ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ- ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸವಾಲು

PPeepal Media

Peepal Media • ರಾಜ್ಯ

• 2 ನಿಮಿಷದ ಓದು

ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ- ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸವಾಲು

ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಎರಡುವರೆ ಸಾವಿರ ಕೋಟಿ ರೂಪಾಯಿಗಳಿಗೆ ಹರಾಜು ಹಾಕಿ ಹಣ ಪೀಕಿದ್ದಾರೆ ಎಂಬ ಆರೋಪವನ್ನು ಸ್ವಪಕ್ಷದ ನಾಯಕರಿಂದಲೇ ಎದುರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ? ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.

ಹರಿಯಾಣ ಚುನಾವಣಾ ಪ್ರಚಾರ ಭಾಷಣದಲ್ಲಿ ಪ್ರಧಾನಿ ಮೋದಿಯ ಭಾಷಣಕ್ಕೆ ಪ್ರತಿಕ್ರಿಯೆಯಾಗಿ ಸಿದ್ಧರಾಮಯ್ಯ ತಮ್ಮ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ತಮ್ಮ ಪಕ್ಷದ ಮುಖ್ಯಮಂತ್ರಿ ಹುದ್ದೆಯನ್ನು ಮಾರಾಟ ಮಾಡಲಾಗಿದೆ ಎಂದು ರಾಜ್ಯದ ಬಿಜೆಪಿ ಶಾಸಕರೊಬ್ಬರು ಬಹಿರಂಗವಾಗಿ ಆರೋಪಿಸಿದ್ದರೂ ಅವರ ಮೇಲೆ ಕ್ರಮ ಇಲ್ಲ. ದಿನ ಬೆಳಗಾದರೆ ಭ್ರಷ್ಟಾಚಾರದ ಆರೋಪದ ಕೆಸರೆರಚಾಟದಲ್ಲಿ ತೊಡಗಿರುವ ಬಿಜೆಪಿ ಶಾಸಕರ ವಿರುದ್ಧವೂ ಯಾವ ಕ್ರಮವೂ ಇಲ್ಲ. ನರೇಂದ್ರ ಮೋದಿ ಅವರೇ ಈ ಮೌನಕ್ಕೆ, ಈ ನಿಷ್ಕ್ರೀಯತೆಗೆ ಏನು ಕಾರಣ? ಈ ಭ್ರಷ್ಟಾಚಾರದಲ್ಲಿ ನೀವೂ ಭಾಗಿದಾರರೆಂದು ತಿಳಿದುಕೊಳ‍್ಳಬಹುದೇ?

ನಮ್ಮ ಸರ್ಕಾರದ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸಿ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ.

ಗಣಿಗಾರಿಕೆಗೆ ಕಾನೂನುಬಾಹಿರವಾಗಿ ಭೂಮಿ ಮಂಜೂರು ಮಾಡಿರುವ, ನೂರಾರು ಕೋಟಿ ರೂಪಾಯಿ ಹಗರಣದ ಆರೋಪ ಎದುರಿಸುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿರುವ ನಿಮಗೆ ಇತರರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವಾಗ ಆತ್ಮಸಾಕ್ಷಿಯೂ ಚುಚ್ಚುವುದಿಲ್ಲವೇ? ಈ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಕರ್ನಾಟಕದ ಲೋಕಾಯುಕ್ತರು ಕೋರಿರುವ ಅನುಮತಿ ಬಗ್ಗೆ ಘನತೆವೆತ್ತ ರಾಜ್ಯಪಾಲರು ಕಣ್ಣುಮುಚ್ಚಿಕೊಂಡಿರುವುದೇಕೇ? ಅವರ ಮೇಲೆ ಒತ್ತಡ ಹೇರುತ್ತಿರುವರು ಯಾರು?

ಪ್ರಧಾನಿ ನರೇಂದ್ರ ಮೋದಿ ಅವರೇ, ಕಳೆದ ಹನ್ನೊಂದು ವರ್ಷಗಳಲ್ಲಿ ನಿರಂತರವಾಗಿ ನಿಮ್ಮ ಕಾರ್ಯಾಲಯದ ವಾಷಿಂಗ್ ಮೆಷಿನ್ ಕೆಲಸ ಮಾಡುತ್ತಿರುವುದನ್ನು ದೇಶ ಗಮನಿಸುತ್ತಿದೆ. ನಿಮ್ಮಿಂದಲೇ ಭ್ರಷ್ಟಾಚಾರದ ಆರೋಪಕ್ಕೊಳಗಾಗಿರುವ ವಿರೋಧ ಪಕ್ಷಗಳ ನಾಯಕರನ್ನೆಲ್ಲಾ ವಾಷಿಂಗ್ ಮೆಷಿನ್ ನಲ್ಲಿ ಹಾಕಿ ಪರಮ ಪ್ರಾಮಾಣಿಕರನ್ನಾಗಿ ಮಾಡುತ್ತಿರುವ ನಿಮ್ಮ ಚಾಕಚಕ್ಯತೆಗೆ ಶಹಭಾಸ್ ಅನ್ನಲೇ ಬೇಕು. ಅಧಿಕೃತ ಮಾಹಿತಿಯ ಪ್ರಕಾರವೇ 2014ರಿಂದ ಇಲ್ಲಿಯ ವರೆಗೆ ಭ್ರಷ್ಟಾಚಾರದ ಆರೋಪ ಹೊತ್ತಿರುವ 25 ವಿರೋಧ ಪಕ್ಷದ ನಾಯಕರು ಬಿಜೆಪಿ ಸೇರಿದ್ದಾರೆ. ಇವರಲ್ಲಿ 23 ನಾಯಕರನ್ನು ಭ್ರಷ್ಟಾಚಾರದ ಆರೋಪಗಳಿಂದ ಕೇಂದ್ರ ತನಿಖಾ ಸಂಸ್ಥೆಗಳು ಮುಕ್ತಗೊಳಿಸಿವೆ.

ಹಿಮಂತಾ ಶರ್ಮಾ, ಸುವೇಂದು ಅಧಿಕಾರಿ, ಹೆಚ್.ಡಿ.ಕುಮಾರಸ್ವಾಮಿ, ಅಜಿತ್ ಪವಾರ್, ಅಶೋಕ್ ಚವ್ಹಾಣ್, ನಾರಾಯಣ ರಾಣೆ, ಪ್ರತಾಪ್ ಸರ್‌ನಾಯಕ್ ಅವರಿಂದ ಹಿಡಿದು ಇತ್ತೀಚಿನ ಏಡ್ಸ್ ಟ್ರ್ಯಾಪ್ ಗಿರಾಕಿ ಮುನಿರತ್ನ ವರೆಗೆ ಎಷ್ಟೊಂದು ಭ್ರಷ್ಟರನ್ನು ವಾಷಿಂಗ್ ಮೆಷಿನ್ ನಲ್ಲಿ ತೊಳೆದು ನೀವು ಕ್ಲೀನ್ ಮಾಡಿಲ್ಲ? ಇವೆಲ್ಲ ಕೇವಲ ಧರ್ಮಾರ್ಥ ಸೇವೆಯೇ ಪ್ರಧಾನಿಗಳೇ?

ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮ ಪಕ್ಷದ ಖಜಾನೆಗೆ ಸಂದಾಯವಾಗಿರುವ ಚುನಾವಣಾ ಬಾಂಡ್ ಗಳ ಹಿಂದಿನ ಕೊಡುಗೈ ದಾನಿಗಳು ಯಾರು? ಅವರು ಕೊಟ್ಟದ್ದೆಷ್ಟು? ಅದಕ್ಕಾಗಿ ಅವರು ಪಡೆದದ್ದು ಎಷ್ಟು? ಎನ್ನುವುದು ಇಂದು ದೇಶದ ಜನರ ಕಣ್ಣಮುಂದಿದೆ. ನಿಮ್ಮ ಹನ್ನೊಂದು ವರ್ಷಗಳ ಅವಧಿಯಲ್ಲಿ ಬ್ಯಾಂಕ್ ಲೂಟಿಗೈದವರು ದೇಶ ಬಿಟ್ಟು ಓಡಿಹೋಗಲು ದಾರಿ ಮಾಡಿಕೊಟ್ಟವರು ಯಾರು? ಅದಾನಿ-ಅಂಬಾನಿ ಅವರ ಸಂಪತ್ತು ಎಷ್ಟು ಪಟ್ಟು ಹೆಚ್ಚಾಯಿತು? ಬಡವರ ಗಳಿಕೆ ಎಷ್ಟು ಪಟ್ಟು ಕಡಿಮೆಯಾಯಿತು?

ನೀವು ಭ್ರಷ್ಟಾಚಾರದ ಬಗ್ಗೆ ಚರ್ಚೆ ಪ್ರಾರಂಭಿಸಿರುವುದನ್ನು ನೋಡಿ ಸಂತೋಷವಾಯಿತು. ನನ್ನ ವಿರುದ್ಧ ಭ‍್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿ ಕುಣಿದಾಡುತ್ತಿರುವ ಪಾತ್ರಧಾರಿಗಳನ್ನಷ್ಟೇ ರಾಜ್ಯದ ಜನ ನೋಡಿದ್ದಾರೆ. ಈಗ ಇದರ ಹಿಂದಿರುವ ಸೂತ್ರಧಾರಿ ಯಾರು ಎನ್ನುವುದು ಕೂಡಾ ಜನರಿಗೆ ಗೊತ್ತಾಗಲಿ.

ಮೋದಿಯವರೇ, ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆ ಮಾಡಲು ನೀವು ಸಿದ್ಧ ಇದ್ದರೆ ನಾನು ಸದಾ ಸಿದ್ಧ ಎಂದು ಅವರು ಹೇಳಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು