ ನೀರಿನ ಅಭಾವವಿರುವುದರಿಂದ ಈ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಜುಲೈ 29 ರ ಬೆಳಿಗ್ಗೆ 8 ಗಂಟೆಯಿಂದ ಬಿಲಿಗುಂಡ್ಲು ಜಲಮಾಪನ ಕೇಂದ್ರದಲ್ಲಿ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಯುವಂತೆ ನೋಡಿಕೊಳ್ಳಲು ಸಿಡಬ್ಲ್ಯೂಆರ್‌ಸಿ ಕರ್ನಾಟಕಕ್ಕೆ ಸೂಚಿಸಿದೆ.

ಜುಲೈ 27 ರ ವೇಳೆಗೆ ಬಿಲಿಗುಂಡ್ಲುವಿಗೆ ಹರಿದುಬರುತ್ತಿದ್ದ ನೀರು ಕೇವಲ 176 ಕ್ಯೂಸೆಕ್ ಆಗಿದ್ದರೆ, ಕೃಷ್ಣರಾಜ ಸಾಗರ (KRS) ಮತ್ತು ಕಬಿನಿ ಜಲಾಶಯಗಳಿಂದ ಒಟ್ಟು ಹೊರಹರಿವು 1,822 ಕ್ಯೂಸೆಕ್ ಇತ್ತು.

ಅಂತರರಾಜ್ಯ ಜಲವಿವಾದಗಳಲ್ಲಿ ಕರ್ನಾಟಕದ ಕಾನೂನು ಸಲಹೆಗಾರರಾದ ಮೋಹನ್ ಕಾತರ್ಕಿ ಅವರು ಮಾತನಾಡಿ, ಈ ನಿರ್ದೇಶನವನ್ನು ಪಾಲಿಸಬೇಕಾದರೆ ಮಳೆ ಬೀಳುವ ಪ್ರಮಾಣವನ್ನು ಆಧರಿಸಿ ಕೆಆರ್‌ಎಸ್ ಮತ್ತು ಕಬಿನಿಯಿಂದ ಹೆಚ್ಚುವರಿಯಾಗಿ ಸುಮಾರು 4,500 ರಿಂದ 5,000 ಕ್ಯೂಸೆಕ್ ನೀರನ್ನು ಹರಿಸಬೇಕಾಗುತ್ತದೆ. ಇದರಿಂದ ಕರ್ನಾಟಕದ ಜಲಾಶಯಗಳಿಂದ ಸುಮಾರು 5.5 ಟಿಎಂಸಿ ನೀರು ಖಾಲಿಯಾಗಲಿದೆ ಎಂದು ವಿವರಿಸಿದ್ದಾರೆ.

ಸಭೆಯ ಸಮಯದಲ್ಲಿ ಕರ್ನಾಟಕವು ಈ ಆದೇಶವನ್ನು ತೀವ್ರವಾಗಿ ವಿರೋಧಿಸಿತು. ಜೂನ್ 1 ರಿಂದ ಜುಲೈ 27 ರವರೆಗೆ ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳಿಗೆ ಹರಿದುಬಂದಿರುವ ಒಟ್ಟು ನೀರು ಕಳೆದ 30 ವರ್ಷಗಳ ಸರಾಸರಿಗಿಂತ ಶೇ. 65.86 ರಷ್ಟು ಕಡಿಮೆಯಾಗಿದೆ ಎಂದು ಅಂಕಿಅಂಶ ಸಹಿತ ಪ್ರತಿಪಾದಿಸಿತು. ಪ್ರಸ್ತುತ ಲಭ್ಯವಿರುವ ನೀರು ಮುಂಬರುವ ತಿಂಗಳುಗಳಲ್ಲಿ ರಾಜ್ಯದ ಕುಡಿಯುವ ನೀರಿನ ಅಗತ್ಯವನ್ನು ಪೂರೈಸಲು ಮಾತ್ರ ಸಾಕಾಗುತ್ತದೆ ಎಂದು ಅಧಿಕಾರಿಗಳು ವಾದಿಸಿದರು.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮುಂದೆ ಸಿಡಬ್ಲ್ಯೂಆರ್‌ಸಿ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು ಮತ್ತು ಮರುಪರಿಶೀಲನೆಗೆ ಕೋರಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

“ನೈಋತ್ಯ ಮಾನ್ಸೂನ್ ಕೈಕೊಟ್ಟಿದ್ದರಿಂದ ರಾಜ್ಯವು ತೀವ್ರ ನೀರಿನ ಅಭಾವ ಎದುರಿಸುತ್ತಿದೆ. ಇಡೀ ವರ್ಷಕ್ಕೆ ರಾಜ್ಯದ ಜನರಿಗೆ ಕುಡಿಯುವ ನೀರನ್ನು ಒದಗಿಸುವುದೇ ನಮ್ಮ ಮೊದಲ ಆದ್ಯತೆಯಾಗಿದೆ” ಎಂದು ಸಚಿವರು ಹೇಳಿದ್ದಾರೆ.

ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಮಟ್ಟ ಆತಂಕಕಾರಿಯಾಗಿ ಕುಸಿದಿದೆ. ಸುಮಾರು 46 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆಆರ್‌ಎಸ್ ಜಲಾಶಯದಲ್ಲಿ ಪ್ರಸ್ತುತ ಕೇವಲ 16 ಟಿಎಂಸಿ ನೀರು ಮಾತ್ರ ಲಭ್ಯವಿದ್ದು, ಇದರಲ್ಲಿ ಸುಮಾರು 5 ಟಿಎಂಸಿ ಬಳಸಲಾಗದ ಡೆಡ್ ಸ್ಟೋರೇಜ್ ಆಗಿದೆ ಎಂದು ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಮುಂಬರುವ ವಾರಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇರುವುದರಿಂದ, ಕೆಆರ್‌ಎಸ್ ನೀರನ್ನು ನೆಚ್ಚಿಕೊಂಡು ಹೆಚ್ಚು ನೀರು ಬೇಡುವ ಬೆಳೆಗಳನ್ನು ಬೆಳೆಯದಂತೆ ಸರ್ಕಾರ ಈಗಾಗಲೇ ರೈತರಿಗೆ ಸಲಹೆ ನೀಡಿದ್ದು, ಕುಡಿಯುವ ನೀರನ್ನು ಉಳಿಸಲು ಹೆಚ್ಚಿನ ಗಮನ ಹರಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು