ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಆಸ್ತಿಗಾಗಿ ಅಕ್ಕನನ್ನೇ ಕೊಂದ ವಕೀಲ; ಬೆಂಗಳೂರಿನಲ್ಲಿ ಮಕ್ಕಳ ಎದುರೇ ಮಹಿಳೆಯ ಹತ್ಯೆ, ಆರೋಪಿ ಪರಾರಿನಂದಿನಿ ಮೊಸರಿನ ಬೆಲೆ ಕೆ.ಜಿಗೆ ₹2 ಇಳಿಕೆ; ನವೆಂಬರ್ 29ರಿಂದ ಹೊಸ ದರ ಜಾರಿಬಸವ ಸಂಸ್ಕೃತಿಯ ಮೇಲಿನ ದಾಳಿಗೆ ಖಂಡನೆ; ಮುಂದುವರಿದರೆ ರಾಜ್ಯವ್ಯಾಪಿ ಹೋರಾಟದ ಎಚ್ಚರಿಕೆ ನೀಡಿದ ಮಠಾಧಿಪತಿಗಳುಸಾಕಾಣಿಕೆ ದರ ಕೆ.ಜಿಗೆ ₹20ಕ್ಕೆ ಹೆಚ್ಚಿಸಿ; ಕಂಪನಿಗಳ ಶೋಷಣೆ ತಡೆಯಿರಿ: ಕೋಳಿ ಸಾಕಾಣಿಕೆದಾರರಿಂದ ಮುಖ್ಯಮಂತ್ರಿಗೆ ಮನವಿಮಂಗಳೂರಿನಲ್ಲಿ ಡೆಲಾಯ್ಟ್ ಕಚೇರಿ ಆರಂಭ: 1,000ಕ್ಕೂ ಹೆಚ್ಚು ಉದ್ಯೋಗಿಗಳ ನೇಮಕಕ್ಕೆ ಯೋಜನೆ; ‘ಬಿಯಾಂಡ್ ಬೆಂಗಳೂರು’ ಅಭಿಯಾನಕ್ಕೆ ಬಲಇಸ್ರೇಲ್‌ನಲ್ಲಿ ನಿಗೂಢವಾಗಿ ಮೃತಪಟ್ಟ ಮಂಗಳೂರಿನ ವ್ಯಕ್ತಿ: ಒಂದು ತಿಂಗಳ ಬಳಿಕ ಸ್ವಗ್ರಾಮಕ್ಕೆ ಮೃತದೇಹ ರವಾನೆ2016ರ ಸಿಪಿಐ(ಎಂ) ಕಾರ್ಯಕರ್ತನ ಹತ್ಯೆ ಪ್ರಕರಣ: ಮೂವರು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆಎಸ್‌ಐಆರ್‌ ವಿವಾದ: ತಂದೆಯ ಹೆಸರು ಮತದಾರರ ಪಟ್ಟಿಯಿಂದ ತೆಗೆದಿದ್ದಕ್ಕೆ ಎರಡೂವರೆ ತಿಂಗಳ ಮಗುವಿಗೆ ಜನನ ಪ್ರಮಾಣಪತ್ರ ನಿರಾಕರಣೆ!ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದರೆ ಭಾರತಕ್ಕೆ ಶೇ.17ರಷ್ಟು ಸುಂಕ! ಒಪ್ಪಂದ ವಿಫಲವಾದರೆ ಶೇ.25ಕ್ಕೆ ಏರಿಕೆ: ಅಮೆರಿಕದ ಪ್ರಸ್ತಾವನೆಜಾರ್ಖಂಡ್‌ | ಎಸ್‌ಐಆರ್‌ ಪ್ರಕ್ರಿಯೆ ತಕ್ಷಣ ಸ್ಥಗಿತಗೊಳಿಸಲು ವಿಧಾನಸಭೆ ನಿರ್ಣಯವಾಲ್ಮೀಕಿ ನಿಗಮ ಪ್ರಕರಣ: ಮಾಜಿ ಸಚಿವ ಬಿ. ನಾಗೇಂದ್ರಗೆ ಸಿಐಡಿ ಕ್ಲೀನ್ ಚಿಟ್; ಆರೋಪಿಗಳ ಪಟ್ಟಿಯಿಂದ ಹೆಸರು ಕೈಬಿಟ್ಟು ಸಾಕ್ಷಿಯಾಗಿ ಸೇರ್ಪಡೆ!ರಾಹುಲ್ ಗಾಂಧಿ ವಿರುದ್ಧದ ತನಿಖೆ ಆದೇಶಕ್ಕೆ ಸುಪ್ರೀಂಕೋರ್ಟ್ ಬ್ರೇಕ್; ಮರು ವಿಚಾರಣೆಗೆ ಹೈಕೋರ್ಟ್‌ಗೆ ಸೂಚನೆಪುಣೆ ನ್ಯಾಯಾಲಯದ ಹೊರಗೆ ಕೊಲೆ ಆರೋಪಿ ಮೇಲೆ ದಾಳಿ: ಕುಡುಗೋಲುಗಳಿಂದ ಹಲ್ಲೆ, ಗುಂಡಿನ ದಾಳಿಬೆಂಗಳೂರು: ₹5.72 ಕೋಟಿ ಮೌಲ್ಯದ 5.72 ಕೆ.ಜಿ. ಎಂಡಿಎಂಎ ವಶ; ಅಂತಾರಾಜ್ಯ ಮಾದಕವಸ್ತು ಜಾಲ ಭೇದಿಸಿದ ಪೊಲೀಸರುನಾಲ್ಕು ತಿಂಗಳಿಂದ ಸಂಬಳವಿಲ್ಲದೆ ಪರದಾಟ: ನಮ್ಮ ಕ್ಲಿನಿಕ್ ವೈದ್ಯರು, ಸಿಬ್ಬಂದಿಯ ಗೋಳು ಕೇಳುವವರ್ಯಾರು?ಕೇರಳ ಮತ್ತು ಮಲಯಾಳಿಗಳ ವಿರುದ್ಧ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ: ಕೊಡಗಿನಲ್ಲಿ ಪ್ರತಿಭಟನೆಯ ಎಚ್ಚರಿಕೆಅಕ್ಕಾ ಕೇಳವ್ವ: ಶರಣೆ ಲಿಂಗಮ್ಮನ ಸಂಸಾರವನರಿವ ಬೋಧೆಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸುಪ್ರೀಂ ಕೋರ್ಟ್ ಶಾಕ್; ಜಾಮೀನು ರದ್ದು, ಎರಡು ವಾರಗಳಲ್ಲಿ ಶರಣಾಗತಿಗೆ ಸೂಚನೆಒಂದೇ ದಿನದಲ್ಲಿ 4.16 ಲಕ್ಷ ಮತದಾರರ ಅರ್ಜಿ; ಒಂದೇ ವಿಳಾಸದಿಂದ 44 ಅರ್ಜಿಗಳು: ಉತ್ತರ ಪ್ರದೇಶದಲ್ಲಿ ಮತದಾರರ ನೋಂದಣಿಯಲ್ಲಿ ಅಸಾಮಾನ್ಯ ಏರಿಕೆ ಪತ್ತೆಸ್ವತಂತ್ರ ಭಾರದ್ವಾಜ್ ವಿರುದ್ಧ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಪೋಸ್ಟ್‌ ಹಾಕಿದ ಆರೋಪ: ದೆಹಲಿ ಪೊಲೀಸರಿಂದ ವರದಿ ಕೇಳಿದ ನ್ಯಾಯಾಲಯ

ಬಸವ ಸಂಸ್ಕೃತಿಯ ಮೇಲಿನ ದಾಳಿಗೆ ಖಂಡನೆ; ಮುಂದುವರಿದರೆ ರಾಜ್ಯವ್ಯಾಪಿ ಹೋರಾಟದ ಎಚ್ಚರಿಕೆ ನೀಡಿದ ಮಠಾಧಿಪತಿಗಳು

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಬೆಂಗಳೂರಿನ ಬಸವ ಸಮಿತಿಯಲ್ಲಿ ನಡೆದ ಲಿಂಗಾಯತ ಮಠಾಧಿಪತಿಗಳ ಚಿಂತನ-ಮಂಥನ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಮಠಗಳ ಸ್ವಾಮೀಜಿಗಳು ಮತ್ತು ಗಣ್ಯರು.

ಬೆಂಗಳೂರು: ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರು, ಬಸವಾದಿ ಶರಣರು ಹಾಗೂ ಬಸವ ಸಂಸ್ಕೃತಿಯ ಮೇಲೆ ನಡೆಯುತ್ತಿರುವ ದಾಳಿಗಳನ್ನು ತೀವ್ರವಾಗಿ ಖಂಡಿಸಿರುವ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಇಂತಹ ಕೃತ್ಯಗಳು ಮುಂದುವರಿದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಬೆಂಗಳೂರಿನ ಬಸವ ಸಮಿತಿಯಲ್ಲಿ ಇಂದು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ಚಿಂತನ-ಮಂಥನ ಸಭೆಯಲ್ಲಿ ನಾಡಿನ ವಿವಿಧ ಮಠಗಳ ಮಠಾಧೀಶರು, ಚಿಂತಕರು, ಸಾಹಿತಿಗಳು, ಹೋರಾಟಗಾರರು ಹಾಗೂ ಸಮಾಜದ ಹಿರಿಯರು ಭಾಗವಹಿಸಿದ್ದರು.

ಸಭೆಯಲ್ಲಿ ಬಸವಣ್ಣನವರು, ಬಸವಾದಿ ಶರಣರು ಮತ್ತು ಬಸವ ಸಂಸ್ಕೃತಿಯ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಬಸವಣ್ಣನವರ ವಿಚಾರಧಾರೆ, ಸಮಾನತೆಯ ಆಶಯ ಹಾಗೂ ಶರಣರ ಪರಂಪರೆಯ ವಿರುದ್ಧ ನಡೆಯುತ್ತಿರುವ ಕೃತ್ಯಗಳನ್ನು ಸಭೆ ತೀವ್ರವಾಗಿ ಖಂಡಿಸಿತು.

ಬಸವ ಸಂಸ್ಕೃತಿಯ ಮೇಲಿನ ಇಂತಹ ದಾಳಿಗಳನ್ನು ತಕ್ಷಣವೇ ನಿಲ್ಲಿಸಬೇಕು. ಇಲ್ಲದಿದ್ದರೆ ನಾಡಿನ ಜನರೆಲ್ಲರೂ ಒಗ್ಗಟ್ಟಾಗಿ ಬೀದಿಗಿಳಿದು ರಾಜ್ಯವ್ಯಾಪಿ ಹೋರಾಟ ನಡೆಸಬೇಕಾಗುತ್ತದೆ ಎಂದು ಬಸವ ವಿರೋಧಿ ಶಕ್ತಿಗಳಿಗೆ ಸಭೆ ಸರ್ವಾನುಮತದ ನಿರ್ಣಯದ ಮೂಲಕ ಎಚ್ಚರಿಕೆ ನೀಡಿತು.

ಹಲವು ಮಠಗಳ ಮಠಾಧೀಶರು ಭಾಗಿ

ಸಭೆಯಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಭಾಲ್ಕಿ ಹಿರೇಮಠದ ನಾಡೋಜ ಬಸವಲಿಂಗ ಪಟ್ಟದ್ದೇವರು, ಗದುಗಿನ ತೋಂಟದಾರ್ಯ ಮಠದ ಶ್ರೀ ಸಿದ್ದರಾಮ ಸ್ವಾಮೀಜಿ, ಶಿವಮೊಗ್ಗದ ಬೆಕ್ಕಿನ ಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಮಹಾಸ್ವಾಮಿಗಳು ಭಾಗವಹಿಸಿದ್ದರು.

ಅಲ್ಲದೆ, ಬೆಂಗಳೂರಿನ ಬೇಲಿಮಠದ ಶ್ರೀ ಶಿವರುದ್ರ ಸ್ವಾಮೀಜಿ, ಚಿತ್ರದುರ್ಗದ ಮಾದಾರ ಚನ್ನಯ್ಯ ಮಹಾಸ್ವಾಮಿಗಳು, ಭೋವಿ ಮಠದ ಇಮ್ಮಡಿ ಸಿದ್ದರಾಮ ಶ್ರೀಗಳು, ಬಸವಪೀಠದ ಗಂಗಾಮಾತೆ, ಮುರುಘಾಮಠದ ಶ್ರೀ ಬಸವಕುಮಾರ ಸ್ವಾಮೀಜಿ, ನೆಲಮಂಗಲದ ಪವಾಡ ಬಸವಣ್ಣ ದೇವರಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಕುಣಿಗಲ್‌ನ ಬೆಟ್ಟರಹಳ್ಳಿ ಗವಿಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಕನಕಪುರದ ಶ್ರೀದೇಗುಲ ಮಠದ ಶರಣಬಸವ ಚನ್ನಬಸವ ಸ್ವಾಮೀಜಿ, ಪೂಜ್ಯ ಆಲಮಟ್ಟಿ ಶ್ರೀಗಳು ಹಾಗೂ ಅಥಣಿಯ ಮೋಟಗಿ ಮಠದ ಪ್ರಭು ಚನ್ನಬಸವ ಶ್ರೀಗಳು ಸೇರಿದಂತೆ ವಿವಿಧ ಮಠಗಳ ಪೂಜ್ಯರು ಉಪಸ್ಥಿತರಿದ್ದರು.

ಚಿಂತಕರು, ಸಾಹಿತಿಗಳು ಹಾಗೂ ಸಮಾಜದ ಹಿರಿಯರ ಬೆಂಬಲ

ಚಿಂತನ-ಮಂಥನ ಸಭೆಯಲ್ಲಿ ಸಾಹಿತಿಗಳು, ಚಿಂತಕರು ಮತ್ತು ಸಾಮಾಜಿಕ ಹೋರಾಟಗಾರರೂ ಭಾಗವಹಿಸಿದ್ದರು. ಶ್ರೀ ಎಲ್. ಹನುಮಂತಯ್ಯ, ಸಾಹಿತಿ ಎಸ್.ಜಿ. ಸಿದ್ದರಾಮಯ್ಯ, ಬಸವರಾಜ ಸಬರದ, ಬಸವ ಸಮಿತಿಯ ಅರವಿಂದ ಜತ್ತಿ, ಹೋರಾಟಗಾರ ರವಿಕೃಷ್ಣಾ ರೆಡ್ಡಿ, ನಿವೃತ್ತ ಕುಲಪತಿ ಡಾ. ರಾಜಾಸಾಬ್, ಡಾ. ಜಾಣಗೆರೆ ವೆಂಕಟರಾಮಯ್ಯ ಹಾಗೂ ಮಾಜಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ಸೇರಿದಂತೆ ಹಲವು ಗಣ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಬಸವಣ್ಣನವರ ವಿಚಾರಧಾರೆ ಮತ್ತು ಶರಣರ ಪರಂಪರೆಯ ಸಂರಕ್ಷಣೆಯ ಅಗತ್ಯದ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಬಸವ ಸಂಸ್ಕೃತಿಯ ಮೇಲಿನ ದಾಳಿಗಳನ್ನು ತಡೆಯುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂಬ ನಿರ್ಣಯಕ್ಕೆ ಸಭೆಯಲ್ಲಿ ಭಾಗವಹಿಸಿದ್ದ ಗಣ್ಯರು ಮತ್ತು ಬಸವಭಕ್ತರು ಬೆಂಬಲ ವ್ಯಕ್ತಪಡಿಸಿದರು.

ಬಸವಣ್ಣನವರ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಮಾನವೀಯ ಮೌಲ್ಯಗಳ ಆಶಯಗಳನ್ನು ಪ್ರತಿಪಾದಿಸುವ ಬಸವ ಸಂಸ್ಕೃತಿಯ ವಿರುದ್ಧದ ಕೃತ್ಯಗಳು ನಿಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ಸಂಘಟಿಸಲಾಗುವುದು ಎಂಬ ಎಚ್ಚರಿಕೆಯನ್ನು ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಪುನರುಚ್ಚರಿಸಿದೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು