ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸುಪ್ರೀಂಕೋರ್ಟ್ ಮುಂದೆ CWMA ಆದೇಶಕ್ಕೆ ನಾವು ತಡೆಯಾಜ್ಞೆ ಕೇಳುತ್ತೇವೆ: ಮುಖ್ಯಮಂತ್ರಿ

PPeepal Media Desk

Peepal Media Desk ರಾಜ್ಯ

• 2 ನಿಮಿಷದ ಓದು

ಸುಪ್ರೀಂಕೋರ್ಟ್ ಮುಂದೆ CWMA ಆದೇಶಕ್ಕೆ ನಾವು ತಡೆಯಾಜ್ಞೆ ಕೇಳುತ್ತೇವೆ: ಮುಖ್ಯಮಂತ್ರಿ

ಬೆಂಗಳೂರು ಸೆ 20: ಸಂಕಷ್ಟ ಸೂತ್ರ ಸಿದ್ದವಾಗದೇ ಇರುವುದರಿಂದ ಕಾವೇರಿ ನೀರು ಹಂಚಿಕೆ ಎನ್ನುವುದು ನಮ್ಮ ರಾಜ್ಯಕ್ಕೆ ಕ್ಲಿಷ್ಟಕರವಾಗಿ ಪರಿಣಮಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಸಂಬಂಧ ದೆಹಲಿಯಲ್ಲಿ ನಡೆಯುತ್ತಿರುವ ಕೇಂದ್ರದ ಸಚಿವರು, ಸರ್ವ ಪಕ್ಷ ಸಂಸತ್ ಸದಸ್ಯರ ಸಭೆಯಲ್ಲಿ ಮುಖ್ಯಮಂತ್ರಿಗಳು ಪ್ರಾಸ್ತಾವಿಕವಾಗಿ ಮಾತನಾಡಿದರು.

ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ. ಬಿಡಲು ನಮ್ಮಲ್ಲಿ ನೀರೇ ಇಲ್ಲ. ಕನ್ನಡ ನಾಡು, ನುಡಿ, ಜಲ, ಭೂಮಿ, ಭಾಷೆ, ಸಂಸ್ಕೃತಿ ಕಾಪಾಡುವ ವಿಚಾರದಲ್ಲಿ ಪಕ್ಷ ರಾಜಕಾರಣ ಪಕ್ಕಕ್ಕಿಟ್ಟು ನಾವೆಲ್ಲಾ ಒಂದು ಧ್ವನಿಯಾಗಿ, ಗಟ್ಟಿಯಾಗಿ ನಿಲ್ಲಬೇಕು.

ನಮಗೆ ಈಗ ಕುಡಿಯುವ ನೀರಿಗೆ 33 ಟಿಎಂಸಿ, ಬೆಳೆ ರಕ್ಷಣೆಗೆ 70 ಟಿಎಂಸಿ, ಕೈಗಾರಿಕೆಗಳಿಗೆ 3 ಟಿಎಂಸಿ ಸೇರಿ ಒಟ್ಟು 106 ಟಿಎಂಸಿ ನೀರು ನಮಗೆ ಅನಿವಾರ್ಯ. ಈಗ ನಮ್ಮ ಬಳಿ ಇರುವುದು 53 ಟಿಎಂಸಿ ನೀರು ಮಾತ್ರ. ಹೀಗಾಗಿ ತಮಿಳುನಾಡಿಗೆ ಬಿಡಲು ನೀರೇ ಇಲ್ಲ.

ನಮಗೆ ಆಗಸ್ಟ್ ಬಳಿಕ ಮಳೆ ಬರಲ್ಲ. ತಮಿಳುನಾಡಿಗೆ ಆಗಸ್ಟ್ ಬಳಿಕದ ಮಳೆ ಬರುತ್ತದೆ. ಅಲ್ಲಿ ಅಂತರ್ಜಲ ಕೂಡ ಹೆಚ್ಚಿದೆ. ಆದ್ದರಿಂದ ನಾವು ಹೆಚ್ಚು ಸಂಕಷ್ಟದಲ್ಲಿದ್ದೇವೆ.

ಈ ಪರಿಸ್ಥಿತಿಯನ್ನು ನಮ್ಮ ಕಾನೂನು ತಂಡ ಮತ್ತು ತಜ್ಞ ಹಾಗೂ ಅಧಿಕಾರಿಗಳ ತಂಡ CWMC ಎದುರು ಸಮರ್ಥವಾಗಿ ವಾದ ಮಂಡಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶದ ಪ್ರಕಾರ 108.4 ಟಿಎಂಸಿ ನೀರನ್ನು ನಾವು ಬಿಡಬೇಕಿತ್ತು. ಆದರೆ ನಾವು ಬಿಟ್ಟಿರುವುದು 39.8 ಟಿಎಂಸಿ ನೀರು ಮಾತ್ರ. ಏಕೆಂದರೆ ನಮ್ಮಲ್ಲಿ ನೀರೇ ಇಲ್ಲ. ಆದ್ದರಿಂದ ನಮಗೆ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ.

ಇಂಥಾ ಪರಿಸ್ಥಿತಿ ಎದುರಾದಾಗ ಸಮರ್ಥವಾಗಿ ಜನರ ಹಿತ ಕಾಪಾಡಲು ಮೇಕೆದಾಟು ನಮಗೆ ಅನಿವಾರ್ಯ. ಆದ್ದರಿಂದ ನಮ್ಮ ನೀರನ್ನು, ನಮ್ಮ ಜಾಗದಲ್ಲಿ ಬಳಸಿಕೊಳ್ಳಲು, ಸಂಗ್ರಹಿಸಿಕೊಳ್ಳಲು, ವಿದ್ಯುತ್ ಉತ್ಪಾದಿಸಿಕೊಳ್ಳಲು ಮೇಕೆದಾಟು ನಮಗೆ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಇಂಥಾ ಪರಿಸ್ಥಿತಿಗೆ ಮೇಕೆದಾಟು ಪರಿಹಾರ ಆಗುತ್ತದೆ ಎಂದರು.

ಈಗಾಗಲೇ ನಾವು ಕೇಂದ್ರ ನೀರಾವರಿ ಸಚಿವರಿಗೆ ಎರಡು ಬಾರಿ ಪತ್ರ ಬರೆದು ಪರಿಸ್ಥಿತಿಯನ್ನು ಸಮಗ್ರವಾಗಿ ವಿವರಿಸಿದ್ದೇವೆ. ಸರ್ವ ಪಕ್ಷ ನಿಯೋಗದೊಂದಿಗೆ ಭೇಟಿ ಮಾಡಲು ಕೇಂದ್ರದ ಜಲ ಶಕ್ತಿ ಸಚಿವರು ಹಾಗೂ ಪ್ರಧಾನಿ ಅವರ ಸಮಯ ಕೇಳಿದ್ದೇವೆ.

ಹೀಗಾಗಿ ಮುಂದೆ ನಾವು ಇಡಬೇಕಾದ ಹೆಜ್ಜೆಗಳ ಕುರಿತು ವೈಜ್ಞಾನಿಕ ಸಂಗತಿಗಳ ಆಧಾರದಲ್ಲಿ ಚರ್ಚಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಖಾತೆ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಪ್ರಸ್ತುತ ರಾಜ್ಯಕ್ಕೆ ಎದುರಾಗಿರುವ ಸಂದರ್ಭವನ್ನು ಆರಂಭದಲ್ಲಿ ಸಭೆಗೆ ವಿವರಿಸಿದರು.

ರಾಜ್ಯದ ಹಿತಾಸಕ್ತಿ ಬಂದಾಗ ರಾಜಕಾರಣ ಮುಂದಕ್ಕೆ ಬರಬಾರದು. ಎಲ್ಲ ಸಂಸದರು, ರಾಜ್ಯ ಸಭಾ ಸದಸ್ಯರು ಒಟ್ಟಾಗಿ ನಿಂತು ರಾಜ್ಯದ ಪರವಾಗಿ ದೆಹಲಿಯಲ್ಲಿ, ಕೇಂದ್ರ ಸಚಿವರ ಎದುರು ಬೇಡಿಕೆ ಮಂಡಿಸಬೇಕು.

ನಮ್ಮ ಅಧಿಕಾರಿಗಳು, ತಜ್ಞರು ಮತ್ತು ಕಾನೂನು ತಂಡ ಸಮರ್ಥವಾಗಿ ವಾಸ್ತವ ಪರಿಸ್ಥಿತಿಯನ್ನು CWMA ನಲ್ಲೂ ಪ್ರಸ್ತುತ ಪಡಿಸಿದ್ದಾರೆ.

ನಮಗೆ ಕೇಂದ್ರದಿಂದಲೂ ಸಕಾರಾತ್ಮಕ ನೆರವು ದೊರಕುವ ನಿಟ್ಟಿನಲ್ಲಿ ಬೇಡಿಕೆ, ಒತ್ತಡಗಳನ್ನು ಮಂಡಿಸಬೇಕು.

ನಮಗೆ ಸಮಸ್ಯೆ ಬಗೆಹರಿದು ರಾಜ್ಯದ ಹಿತಾಸಕ್ತಿ ಕಾಪಾಡಿಕೊಳ್ಳುವುದಷ್ಟೆ ಮುಖ್ಯ. ಇದಕ್ಕಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ವಿನಂತಿಸಿದರು.

ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು “ತಮಿಳುನಾಡಿಗೆ ನೀರು ಬಿಡಬೇಕು ಎನ್ನುವ CWMA ಆದೇಶಕ್ಕೆ ನಾವು ಸುಪ್ರೀಂಕೋರ್ಟ್ ಮುಂದೆ ತಡೆಯಾಜ್ಞೆಗೆ ಮನವಿ ಮಾಡುತ್ತೇವೆ” ಎಂದು ಹೇಳಿದರು.

ನಿರ್ಮಲಾ ಸೀತಾರಾಮನ್ ಒಬ್ಬರನ್ನು ಹೊರತುಪಡಿಸಿ ರಾಜ್ಯದಿಂದ ಆಯ್ಕೆಯಾದ ಎಲ್ಲಾ ಸಂಸದರು, ಕೇಂದ್ರ ಸಚಿವರು ಸಭೆಯಲ್ಲಿ ಹಾಜರಿದ್ದರು. ನಿರ್ಮಲಾ ಸೀತಾರಾಮನ್ ಅವರು ಅನ್ಯಕಾರ್ಯ ನಿಮಿತ್ತ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ಅವರು ಮಾಹಿತಿ ನೀಡಿದರು.

ಸಂಕಷ್ಟದ ಸಮಯದಲ್ಲಿ ಎಷ್ಟು ನೀರು ಹರಿಸಬೇಕು ಎನ್ನುವುದರ ಕುರಿತು ಸರಿಯಾದ ಸೂತ್ರವಿಲ್ಲದಿರುವುದೇ ಈ ಬಿಕ್ಕಟ್ಟಿಗೆ ಕಾರಣವಾಗಿದೆಯೆಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು