ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿವಿಧ ಅಕ್ರಮ ಮರಳು ಗಣಿಗಾರಿಕೆ ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ, 40 ಲಕ್ಷ ಮೌಲ್ಯದ ಸರಕು ವಶ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

<strong>ವಿವಿಧ ಅಕ್ರಮ ಮರಳು ಗಣಿಗಾರಿಕೆ ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ, 40 ಲಕ್ಷ ಮೌಲ್ಯದ ಸರಕು ವಶ</strong>

ಮಂಗಳೂರು: ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಾಹನಗಳು ಸೇರಿದಂತೆ 40 ಲಕ್ಷ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಲೋಕಯುಕ್ತ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಡಿವೈಎಸ್ಪಿಗಳಾದ ಕಲಾವತಿ, ಚೆಲುವರಾಜು ಬಿ, ಇನ್ಸ್ಪೆಕ್ಟರ್ ಅಮಾನುಲ್ಲಾ ಎ ನೇತೃತ್ವದಲ್ಲಿ ಮಂಗಳೂರು ವಿಭಾಗದ ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ಕೆ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಮೂರು ತಂಡಗಳು ರಚನೆಯಾದ ನಂತರ, ಬೆಳ್ತಂಗಡಿ, ಬಂಟ್ವಾಳ ಮತ್ತು ಮುಲ್ಕಿಯ ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಿದ ಪೊಲೀಸರು, 40 ಲಕ್ಷ ಮೌಲ್ಯದ ಜೆಸಿಬಿ, ಟಿಪ್ಪರ್ ಮತ್ತು ಇತರ ಸೊತ್ತುಗಳನ್ನು ವಶಪಡಿಸಿಕೊಂಡು ಅವುಗಳನ್ನು ಆಯಾ ಪೊಲೀಸ್ ಠಾಣೆಗಳಿಗೆ ಹಸ್ತಾಂತರಿಸಲಾಗಿದ್ದು, ಅಪರಾಧಿಗಳ ವಿರುದ್ಧ ಮೂರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದ್ದಾರೆ.

ಶುಕ್ರವಾರ ನಡೆದ ಲೋಕಾಯುಕ್ತರ ನೇರ ಫೋನ್ ಇನ್ ನಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 25 ದೂರುಗಳು ಕೇಳಿಬಂದವು. ಈ ದೂರುಗಳಲ್ಲಿ ಕಂದಾಯ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಮುಡಾಗೆ ಸಂಬಂಧಿಸಿದ ದೂರುಗಳೂ ಸೇರಿವೆ ಮತ್ತು ಅವರ ವಿರುದ್ಧವೂ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಲಕ್ಷ್ಮಿ ಗಣೇಶ್ ಹೇಳಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು