ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

“ದೇವನಹಳ್ಳಿ ಭೂ ಸಮಸ್ಯೆ” : ಮುಂದಿನ ಸಂಪುಟ ಸಭೆಯಲ್ಲಿ ಇದೇ ವಿಶೇಷ ಅಜೆಂಡಾವಾಗಲಿ : ಹೋರಾಟ ಸಮಿತಿ ಆಗ್ರಹ

PPeepal Media Desk

Peepal Media Desk ರಾಜ್ಯ, ವಿಶೇಷ

• 1 ನಿಮಿಷದ ಓದು

“ದೇವನಹಳ್ಳಿ ಭೂ ಸಮಸ್ಯೆ” : ಮುಂದಿನ ಸಂಪುಟ ಸಭೆಯಲ್ಲಿ ಇದೇ ವಿಶೇಷ ಅಜೆಂಡಾವಾಗಲಿ : ಹೋರಾಟ ಸಮಿತಿ ಆಗ್ರಹ

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೈಗಾರಿಕಾ ಉದ್ದೇಶದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸರ್ಕಾರದ ನಿಲುವನ್ನು ಪ್ರಶ್ನಿಸಿ, ಸಂಯುಕ್ತ ಹೋರಾಟ ಸಮಿತಿ, ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳು ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ನೀಡಿವೆ. ಅದರಂತೆ ಜುಲೈ 4 ರ ಮುಖ್ಯಮಂತ್ರಿಗಳ ಭೇಟಿಯಲ್ಲಿ ಸಕಾರಾತ್ಮಕ ಸ್ಪಂದನೆ ಸಿಗದೇ ಹೋದರೆ ಹೋರಾಟ ಇನ್ನಷ್ಟು ತೀವ್ರ ಸ್ವರೂಪ ಪಡೆಯಲಿದೆ ಎಂದು ಸಮಿತಿ ಹೇಳಿದೆ.

ಇಡೀ ರಾಜ್ಯ ದೇವನಹಳ್ಳಿಯ ರೈತರ ಪರವಾಗಿ ದನಿ ಎತ್ತಿದ ನಂತರವೂ ಮುಖ್ಯಮಂತ್ರಿಗಳು ಆಶ್ವಾಸನೆ ನೀಡಿದ ನಂತರವೂ, ದೊಡ್ಡ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲರು ಪತ್ರಿಕೆಯಲ್ಲಿ ಲೇಖನ ಬರೆದು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿರುವುದನ್ನು ಹಾಗೂ ಸರ್ಕಾರಿ ಜಾಹಿರಾತನ್ನು ನೀಡಿ ಹಳೇ ಪ್ರಸ್ತಾಪವನ್ನೇ ಪುನರುಚ್ಛರಿಸಿರುವುದನ್ನು ಗಮನಿಸಿದರೆ ಸರ್ಕಾರ ಕರೆದಿರುವ ಜುಲೈ 4ರ ಸಭೆ ಮತ್ತೊಂದು ಮರೀಚಿಕೆಯಾಗುವ ಸಾಧ್ಯತೆ ಇದೆ ಎಂದು ಹೋರಾಟ ಸಮಿತಿ ಅಭಿಪ್ರಾಯಪಟ್ಟಿದೆ.

‘ಒಂದಲ್ಲಾ ಒಂದು ಕಾರಣ ನೀಡಿ, ನೋಟಿಫೀಕೇಶನ್‌ ಅನ್ನು ರದ್ದು ಮಾಡದೇ ಮುಂದೂಡಿದಲ್ಲಿ ಪರಿಣಾಮಗಳು ಗಂಭೀರವಾಗುವುದು ಶತಸಿದ್ಧವಿದೆ. ಇದನ್ನು ತಡೆಯಬೇಕಾದರೆ ಇಡೀ ರಾಜ್ಯ ಮತ್ತೊಮ್ಮೆ ಗಟ್ಟಿಯಾಗಿ ಕೂಗಿ ಹೇಳಬೇಕಿರುವ ಮತ್ತು ಇಡೀ ಸರ್ಕಾರ ಕಣ್ಣು ತೆರೆಯಲೇಬೇಕಾದ ವಾತಾವರಣ ನಿರ್ಮಿಸುವ ಅಗತ್ಯವಿದೆ. ಅದಕ್ಕಾಗಿ ಹೋರಾಟ ಸಮಿತಿಯು ಈ ಕೆಳಕಂಡ ತೀರ್ಮಾನಗಳನ್ನು ತೆಗೆದುಕೊಂಡಿದೆ ಎಂದು ಸಮಿತಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಜುಲೈ 2 ರಂದು ನಂದಿಬೆಟ್ಟದಲ್ಲಿ ನಡೆಯುತ್ತಿರುವ ವಿಶೇಷ ಕ್ಯಾಬಿನೇಟ್‌ ಸಭೆಯಲ್ಲಿ ”ದೇವನಹಳ್ಳಿ ಭೂ ಸಮಸ್ಯೆ” ವಿಶೇಷ ಅಜೆಂಡಾ ಆಗಬೇಕು ಎಂದು ಹೋರಾಟ ಸಮಿತಿ ಒತ್ತಾಯಿಸಿದೆ. ದೇವನಹಳ್ಳಿಯ ಮೂಲಕವೇ ಬೆಟ್ಟಕ್ಕೆ ಹೋದವರು ಬರಿ ಗೈಯಲ್ಲಿ ಬಾರದಿರಿ ಎಂದು ಕ್ಯಾಬಿನೆಟ್‌ ಸಚಿವರುಗಳಲ್ಲಿ ಸಮಿತಿ ಮನವಿ ಮಾಡಿದೆ.

ಜೊತೆಗೆ ‘ದೇವನಹಳ್ಳಿ ವಿವಾದದ ನಿಜವಾದ ಚಿತ್ರಣ ಬಹುತೇಕ ಸಚಿವರುಗಳಿಗೆ ಹಾಗೂ ಶಾಸಕರುಗಳಿಗೆ ಸ್ಪಷ್ಟವಾಗಿಲ್ಲ. ನಿಮ್ಮ ನಿಮ್ಮ ಜಿಲ್ಲೆಯಲ್ಲಿರುವ ಶಾಸಕರು ಮತ್ತು ಸಚಿವರನ್ನು ಕಂಡು, ವಿಚಾರ ವಿವರಿಸಿ, ರೈತಪರ ನಿಲುವು ತೆಗೆದುಕೊಳ್ಳುವಂತೆ, ಮನವೊಲಿಸಬೇಕು ಎಂದು ರಾಜ್ಯದ ಎಲ್ಲಾ ಹೋರಾಟಗಾರರಲ್ಲೂ ಸಮಿತಿ ಮನವಿ ಮಾಡಿದೆ.

ಸರ್ಕಾರದ ಮೇಲೆ ಸಾತ್ವಿಕ ಒತ್ತಡ ಹೆಚ್ಚಿಸುವ ದೃಷ್ಟಿಯಿಂದ ಜುಲೈ 4 ರಂದು ಫ್ರೀಡಂ ಪಾರ್ಕಿನಲ್ಲಿ ಬೃಹತ್‌ “ನಾಡ ಉಳಿಸಿ ಸಮಾವೇಶ”ವನ್ನು ಸಂಘಟಿಸಲಾಗುತ್ತಿದೆ.  ರಾಜ್ಯದ ಎಲ್ಲಾ ತಾಲ್ಲೂಕುಗಳಿಂದಲೂ ಸಮಾನ ಮನಸ್ಕರು ದೊಡ್ಡ ಸಂಖ್ಯೆಯಲ್ಲಿ ಈ ಸಮಾವೇಶದಲ್ಲಿ ಜೊತೆಯಾಗಲಿದ್ದಾರೆ ಎಂದು ಹೋರಾಟಗಾರರ ಸಮಿತಿ ತಿಳಿಸಿದೆ.

ಜುಲೈ 4 ರಂದು ಸರ್ಕಾರ ನಿಟ್ಟುಸಿರು ಬಿಡುವಂತಹ ತೀರ್ಮಾನ ತೆಗೆದುಕೊಂಡಲ್ಲಿ ಸಿದ್ದರಾಮಯ್ಯನವರನ್ನು ಹಾಗೂ ಅವರ ಸರ್ಕಾರವನ್ನು ಅಭಿನಂದಿಸಿ ಇಲ್ಲಿಂದ ಹೊರಡುತ್ತೇವೆ. ಒಂದು ವೇಳೆ ಮತ್ತೊಮ್ಮೆ ನ್ಯಾಯ ನಿರಾಕರಣೆ ನಡೆದಲ್ಲಿ ಇನ್ನಷ್ಟು ಕಠಿಣ ಹೋರಾಟದ ದಿಟ್ಟ ತೀರ್ಮಾನವನ್ನು ಅಂದು ತೆಗೆದುಕೊಳ್ಳುತ್ತೇವೆ. ಅಂತಿಮ ಗೆಲುವಂತೂ ನ್ಯಾಯದ್ದೇ ಆಗಲಿದೆ ಎಂದು ಹೋರಾಟ ಸಮಿತಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು