ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ತಮಿಳುನಾಡಿಗೆ ನೀರು | ಜುಲೈ 14ರಂದು ಸರ್ವಪಕ್ಷ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ

P

Peepal Media • ರಾಜ್ಯ

• 1 ನಿಮಿಷದ ಓದು

ತಮಿಳುನಾಡಿಗೆ ನೀರು | ಜುಲೈ 14ರಂದು ಸರ್ವಪಕ್ಷ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜುಲೈ 12: ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಹಾಗೂ ರಾಜ್ಯದ ಮುಂದಿನ ನಡೆ ಏನು ಎಂಬ ಕುರಿತು ಜುಲೈ 14 ರಂದು ಸರ್ವಪಕ್ಷ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಈ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಮುನ್ಸೂಚನೆ ಇದ್ದರೂ ಈ ವರೆಗೆ ಶೇ. 28 ರಷ್ಟು ಒಳಹರಿವಿನ ಕೊರತೆ ಇದೆ. ಇದನ್ನು CWRC ಸ್ಪಷ್ಟವಾಗಿ ನಮ್ಮ ನಿಲುವನ್ನು ಹೇಳಿದ್ದೆವು. ಜೊತೆಗೆ ಜುಲೈ ಅಂತ್ಯದ ವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು. ಆದರೂ CWRC ಅವರು ಜುಲೈ 12 ರಿಂದ ಪ್ರತಿ ದಿನ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ.
ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಇಂದಿನ ಸಭೆಯಲ್ಲಿ ವ್ಯಕ್ತವಾಯಿತು ಎಂದರು.

ಜುಲೈ 14 ರಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಯಿತು. ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ. ಆದ್ದರಿಂದ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದರು.

ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯನ್ನು ತೀರ್ಮಾನಿಸಲಾಗುವುದು ಎಂದರು.

ಬಿಳಿಗುಂಡ್ಲುವಿನಲ್ಲಿ ಅಳತೆ ಮಾಡುವಾಗ, ಕಬಿನಿ ಅಣೆಕಟ್ಟಿನ ಒಳಹರಿವಿನಷ್ಟು ಕ್ಯೂಸೆಕ್ಸ್‌ನಷ್ಟು ನೀರನ್ನು ತಮಿಳು ನಾಡಿಗೆ ಬಿಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಕಾವೇರಿ ಜಲಾನಯನ ಪ್ರದೇಶದ ಎಲ್ಲಾ 4 ಜಲಾಶಯಗಳಲ್ಲಿ ಒಟ್ಟು ಕೇವಲ 60 ಟಿಎoಸಿ ನೀರು ಲಭ್ಯವಿದೆ. ಕೃಷಿ ಚಟುವಟಿಕೆಗಳಿಗೂ ನಾವು ನೀರು ಒದಗಿಸಬೇಕಾಗಿದೆ. ಮಳೆ ಕೊರತೆಯನ್ನು ಗಮನದಲ್ಲಿರಿಸಿ ಜುಲೈ ಅoತ್ಯದವರೆಗೆ ಕಾಯಲು ಮನವಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version