ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾಂಗ್ರೆಸ್‌ ರೀತಿ ತೆರಿಗೆ ವಿಧಿಸುವ ಹಾಗಿದ್ದಿದ್ದರೆ ನಾನು ಮಹಿಳೆಯರಿಗೆ ತಿಂಗಳಿಗೆ 5,000 ಕೊಡುತ್ತಿದ್ದೆ – ಕುಮಾರಸ್ವಾಮಿ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಕಾಂಗ್ರೆಸ್‌ ರೀತಿ ತೆರಿಗೆ ವಿಧಿಸುವ ಹಾಗಿದ್ದಿದ್ದರೆ ನಾನು ಮಹಿಳೆಯರಿಗೆ ತಿಂಗಳಿಗೆ 5,000 ಕೊಡುತ್ತಿದ್ದೆ – ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಸರಕಾರದ ತೆರಿಗೆ ವಿಧಾನದಿಂದ ರಾಜ್ಯದ ಖಜಾನೆಗೆ ಹೆಚ್ಚಿನ ಹಣ ಬಂದಿದ್ದರೆ, ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಈಗ ನೀಡುತ್ತಿರುವ 2,000 ರೂ. ಬದಲಿಗೆ 5,000 ರೂ. ನೀಡಬಹುದಿತ್ತು. ಇದನ್ನು ಆಡಳಿತ ಎನ್ನಬಹುದೇ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಸರಕಾರವನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಆಡಳಿತದ ಕಳಪೆ ಸ್ಥಿತಿಯನ್ನು ಎಲ್ಲರೂ ಕಾಣುತ್ತಿದ್ದೇವೆ. ಕಳೆದ ಎರಡು ವರ್ಷಗಳಲ್ಲಿ ಕೆಪಿಎಸ್‌ಸಿ ಎಷ್ಟು ನೇಮಕಾತಿಗಳನ್ನು ಮಾಡಿದೆ? ಅದರಲ್ಲಿ ಎಂತಹ ಅಕ್ರಮಗಳು ನಡೆದಿವೆ? “ಅವ್ಯವಸ್ಥೆಯನ್ನು ಸರಿಪಡಿಸುತ್ತೇವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಆದರೆ, ಯಾವುದೇ ಸುಧಾರಣೆ ಆಗದೆ, ಕೊಳೆಯೇ ಕೊಳೆಯಾಗಿ ಉಳಿದಿದೆ ಎಂದು ಕುಮಾರಸ್ವಾಮಿ ಟೀಕಿಸಿದರು.

ಜಾತಿಗಣತಿ ವರದಿಯನ್ನು ಸ್ವೀಕರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಆರೋಪ ಮಾಡಿದ್ದಾರೆ. “ಕುಮಾರಸ್ವಾಮಿ ಅಂದಿನ ಸಚಿವ ಪುಟ್ಟರಂಗಶೆಟ್ಟಿಯನ್ನು ಭಯಪಡಿಸಿದ್ದರು” ಎಂದು ಹೇಳಿದ್ದಾರೆ. “ನೀವು ಎರಡು ವರ್ಷಗಳಿಂದ ಅಧಿಕಾರದಲ್ಲಿದ್ದೀರಿ. ಜಾತಿಗಣತಿ ವರದಿಯನ್ನು ಜಾರಿಗೆ ತರದಿರಲು ಯಾರು ತಡೆದಿದ್ದಾರೆ? ಯಾಕೆ ವರದಿಯನ್ನು ಅಂಗೀಕರಿಸಲಿಲ್ಲ?” ಎಂದು ಅವರು ಪ್ರಶ್ನಿಸಿದರು. “ಕಾವೇರಿ ಆರತಿಗೆ 100 ಕೋಟಿ ರೂ. ಖರ್ಚು ಮಾಡುವ ಈ ಸರಕಾರ, ಜನರಿಗೆ ಏನು ಕೊಟ್ಟಿದೆ? ಎಚ್‌ಎಂಟಿ ಜಮೀನು ಲೂಟಿಯಾದದ್ದು ಯಾರಿಂದ? ಈಗ ಅದನ್ನು ವಾಪಸ್ ತೆಗೆದುಕೊಳ್ಳುವ ಧೈರ್ಯ ಇದೆಯೇ?” ಎಂದು ಕುಮಾರಸ್ವಾಮಿ ಕಿಡಿಕಾರಿದರು.

ವಿಪಕ್ಷ ಚುರುಕಾಗಿರಲಿ
ವಿಧಾನಸೌಧದಲ್ಲಿ ವಿಪಕ್ಷಗಳು ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದು ಕುಮಾರಸ್ವಾಮಿ ಪರೋಕ್ಷವಾಗಿ ಸೂಚಿಸಿದರು. “ನಾನು ಈ ಸಂದರ್ಭದಲ್ಲಿ ಸದನದಲ್ಲಿದ್ದರೆ, ಸರಕಾರಕ್ಕೆ ತಕ್ಕ ಪಾಠ ಕಲಿಸುತ್ತಿದ್ದೆ. ಚರ್ಚೆಗೆ ಎಷ್ಟೊಂದು ವಿಷಯಗಳಿವೆ!” ಎಂದು ಅವರು ಹೇಳಿದರು.

ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ

ಬಿಜೆಪಿ-ಜೆಡಿಎಸ್ ಮೈತ್ರಿಯ ಬಗ್ಗೆ ಕೆಲವರು ತಪ್ಪು ಪ್ರಚಾರ ಮಾಡುತ್ತಿದ್ದಾರೆ. “ಯಾವುದೇ ಗೊಂದಲಕ್ಕೆ ಒಳಗಾಗಬೇಡಿ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ, ಮತ್ತು ಬಿ.ಎಲ್. ಸಂತೋಷ್ ಅವರು ನನಗೆ ಸಂಪೂರ್ಣ ಗೌರವ ನೀಡುತ್ತಿದ್ದಾರೆ. ಸ್ಥಳೀಯವಾಗಿ ಕೆಲವರು ಮಾತನಾಡುವುದನ್ನು ಗಂಭೀರವಾಗಿ ತೆಗೆದುಕೊಳ್ಳಬೇಡಿ. ಮೈತ್ರಿಯಿಂದ ಸೀಟು ಗೆಲ್ಲುವ ಜವಾಬ್ದಾರಿ ನನ್ನದು. ಆದರೆ, ಕ್ಷೇತ್ರದಲ್ಲಿ ನಮ್ಮ ಶಕ್ತಿಯೇ ಮುಖ್ಯ. ಆ ಶಕ್ತಿಯನ್ನು ಕಾರ್ಯಕರ್ತರು ಒದಗಿಸಬೇಕು. ಒಗ್ಗಟ್ಟಿನಿಂದ ಗೌರವಯುತ ರಾಜಕೀಯ ಮಾಡೋಣ” ಎಂದು ಕುಮಾರస್ವಾಮಿ ಕಾರ್ಯಕರ್ತರಿಗೆ ಕರೆ ನೀಡಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು