ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ರಾಷ್ಟ್ರೀಯ ಹೆದ್ದಾರಿ 75 ಭೂ ಕುಸಿತ ಮಳೆಗಾಲ ಸಮಿಪಿಸುತ್ತಿದೆ ಮುನ್ನೆಚ್ಚರಿಕಾ ಕ್ರಮ ವಹಿಸಿ – ಶ್ರೇಯಸ್‌ ಪಟೇಲ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 2 ನಿಮಿಷದ ಓದು

ರಾಷ್ಟ್ರೀಯ ಹೆದ್ದಾರಿ 75 ಭೂ ಕುಸಿತ ಮಳೆಗಾಲ ಸಮಿಪಿಸುತ್ತಿದೆ ಮುನ್ನೆಚ್ಚರಿಕಾ ಕ್ರಮ ವಹಿಸಿ – ಶ್ರೇಯಸ್‌ ಪಟೇಲ್

ಸಂಸದರಿದ ರಾಷ್ಟ್ರೀಯ ಹೆದ್ದಾರಿ 75 ರ ಕಾಮಗಾರಿ ವಿವಿಧ ಸ್ಥಳಗಳ ಪರಿಶೀಲನೆ

ಹಾಸನ : ಮಳೆಗಾಲ ಸಮಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕೆಲವು ಭಾಗದಲ್ಲಿ ಭೂ ಕುಸಿತ ಆಗುವ ಸಂಭವವಿರುವುದರಿಂದ ತಡೆಗೋಡೆ ನಿರ್ಮಾಣದ ಜೋತೆಗೆ ಅಗತ್ಯವಿರುವ ಕಡೆ ಭೂಸ್ವಾಧೀನಕ್ಕೆ ಕ್ರಮವಹಿಬೇಕಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಈಗಾಗಲೇ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ವಿಶೇಷ ಭೂಸ್ವಾಧಿನಾಧಿಕಾರಿ, ಎನ್ ಹೆಚ್ 75 ಯೋಜನಾ ನಿರ್ದೇಶಕರು ವಿವಿಧ ಸ್ಥಳಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂದು ಸಂಸದರಾದ ಶ್ರೇಯಸ್ ಎಂ ಪಟೇಲ್ ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ರಸ್ತೆ ಕಾಮಗಾರಿಗಳನ್ನು ಇಂದು ಪರಿಶೀಲಿಸಿ ನಂತರ ಮಾಧ್ಯಮದರೊಂದಿಗೆ ಮಾತನಾಡಿದ ಅವರು ಅಧಿಕಾರಿಗಳು ಸ್ಥಳ ಪರಿಶೀಲನೆಯ ನಂತರ ಒಂದು ತಿಂಗಳ ವರೆಗೆ ರಸ್ತೆಗೆ ಪರ್ಯಾಯ ಮಾರ್ಗ ಮಾಡಿದ್ದೇವೆ ಎಂದು ಹೇಳಿದ್ದಾರೆ, ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳುತ್ತದೆ ಎಂದರು.

ಮುಂದಿನ 2-3 ತಿಂಗಳಲ್ಲಿ ಮಳೆಗಾಲ ಶುರುವಾಗಲಿದೆ. ಹಿಂದೆ ಎಲ್ಲೆಲ್ಲಿ ಭೂ ಕುಸಿತ ಉಂಟಾಗಿದ್ದ ಕಡೆಗಳಲ್ಲಿ ಏನೆಲ್ಲ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂಬುದರ ಬಗ್ಗೆ ಒಂದು ತಂಡವಾಗಿ ಪರಿಶೀಲನೆ ಮಾಡಿದ್ದೇವೆ ಎಂದರು.
ಎಲ್ಲೆಲ್ಲಿ ಸಮಸ್ಯೆ ಇದೆ, ಪರಿಹಾರ ಏನು ಎಂಬುದರ ಬಗ್ಗೆ ಅವಲೋಕನ ಮಾಡಿದ್ದೇವೆ. ಬರುವ ಜೂನ್ 30 ರೊಳಗೆ ಕಾಮಗಾರಿ ಮುಗಿಸುವ ಬಗ್ಗೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಶೇ.100 ರಷ್ಟು ಭರವಸೆ ನೀಡಿದ್ದಾರೆ. ಹೆಚ್ಚೆಂದರೆ ಮತ್ತೊಂದು ತಿಂಗಳು ಮುಂದಕ್ಕೆ ಹೋಗಬಹುದು. ಒಟ್ಟಿನಲ್ಲಿ ಮುಂದಿನ ಮರ‍್ನಾಲ್ಕು ತಿಂಗಳಲ್ಲಿ ಹೆದ್ದಾರಿ ಸಂಪೂರ್ಣ ಸಂಚಾರ ಮುಕ್ತವಾಗಲಿದೆ ಎಂದು ತಿಳಿಸಿದರು. ಮುಖ್ಯವಾಗಿ ಮಳೆಗಾಲದಲ್ಲಿ ದೊಡ್ಡತಪ್ಪಲು ಸೇರಿದಂತೆ ಕೆಲವು ಕಡೆ, ಭೂ ಕುಸಿತ ತಡೆಯಲು ಒತ್ತು ನೀಡಿದ್ದೇವೆ. ಹಿಂದೆ ಭೂ ಸ್ವಾಧೀನ ಮಾಡಿದವರ ಅವೈಜ್ಞಾನಿಕ ಕ್ರಮ ಹಾಗೂ ತಪ್ಪಿನಿಂದಾಗಿ ನೇರವಾಗಿ ಗುಡ್ಡ ಕಡಿದಿರುವುದರಿಂದ ಕೆಲವೆಡೆ ಕುಸಿತಕ್ಕೆ ಕಾರಣವಾಗಿದೆ. ಇದನ್ನು ತಡೆಯಲು ಇಳಿಜಾರಾಗಿ ಗುಡ್ಡ ಕತ್ತರಿಸಲು ಮತ್ತಷ್ಟು ಭೂ ಸ್ವಾಧೀನ ಮಾಡಬೇಕಿದೆ.

ಅದಕ್ಕೂ ಮುನ್ನ ಕಾಫಿಗಿಡ, ಮರಗಳಿಗೆ ಪರಿಹಾರ ಕೊಡಬೇಕಿದೆ. ಇನ್ನೂ ಎಷ್ಟು ಮೀಟರ್ ಭೂಮಿ ಬೇಕು ಎಂಬುದರ ಬಗ್ಗೆ ಕೂಡಲೇ ಕಾರ್ಯಪ್ರವೃತ್ತರಾಗಿ ವರದಿ ಸಿದ್ದಪಡಿಸಲು ಸೂಚಿಸಿದ್ದೇನೆ ಎಂದರು. ಈ ಮಾರ್ಗದಲ್ಲಿ ಆಗಬೇಕಿರುವ ಫ್ಲೈ ಓವರ್ ಕಾಮಗಾರಿಗೆ ಹಾಸನದ ಚನ್ನಪಟ್ಟಣ ಸರ್ಕಲ್, ರಾಜೀವ್ ಕಾಲೇಜು ಹಾಗೂ ಬಿಟ್ಟಗೋಡನಹಳ್ಳಿ ಬಳಿ ತಾಂತ್ರಿಕ ಸಮಸ್ಯೆ ಇದ್ದು, ಅದನ್ನು ಬಗೆಹರಿಸಿ ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದ ಸಂಸದರು, ಅಣಚಿಹಳ್ಳಿ ಫ್ಲೈ ಓವರ್ 1 ತಿಂಗಳಲ್ಲಿ, ಬೂವನಹಳ್ಳಿ ಬಳಿಯ ಫ್ಲೈ ಓವರ್ 3 ತಿಂಗಳಲ್ಲಿ ಸಂಚಾರಕ್ಕೆ ಲಭ್ಯವಾಗಲಿದೆ ಎಂದರು. ಸಕಲೇಶಪುರ ಬಳಿಯ ದೋಣಿಗಾಲ್ ಕ್ರಾಸ್‌ನಲ್ಲಿ ಕಾಕ್ರಿಂಟ್ ರಸ್ತೆ ಮಾಡಲು ರಸ್ತೆ ಬಂದ್ ಮಾಡಲು ಕೇಳಿದ್ದಾರೆ. ಬಂದ್ ಮಾಡುವ ಮುಂಚೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಪರ್ಯಾಯ ರಸ್ತೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ರಸ್ತೆ ಕಾಮಗಾರಿಗೆ ಸಂಬAದಿಸಿದAತೆ ಪ್ರಸ್ತಾವನೆ ಸಿದ್ದಪಡಿಸಿದ್ದು, ಸಂಬAಧಪಟ್ಟ ಮಂತ್ರಿ ಅವರಿಗೆ ಸಲ್ಲಿಸಿ 13 ಕೋಟಿ ಹಣ ಬಿಡುಗಡೆಗೆ ಮನವಿ ಮಾಡುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ಕಾಡಾನೆ ಸಮಸ್ಯೆ ಹೆಚ್ಚಾಗಿದೆ. 10 ದಿನದಲ್ಲಿ ಇಬ್ಬರು ಬಲಿಯಾಗಿದ್ದಾರೆ. ಸಾವಿಗೆ ನಾವು ಕೊಡುವ ಪರಿಹಾರ ಶಾಶ್ವತ ಅಲ್ಲ, ಅದು ಕ್ಷಣಕ, ಬದಲಾಗಿ ಶಾಶ್ವತ ಪರಿಹಾರ ಆಗಬೇಕು. ಅದನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಎರಡೂ ಸೇರಿ ಮಾಡಬೇಕು ಎಂದು ಹೇಳಿದರು. ಈ ವಿಚಾರದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿ ಇದೆ. ಸರ್ಕಾರ, ಜನಪ್ರತಿನಿಧಿಗಳು, ಸಚಿವರು ಒಟ್ಟುಗೂಡಿ ಕೆಲಸ ಮಾಡಬೇಕಿದೆ. ಪರಸ್ಪರ ಕುಳಿತು ಚರ್ಚಿಸಿ ಪರಿಹಾರ ಕ್ರಮ ಕೈಗೊಳ್ಳಬೇಕಿದೆ ಎಂದರು. ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ನಾನು ಮನವಿ ಮಾಡಿದ್ದೇನೆ. ಅಧಿವೇಶನದಲ್ಲೂ ಧ್ವನಿ ಎತ್ತಿದ್ದೇನೆ. ಆನೆಧಾಮ ನಿರ್ಮಾಣಕ್ಕೆ ಪ್ರಸ್ತಾಪನೆ ಸಿದ್ಧವಾಗಿದೆ. ಇದಕ್ಕಾಗಿ ರಾಜ್ಯ ಬಜೆಟ್‌ನಲ್ಲಿ ಎಷ್ಟು ಅನುದಾನ ನಿಗದಿ ಮಾಡುತ್ತಾರೋ ಎಂಬುದನ್ನು ನೋಡಿಕೊಂಡು ಕೇಂದ್ರಕ್ಕೂ ಒತ್ತಡ ಹಾಕುವುದಾಗಿ ತಿಳಿಸಿದರು. ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಇದರಲ್ಲಿ ರಾಜಕೀಯ ಬೇಡ, ಎಲ್ಲರೂ ಪಕ್ಷಾತೀತವಾಗಿ ಒಗ್ಗೂಡಿ ಕೆಲಸ ಮಾಡಬೇಕು. ಬಂದ್ ಅಥವಾ ಪ್ರತಿಭಟನೆ ಮಾಡುವುದು ಪರಿಹಾರವಲ್ಲ ಎಂದರು. ಪಕ್ಷಾತೀತವಾಗಿ ಎಲ್ಲರೂ ಕೇಂದ್ರದ ಬಳಿಗೆ ಹೋಗೋಣ, ಪ್ರಯತ್ನ ಎಲ್ಲರ ಕಡೆಯಿಂದ ಶೇ.100 ರಷ್ಟು ಇರಬೇಕು. ಇದಕ್ಕಾಗಿ ಎಲ್ಲರೂ ಕೈ ಜೋಡಿಸುವಂತೆ ಮನವಿ ಮಾಡಿದರು. ಹಾಗೆಯೇ ಮೃತರ ಕುಟುಂಬಕ್ಕೆ ಹಾಲಿ ನೀಡುತ್ತಿರುವ 15 ಲಕ್ಷ ಪರಿಹಾರವನ್ನು 25 ಲಕ್ಷ ಹೆಚ್ಚಿಸಬೇಕು ಎಂದು ಮನವಿ ಮಾಡಿದ್ದೇನೆ ಎಂದರು.

ಗುಜ್ಜನಹಳ್ಳಿಗೆ ಭೇಟಿ ನೀಡಿದಾಗ ಸ್ಥಳೀಯರು ಅನೇಕ ಸಮಸ್ಯೆ ಹೇಳಿಕೊಂಡಿದ್ದು, ನೂರು ಇನ್ನೂರು ಎಕರೆ ಜಮೀನಿನಲ್ಲಿ ಬೆಳೆ ಮಾಡಿರುವ ಬೆಳೆಗಾರರು ಅರಣ್ಯ ಟಾಸ್ಕ್ ಫೋರ್ಸ್ ಗುಂಪಿನಲ್ಲಿದ್ದಾರೆ, ಅವರು ದಯಮಾಡಿ ಆನೆಗಳು ಬರುತ್ತಿರುವುದು ತಿಳಿದ ತಕ್ಷಣ ತಮ್ಮ ಕಾರ್ಮಿಕರಿಗೆ ಹೇಳಬೇಕು, ಕಾರ್ಮಿಕರ ಕರೆದುಕೊಂಡು ಹೋಗಿ ಬರಬೇಕು, ಕೆಲಸದ ಸಮಯ ಬದಲಾಯಿಸಬೇಕು, ಪ್ಲಾಂಟರ್ಸ್ ಕೂಡಾ ಇದಕ್ಕೆ ಕೈ ಜೋಡಿಸಬೇಕು ಎಂದರು. ಉಪವಿಭಾಗಾಧಿಕಾರಿ ಡಾ. ಶೃತಿ, ಎನ್ ಹೆಚ್‌ಎಐ ಯೋಜನಾ ನಿರ್ದೇಶಕರಾದ ಪ್ರವೀಣ ಕುಮಾರ್ ಹಾಗೂ ಮತ್ತಿತರು ಹಾಜರಿದ್ದರು.

ವಿಷಯಗಳು: #news #peepal #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು