ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆ: ಸಚಿವ ಮಂಕಾಳ ಎಸ್. ವೈದ್ಯ

PPeepal Media

Peepal Media • ರಾಜ್ಯ

• 2 ನಿಮಿಷದ ಓದು

ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆ: ಸಚಿವ ಮಂಕಾಳ ಎಸ್. ವೈದ್ಯ

ಕಾರವಾರ, ನ.1 :- ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದ್ದು, ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಎಲ್ಲಾ ಕಚೇರಿಗಳಲ್ಲಿ ಹಾಗೂ ಸಾರ್ವಜನಿಕರು ವ್ಯವಹರಿಸುವ ಭಾಷೆಯಾಗಿ ಕೂಡಾ ಕನ್ನಡವನ್ನೇ ಬಳಸಲಾಗುತ್ತಿದ್ದು, ಕನ್ನಡ ಭಾಷೆಯ ಬೆಳವಣಿಗೆಗೆ ಸರ್ಕಾರವು ಎಲ್ಲಾ ರೀತಿಯ ಬೆಂಬಲ ನೀಡುತ್ತಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು.

ಅವರು ಶುಕ್ರವಾರ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ, ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ತನ್ನದೇ ಆದ ಸ್ಥಾನ ಮಾನ ಹೊಂದಿರುವುದರ ಜೊತೆಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿರುವುದು ಹೆಮ್ಮೆಯ ವಿಷಯವಾಗಿದೆ ಎಂದ ಅವರು, ಮೈಸೂರು ರಾಜ್ಯ ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು ಇಂದಿಗೆ 50 ವರ್ಷ ಪೂರ್ಣಗೊಂಡಿರುವ ಶುಭ ಸಂಧರ್ಭದಲ್ಲಿ ರಾಜ್ಯ ಸರ್ಕಾರವು ಕರ್ನಾಟಕ ಸಂಭ್ರಮ-50 ಹೆಸರಿನಲ್ಲಿ ವರ್ಷವಿಡಿ ರಾಜ್ಯಾದ್ಯಂತ ಕನ್ನಡ ತೇರನ್ನು ಎಳೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡದ ಪ್ರಪ್ರಥಮ ಶಾಸನವಾದ ಹಲ್ಮೀಡಿ ಶಾಸನದ ಪ್ರತಿಕೃತಿಯನ್ನು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಅನಾವರಣಗೊಳಿಸುವ ಮೂಲಕ ಕನ್ನಡವನ್ನು ಪಸರಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲಾ ವರ್ಗದ ಸಮುದಾಯಗಳಿಗೆ ಸಮಾನವಾಗಿ ಯೋಜನೆಗಳನ್ನು ತಲುಪಿಸುವ ಮೂಲಕ ಜನತೆ ನೆಮ್ಮದಿ ಜೀವನ ಸಾಗಿಸಲು ಹಾಗೂ ಆರ್ಥಿಕವಾಗಿ ಸಬಲರಾಗಲು ಸಹಕಾರಿಯಾಗಿದೆ. ಉಳ್ಳವರು ಆರ್ಥಿಕವಾಗಿ ಸಬಲರಾದವರು ತಮ್ಮ ಸ್ವ ಇಚ್ಛೆಯಿಂದ ಯೋಜನೆಗಳ ಲಾಭ ಪಡೆಯುವುದನ್ನು ಹಿಂದಿರುಗಿಸುವ ಮೂಲಕ ಅವಶ್ಯಕತೆ ಇರುವವರಿಗೆ ಯೋಜನೆಯ ಸದುಪಯೋಗ ಪಡೆಯಲು ಸಹಕರಿಸಬೇಕು ಎಂದ ಸಚಿವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಸುಮಾರು 2 ಸಾವಿರ ಕೋಟಿ ಗೂ ಅಧಿಕ ಮೊತ್ತವನ್ನು ಗ್ಯಾರಂಟಿ ಯೋಜನೆಯ ಮೂಲಕ ಫಲಾನುಭವಿಗಳಿಗೆ ತಲುಪಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಮೀನುಗಾರಿಕೆ ಉದ್ಯಮದ ಜೊತೆಗೆ ಜನರ ಜೀವನೋಪಾಯಕ್ಕಾಗಿ ಬಳಕೆಯಾಗುತ್ತಿದ್ದು, ಭಟ್ಕಳ ತಾಲೂಕಿನ ಅಳ್ವೆಕೋಡಿ, ತೆಂಗಿನಗುAಡಿ ಮೀನುಗಾರಿಕೆ ಇಳಿದಾಣ ಕೇಂದ್ರಗಳನ್ನು ಮೀನುಗಾರಿಕೆ ಬಂದರುಗಳಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಅಂಕೋಲಾ ತಾಲೂಕಿನ ಕೇಣಿಯಲ್ಲಿ PPP ಮಾದರಿಯಲ್ಲಿ ಬಂದರನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಪರಿಸರಕ್ಕೆ ಹಾನಿಯಾಗದಂತೆ ಎಲ್ಲರಿಗೂ ಅನುಕೂಲವಾಗುವ ರೀತಿಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ರಪ್ತು ಸಾಗಾಣಿಕೆ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಾರವಾರ ಬಂದರು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ವೇದಿಕೆ ಕಾರ್ಯಕ್ರಮದ ಪೂರ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಭುವನಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಜಿಲ್ಲಾಧಿಕಾರಿ ಕೆ. ಲಕ್ಮ್ಮಿಪ್ರಿಯಾ ವಿವಿಧ ಇಲಾಖೆಗಳ ಸ್ತಬ್ಧ ಚಿತ್ರ ಮೆರವಣಿಗೆಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ನಗರ ಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ್, ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ನಾರಾಯಣ ಎಂ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕನಿಷ್ಕ, ಕೋಸ್ಟ್ ಗಾರ್ಡ್ ಕಮಾಂಡರ್ ಕಿರಣ್ ಕುಮಾರ್ ಸಿನ್ಹಾ ಮತ್ತಿತರರು ಉಪಸ್ಥಿತರಿದ್ದರು.


ವಿವಿಧ ಇಲಾಖೆಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಿಬ್ಬಂದಿಗಳನ್ನು ಹಾಗೂ ವಿವಿಧ ಕ್ಷೆತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು.

ಪೊಲೀಸ್, ಅರಣ್ಯ, ಗೃಹ ರಕ್ಷಕ ದಳ, ಎನ್.ಸಿ.ಸಿ, ಸ್ಕೌಟ್ಸ್ ಅಂಡ್ ಗೈಡ್ಸ್, ಸೇವಾದಳ, ತಂಡಗಳಿAದ ಆಕರ್ಷಕÀ ಪಥ ಸಂಚಲನ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ನಾಡಿನ ಕಲೆ ಸಾಹಿತ್ಯ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು