ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾ ರೇಡ್‌

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾ ರೇಡ್‌

ಬೆಂಗಳೂರು : ಲೋಕಾಯುಕ್ತ ಅಧಿಕಾರಿಗಳು ಇವತ್ತು ಬೆಳ್ಳಂಬೆಳಗ್ಗೆ ಬೆಂಗಳೂರಲ್ಲಿ (Bengaluru) ಭ್ರಷ್ಟ ಅಧಿಕಾರಿಗಳ ಬೇಟೆಗಿಳಿದಿದ್ದರು (Lokayukta Raid). ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಬೆಂಗಳೂರಿನ 6 ಕಡೆ ಮತ್ತು ಮೈಸೂರಿನ 5 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.

ಬೆಂಗಳೂರಿನಲ್ಲಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಜನಾರ್ದನ್​ಗೆ ಸೇರಿದ ಆರು ಸ್ಥಳಗಳಲ್ಲಿ ದಾಳಿ ಮಾಡಿದ್ದರು. ಲೋಕಾಯುಕ್ತ ದಾಳಿ ವೇಳೆ ಜನಾರ್ದನ್​ ಸ್ನೇಹಿತನ ಮನೆಯಲ್ಲಿ ಕಾಸಿನ ಬೆಟ್ಟವೇ ಪತ್ತೆಯಾಗಿದೆ. ಬರೋಬ್ಬರಿ 1 ಕೋಟಿ 70 ಲಕ್ಷ ಗರಿ ಗರಿ ನೋಟು ಸಿಕ್ಕಿದೆ. ಕೋಟಿ ಕೋಟಿ ಹಣ, ಬಂಗಾರ, 6 ಮನೆ, 2 ಶಾಲೆ ಪತ್ತೆ!
ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಪುರುಷೋತ್ತಮ್ ಅವರ ನಾಲ್ಕು ಅಂತಸ್ತಿನ ಭವ್ಯ ಬಂಗಲೆಗೆ ನುಗ್ಗಿದ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ದಾಳಿಯ ಸಮಯದಲ್ಲಿ ಪುರುಷೋತ್ತಮ್ ಮನೆಯಲ್ಲೇ ಇದ್ದು, ಅಧಿಕಾರಿಗಳ ವಿಚಾರಣೆಗೆ ಸಹಕರಿಸುತ್ತಿದ್ದಾರೆ. ಅವರ ಸಂಬಂಧಿಕರ ಮನೆ ಮತ್ತು ಕಚೇರಿಗಳ ಮೇಲೆಯೂ ದಾಳಿ ಮುಂದುವರಿದಿದೆ.

ಈ ದಾಳಿಯ ಅತ್ಯಂತ ಆಘಾತಕಾರಿ ಅಂಶವೆಂದರೆ ಪುರುಷೋತ್ತಮ್ ಅವರು ಮೈಸೂರಿನಲ್ಲಿ ಎರಡು ಶಾಲೆಗಳನ್ನು ಹೊಂದಿರುವುದು ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೆ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೇ ಸುಮಾರು ಐದಾರು ಸ್ವಂತ ಮನೆಗಳನ್ನು ನಿರ್ಮಿಸಿರುವುದು ಪತ್ತೆಯಾಗಿದೆ.

‘ಇದು ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದ ಪ್ರಕರಣವಾಗಿದ್ದು, ಮೈಸೂರಿನಲ್ಲಿ 5 ಕಡೆ ಮತ್ತು ಬೆಂಗಳೂರಿನಲ್ಲಿ 6 ಕಡೆ ಪರಿಶೀಲನೆ ನಡೆಸುತ್ತಿದ್ದೇವೆ. ಅವರ ಹೆಸರಿನಲ್ಲಿ ಎರಡು ಶಾಲೆಗಳು, ಹಲವು ಸೈಟ್ ದಾಖಲೆಗಳು, ಮನೆಗಳು ಇರುವುದು ದೃಢಪಟ್ಟಿದೆ’ ಎಂದು ಎಸ್ಪಿ ಶಿವಪ್ರಕಾಶ್ ದೇವರಾಜ್ ಮಾಹಿತಿ ನೀಡಿದ್ದಾರೆ.

7 ಎಕರೆ ತೋಟ ಅಪಾರ ಚಿನ್ನಾಭರಣ
ಶಿವಮೊಗ್ಗದಲ್ಲೂ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ಜನ್ಮ ಜಾಲಾಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಸಿರೋ ಆರೋಪದಲ್ಲಿ ದಾವಣಗೆರೆಯ ಬೆಸ್ಕಾಂ ಎಇಇ ಅರ್ಜುನ್ ಆ‌ರ್.ಹೆಚ್​ಗೆ ಸೇರಿರೋ ಶಿವಮೊಗ್ಗದಲ್ಲಿರುವ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.

ಅರ್ಜುನ್‌ ವಾಸವಿದ್ದ ದಾವಣಗೆರೆ ನಗರದ ನಿಟ್ಟುವಳ್ಳಿನಲ್ಲಿ ರೂಮ್, ಕಚೇರಿ ಹಾಗೂ ಶಿವಮೊಗ್ಗದ ಮನೆಯ ಮೇಲೆ ಏಕ ಕಾಲಕ್ಕೆ ದಾಳಿ ನಡೆಸಲಾಗಿದೆ. ಶಿವಮೊಗ್ಗದ ಮನೆಯಲ್ಲಿ ಆಸ್ತಿ ಪತ್ರ ಹಾಗೂ ಚಿನ್ನ ಬೆಳ್ಳಿ ಪತ್ತೆಯಾಗಿದ್ದು, ಇನ್ನಷ್ಟು ಮಹತ್ವದ ದಾಖಲೆಗಳನ್ನ ಪತ್ತೆಹಚ್ಚಲು ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ.

ಈತನಿಗೆ ಸೇರಿರುವ 7 ಎಕರೆ ತೋಟ ಪತ್ತೆ ಹಚ್ಚಿ ಅಲ್ಲಿನ ಫಾರ್ಮ್ ಹೌಸ್‌ನಲ್ಲಿ ಪರಿಶೀಲಿಸಿದ್ದಾರೆ. ಶಿವಮೊಗ್ಗದ ವಿಜಯನಗರದಲ್ಲಿರುವ ಮನೆಯಲ್ಲಿ ಚಿನ್ನಾಭರಣ, ದುಬಾರಿ ಬೆಲೆ ಬಾಳುವ ವಾಚ್, ಬಂಗಾರದ ಗಟ್ಟಿ ಸೇರಿದಂತೆ ಆಸ್ತಿ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ಸರ್ವೆ ಇಲಾಖೆಯ ಸೂಪರ್‌ವೈಸರ್​ಗೆ ಶಾಕ್
ಧಾರವಾಡದಲ್ಲೂ ಲೋಕಾಯುಕ್ತ ಅಧಿಕಾರಿಗಳು ಬೇಟೆಯಾಡಿದ್ದಾರೆ. ಸರ್ವೆ ಇಲಾಖೆಯ ಸೂಪರ್‌ವೈಸರ್ ಸೋಮಲಿಂಗಪ್ಪ ಮನೆ ಮತ್ತು ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಒಟ್ಟು ನಾಲ್ಕು ಕಡೆ ದಾಳಿ ಮಾಡಿ ಅಪಾರ ಪ್ರಮಾಣದ ಆಸ್ತಿ ದಾಖಲೆಗಳು ವಶಕ್ಕೆ ಪಡೆದಿದ್ದಾರೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು