ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಕ್ರಮ ಆಸ್ತಿ ಗಳಿಕೆ ಆರೋಪ: ಕರ್ನಾಟಕದಾದ್ಯಂತ 17 ಸರ್ಕಾರಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಅಕ್ರಮ ಆಸ್ತಿ ಗಳಿಕೆ ಆರೋಪ: ಕರ್ನಾಟಕದಾದ್ಯಂತ 17 ಸರ್ಕಾರಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯಾದ್ಯಂತ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಹಲವು ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದಾರೆ. ವರದಿಯೊಂದರ ಪ್ರಕಾರ 250 ಅಧಿಕಾರಿಗಳನ್ನು ಒಳಗೊಂಡ ಲೋಕಾಯುಕ್ತ ತಂಡವು ರಾಜ್ಯದ 75ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ 17 ಅಧಿಕಾರಿಗಳ ಮೇಲೆ ದಾಳಿ ನಡೆಸಿದೆ.

ಬೆಂಗಳೂರು, ಹಾಸನ, ಚಿತ್ರದುರ್ಗ, ಕಲಬುರಗಿ, ಚಾಮರಾಜನಗರ, ರಾಮನಗರ ಮತ್ತು ಬೆಳಗಾವಿ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ವಿವಿಧ ಸರ್ಕಾರಿ ಅಧಿಕಾರಿಗಳ ವಿರುದ್ಧ ದಾಳಿ ನಡೆಸಲಾಗುತ್ತಿದೆ.

ಬೆಂಗಳೂರಿನ ಉಳ್ಳಾಲದಲ್ಲಿರುವ ಕಾರ್ಖಾನೆಗಳು, ಬಾಯ್ಲರ್‌ಗಳು ಮತ್ತು ಕೈಗಾರಿಕಾ ಸುರಕ್ಷತಾ ವಿಭಾಗದ ಉಪ ನಿರ್ದೇಶಕ ಶ್ರೀನಿವಾಸ್ ಅವರ ಮನೆಯಲ್ಲೂ ಶೋಧ ನಡೆಯುತ್ತಿದೆ. ಅವರ ಕೊಳ್ಳೇಗಾಲದಲ್ಲಿರುವ ತೋಟದ ಮನೆಯಲ್ಲಿಯೂ ಶೋಧ ನಡೆಯುತ್ತಿದೆ. ಶ್ರೀನಿವಾಸ್ ಅವರೊಬ್ಬರಿಗೆ ಸಂಬಂಧಿಸಿದ 17 ಸ್ಥಳಗಳಲ್ಲಿ ಅಕ್ರಮ ಆಸ್ತಿ ಹೊಂದಿರುವ ಶಂಕೆಯ ಮೇಲೆ ರಾಜ್ಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ.

ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಅವರ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸೆಪ್ಟೆಂಬರ್ ತಿಂಗಳಿನಲ್ಲಿ ಚಂದ್ರಪ್ಪ 10 ಸಾವಿರ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಅದೇ ದಿನ ಲೋಕಾಯುಕ್ತ ಅಧಿಕಾರಿಗಳು ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ಬೆಂಗಳೂರಿನ ಕೆಆರ್ ಪುರಂನಲ್ಲಿರುವ 3 ಅಂತಸ್ತಿನ ಕಟ್ಟಡ ಸೇರಿದಂತೆ ಹಲವು ದಾಖಲೆಗಳನ್ನು ಪತ್ತೆ ಮಾಡಿದ್ದರು.

ಸ್ಲಂ ಬೋರ್ಡ್ ಮುಖ್ಯ ಇಂಜಿನಿಯರ್ ಬಾಲರಾಜ್, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯಪಾಲಕ ಇಂಜಿನಿಯರ್ ಶಶಿಕುಮಾರ್, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಜೂನಿಯರ್ ಇಂಜಿನಿಯರ್ ಹೆಚ್.ಇ ನಾರಾಯಣ್ ಸೇರಿದಂತೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಸಂಪತ್ತಿನ ಮೇಲೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ.

ಬೆಳಗಾವಿಯಲ್ಲಿ ಎಂಜಿನಿಯರ್‌ ಮನೆ ಮೇಲೆ ದಾಳಿ

ಬೆಳಗಾವಿ ಜಿಲ್ಲೆಯಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರ ಎಂ.ಎಸ್.ಬಿರಾದಾರ್ ಮತ್ತು ನಗರ ಯೋಜನಾಧಿಕಾರಿ ಅಪ್ಪಾಸಾಹೇಬ ಕಾಂಬಳೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಪತ್ತೆ ಮಾಡಲು ಅಧಿಕಾರಿಗಳು ದಾಖಲೆಗಳು ಮತ್ತು ಚಿನ್ನಾಭರಣಗಳನ್ನು ಪರಿಶೀಲಿಸುತ್ತಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ದಾಳಿ ಕುರಿತು ಅಧಿಕೃತ ಹೇಳಿಕೆ ನೀಡಬೇಕಿದೆ.

ಹಾಸನದಲ್ಲೂ ಲೋಕಾಯುಕ್ತ ಅಧಿಕಾರಿಗಳ ದಾಳಿ

ಹಾಸನದಲ್ಲಿ ಕೆಪಿಟಿಸಿಎಲ್ ಜೂನಿಯರ್ ಇಂಜಿನಿಯರ್ ಹೆಚ್ ಇ.ನಾರಾಯಣ ಎಂಬುವವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್‌ಪಿ ಮಲ್ಲಿಕ್, ಡಿವೈಎಸ್‌ಪಿ ತಿರುಮಲೇಶ್, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾ ಬಾಲು, ಶಿಲ್ಪಾ ನೇತೃತ್ವದಲ್ಲಿ ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿರುವ ನಾರಾಯಣ ನಿವಾಸ ಹಾಗೂ ಗೊರೂರಿನಲ್ಲಿರುವ ಕಚೇರಿ ಮೇಲೆ ದಾಳಿಯಾಗಿದ್ದು, ದಾಖಲೆ ಪರಿಶೀನಲೆ ನಡೆಸಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು